Connect with us

BELTHANGADY

ಶ್ರೀ ಕ್ಷೇತ್ರ ಧರ್ಮಸ್ಥಳ ಸ್ನಾನ ಘಟ್ಟ ಮುಳುಗಡೆ ಭೀತಿ : ಭಕ್ತರಿಗೆ ಸಂಪೂರ್ಣ ನಿಷೇಧ..

Published

on

ಶ್ರೀ ಕ್ಷೇತ್ರ ಧರ್ಮಸ್ಥಳ ಸ್ನಾನ ಘಟ್ಟ ಮುಳುಗಡೆ ಭೀತಿ : ಭಕ್ತರಿಗೆ ಸಂಪೂರ್ಣ ನಿಷೇಧ..

ಉಡುಪಿ/ದ.ಕ : ಕರಾವಳಿಯಲ್ಲಿ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಜನ ಜೀವನ ಅಸ್ತವ್ಯಸ್ತ ಗೊಂಡಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದೆ.

.ಮಂಗಳೂರು – ಚಿಕ್ಕಮಗಳೂರು ರಸ್ತೆಯ ಚಾರ್ಮಾಡಿ ಘಾಟ್ 2 ಮತ್ತು 3 ನೇ ತಿರುವಿನ ಮಧ್ಯೆ ಭೂ ಕುಸಿತ ಉಂಟಾಗಿದೆ. ನಿನ್ನೆ ಸಂಜೆ ಬೃಹದಾಕಾರದ ಎರಡು ಬಂಡೆಗಳು ಕುಸಿದಿದ್ದು, ಸದ್ಯ ಒಂದು ವಾಹನ ಸಾಗುವಷ್ಟು ತೆರವು ಮಾಡಲಾಗಿದೆ.

ಸಂಜೆ 7ರ ಬಳಿಕ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು ಸ್ನಾನಘಟ್ಟದ ಮೇಲ್ಬಾಗದವರೆಗೂ ನದಿ‌ ನೀರು ಬರುತ್ತಿದೆ.

ನದಿ ನೀರು ಅಪಾಯದ ಮಟ್ಟಮೀರಿ ಹರಿಯುತ್ತಿರೋದ್ರಿಂದ ನೇತ್ರಾವತಿ ಸ್ನಾನಘಟ್ಟದ ಬಳಿಗೆ ಭಕ್ತರಿಗೆ ಸಂಪೂರ್ಷವಾಗಿ ನಿಷೇಧ ಹೇರಲಾಗಿದೆ.ಪಶ್ಚಿಮ ಘಟ್ಟದಲ್ಲಿ ಇದೇ‌ ರೀತಿ‌ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಖುಗಡೆಯಾಗುವ ಸಾಧ್ಯತೆ ಇದೆ.

ಉಡುಪಿ ವರದಿ:

ಇನ್ನು ಇಂದಿನಿಂದ ಜುಲೈ 19 ವರೆಗೆ ಉಡುಪಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್‌ನ್ನು ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ಗಳನ್ನು ನೀಡಿದೆ.

ಜನರು ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ, ಮಕ್ಕಳು, ಸಾರ್ವಜನಿಕರು ಅಪಾಯತರುವ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳದಲ್ಲಿರುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ.

BELTHANGADY

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಅಗ್ನಿ ದುರಂತ; ಬೆಂಕಿಯಲ್ಲಿ ಸುಟ್ಟು ಕರಕಲಾದ ಅಂಗಡಿ

Published

on

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ನಡೆದಿದೆ.


ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ: ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Continue Reading

BELTHANGADY

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನ ಚಿತ್ರಶೇಖರ ಎಂಬವರಿಗೆ 2013 ರಲ್ಲಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಬೆಳ್ತಂಗಡಿಯ ಪಾರೆಂಕಿ ಗ್ರಾಮದ 53 ವರ್ಷ ಪ್ರಾಯದ ಆಲ್ವಿನ್ ರೊಡ್ರಿಗಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಚಿತ್ರಶೇಖರ ಎಂಬವರಿಗೆ ಹಲ್ಲೆ ನಡೆಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಆಲ್ವಿನ್ ರೊಡ್ರಿಗಸ್‌ನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Continue Reading

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page