Connect with us

LATEST NEWS

ಪುತ್ತೂರು: ಪಟಾಕಿ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ-ಲಕ್ಷಾಂತರ ರೂ. ಮೌಲ್ಯದ ಪಟಾಕಿ ಸುಟ್ಟು ಭಸ್ಮ

Published

on

ಪುತ್ತೂರು: ಪಟಾಕಿ ಗೋಡೌನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಪಟಾಕಿ ನಾಶವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.


ಪುತ್ತೂರು ದರ್ಬೆಯ ಅಶ್ವಿನಿ ಹೊಟೆಲ್ ಮಾಲಕರಾದ ಕರುಣಾಕರ ರೈ ಮಾಲಿಕತ್ವದ ಆರಾಧ್ಯ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿದ್ದ ಪಟಾಕಿ ಗೊಡೌನ್ ನಲ್ಲಿ ಶೇಖರಿಸಿಟ್ಟ ಪಟಾಕಿ ಸಂಜೆ 6 ಗಂಟೆ ಸಮಯಕ್ಕೆ ಸಿಡಿಯಲು ಪ್ರಾರಂಭವಾಯಿತು.


ಪಟಾಕಿ ಸಿಡಿಯುವ ಶಬ್ದಕ್ಕೆ ದರ್ಬೆ ಸುತ್ತಮುತ್ತಲಿನ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಆ ಕಟ್ಟಡದಲ್ಲಿರುವ ಎಲ್ಲಾ ಅಂಗಡಿಯವರು ಬಂದ್ ಮಾಡಿ ಹೊರ ಬಂದಿದ್ದಾರೆ.

ದರ್ಬೆಯಲ್ಲಿ ಪಟಾಕಿ ಮಾಡುವವರಿಗೆ ಸೇರಿದ ಪಟಾಕಿ ಎನ್ನಲಾಗಿದೆ. ಕಟ್ಟಡದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ನಡೆದಿದೆಯೇ ಅಥವಾ ಬೆಂಕಿ ಆಕಸ್ಮಿಕ ನಡೆದಿದೆಯ ಎನ್ನುವ ಬಗ್ಗೆ ತನಿಖೆಯಿಂದ ತಿಳಿದುಬರಬೇಕಷ್ಟೇ.


ಮುಚ್ಚಲ್ಪಟ್ಟಿದ್ದ ಅಂಗಡಿಯಂತಿರುವ ಕಾಂಪ್ಲೆಕ್ಸ್ ನ ಕಾರು ಪಾರ್ಕಿಂಗ್ ನಲ್ಲಿ ಇಷ್ಟು ಪ್ರಮಾಣದ ಪಟಾಕಿ ಶೇಖರಿಸಿ ಇಡಲು ಪರವಾನಿಗೆ ನೀಡುತ್ತಾರೆಯೇ ಎನ್ನುವ ಪ್ರಶ್ನೆಯನ್ನು ನೆರೆದಿದ್ದವರು ಕೇಳುತಿದ್ದರು.


ಪುತ್ತೂರು ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

LATEST NEWS

ಬೆಟ್ಟ ಹತ್ತುವಾಗ ಕಾಲು ಜಾರಿ ಬಿ*ದ್ದು ವೃದ್ಧ ಸಾ*ವು

Published

on

ಮಂಗಳೂರು/ರಾಮನಗರ : ಬೆಟ್ಟ ಹತ್ತುವಾಗ ಕಾಲು ಜಾ*ರಿ ಬಿ*ದ್ದು ವೃದ್ಧ ಸಾ*ವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ, 65 ವರ್ಷದ ರೇವಣ್ಣ ಮೃ*ತ ದು*ರ್ದೈವಿ.

ಕುಟುಂಬ ಸಮೇತ ರೇವಣಸಿದ್ದೇಶ್ವರ ಬೆಟ್ಟಕ್ಕೆ ಬಂದಿದ್ದ ರೇವಣ್ಣ ದೇವರ ದರ್ಶನ ಮಾಡಲು ಬೆಟ್ಟ ಹತ್ತುವಾಗ ಕಾಲು ಜಾ*ರಿ ಕಂದಕಕ್ಕೆ ಬಿ*ದ್ದು, ಸ್ಥಳದಲ್ಲೇ ಕೊನೆಯು*ಸಿರೆಳೆದಿದ್ದಾರೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ವಿಷಯ ತಿಳಿದು ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರೇವಣ್ಣ ಶ*ವ ಮೇಲಕ್ಕೆತ್ತಿದ್ದಾರೆ. ಘಟನೆ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ : ಡಿಸ್ಕಸ್ ಥ್ರೋನಲ್ಲಿ ಮಂಗಳೂರಿನ ಕೃತಿ ಎನ್.ಪಿ ಪ್ರಥಮ

Published

on

ಮಂಗಳೂರು/ಬೆಂಗಳೂರು : ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ 2025-2026 ನಡೆಯಿತು.

ಡಿಸ್ಕಸ್ ಥ್ರೋ ವಿಭಾಗದಲ್ಲಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಮಾಣಿಯ ವಿದ್ಯಾರ್ಥಿನಿ  ಕೃತಿ. ಎನ್.ಪಿ ಪ್ರಥಮ ಸ್ಥಾನ ಪಡೆದಿದ್ದು,  ರಾಷ್ಟ್ರಮಟ್ಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾಳೆ.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ಕೃತಿ ಗೋಳ್ತಮಜಲು ಗ್ರಾಮದ ನಿವಾಸಿ ದಿನೇಶ್.ಬಿ ಮತ್ತು ತೇಜಾಕ್ಷಿ ದಂಪತಿ ಪುತ್ರಿ.

Continue Reading

LATEST NEWS

ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

Published

on

ಮಂಗಳೂರು/ರಾಮನಗರ : ಹಾಲಿನ ಟ್ಯಾಂಕರ್‌ ಗೆ ಹಿಂಬದಿಯಿಂದ ಡಿ*ಕ್ಕಿಯಾಗಿ ಕಾರೊಂದು ಹೊ*ತ್ತಿ ಉರಿದ ಘಟನೆ ರಾಮನಗರದ ಸಂಗಬಸವನದೊಡ್ಡಿ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಡಸ್ಟರ್ ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ವೇಗವಾಗಿ ಹೋಗುತ್ತಿದ್ದ ಚಾಲಕ ಸಂಗಬಸವನದೊಡ್ಡಿ ಬಳಿ ನಿಯಂತ್ರಣ ಕಳೆದುಕೊಂಡು ಮುಂದಿನಿಂದ ಹೋಗುತ್ತಿದ್ದ ಹಾಲಿನ ಟ್ಯಾಂಕರ್‌ ಗೆ ಗು*ದ್ದಿದ್ದಾನೆ. ಕೂಡಲೇ ಕಾರಿನಲ್ಲಿ ದಟ್ಟ ಹೊಗೆ ಕಾಣಿಸಿಕೊಳ್ಳತೊಡಗಿದೆ. ಅಪಾಯ ಅರಿತ ಕಾರಿನಲ್ಲಿದ್ದವರು ತಕ್ಷಣ ಕೆಳಕ್ಕಿಳಿದು ದೂರಕ್ಕೆ ಓಡಿದ್ದಾರೆ.  ಅದಾದ ಕೆಲವೇ ಕ್ಷಣದಲ್ಲಿ ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡು ಹೊ*ತ್ತಿ ಉ*ರಿದಿದೆ.

ಇದನ್ನೂ ಓದಿ : ಇಂದೆಂಥ ದುರವಸ್ಥೆ! 108 ಆ್ಯಂಬುಲೆನ್ಸ್ ಸಿಗದೆ ಪರದಾಟ; ಗೂಡ್ಸ್ ಟೆಂಪೋ ಮೂಲಕ ರೋಗಿ ಆಸ್ಪತ್ರೆಗೆ!

ಸ್ಥಳಕ್ಕೆ ಬಂದ ಅ*ಗ್ನಿಶಾಮಕ ದಳದ ಸಿಬ್ಬಂದಿ ಬೆಂ*ಕಿ ನಂದಿಸಿದ್ದಾರೆ. ಕಾರು ಸು*ಟ್ಟು ಕರಕಲಾಗಿದ್ದು, ಟ್ಯಾಂಕರ್‌ ನ ಹಿಂಭಾಗ ಜಖಂಗೊಂಡಿದೆ.  ಘಟನೆ ಬಗ್ಗೆ ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page