Connect with us

ಸೌದಿಅರೇಬಿಯಾದಲ್ಲಿ ಸಿಲುಕಿದ್ದ 175 ಕನ್ನಡಿಗರನ್ನು ಸ್ವಂತ ಕರ್ಚಿನಲ್ಲಿ ತಾಯ್ನಾಡಿಗೆ ಕರೆ ತಂದ ಅಲ್ತಾಫ್ ಉಳ್ಳಾಲ್ 

Published

on

ಸೌದಿಅರೇಬಿಯಾದಲ್ಲಿ ಸಿಲುಕಿದ್ದ 175 ಕನ್ನಡಿಗರನ್ನು ಸ್ವಂತ ಕರ್ಚಿನಲ್ಲಿ ತಾಯ್ನಾಡಿಗೆ ಕರೆ ತಂದ ಅಲ್ತಾಫ್ ಉಳ್ಳಾಲ್ 

ಮಂಗಳೂರು :ಕೊರೋನ ಲಾಕ್‌ಡೌನ್ ನಿಂದ ಸೌದಿ ಅರೇಬಿಯಾದಲ್ಲಿ ಸಿಲುಕಿದ್ದ ಕನ್ನಡಿಗರ ಪೈಕಿ 175 ಮಂದಿಯಿರುವ ಸಾಕೋ ಕಾಂಟ್ರಾಕ್ಟಿಂಗ್ ಕಂಪೆನಿಯ ಬಾಡಿಗೆ ವಿಮಾನ ನಿನ್ನೆ ತಡ ರಾತ್ರಿ ಮಂಗಳೂರು ತಲುಪಿತು.

ಸೌದಿ ಅರೇಬಿಯದ ದಮಾಮ್ ನಲ್ಲಿರುವ ಸಾಕೋ ಕಂಪೆನಿಯ ನಿರ್ದೇಶಕರಾದ ಅಲ್ತಾಫ್ ಉಳ್ಳಾಲ್ ಹಾಗು ಬಶೀರ್ ಸಾಗರ್ ಅವರು ಈ ವಿಮಾನದ ವೆಚ್ಚ ಭರಿಸಿ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದರು.

ದಮಾಮ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ ಅಲ್ಲಿನ ಸಮಯ 6.15 ಕ್ಕೆ ಹೊರಟ ವಿಮಾನ ತಡ ರಾತ್ರಿ 1:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಣಾಣಕ್ಕೆ ತಲುಪಿತು.

ಒಟ್ಟು 61 ಹಿರಿಯ ನಾಗರೀಕರು, 55 ಗರ್ಭಿಣಿಯರು, 20 ಮಂದಿ  ತುರ್ತು ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವವರು, ಪೋಷಕರು ನಿಧನರಾದ ಕುಟುಂಬದ ನಾಲ್ವರು, 35 ಮಕ್ಕಳು ಸಹಿತ 175  ಕನ್ನಡಿಗರು  ಈ ಮೂಲಕ ತಾಯ್ನಾಡಿಗೆ ತಲುಪಿದ್ದಾರೆ.

ಈ ಬಗ್ಗೆ ಪ್ರತಿಕ್ರೀಯಿಸಿರುವ ಸಾಕೋ ಕಂಪೆನಿಯ ಅಲ್ತಾಫ್ ಉಳ್ಳಾಲ್ ಸಂಕಷ್ಟದಲ್ಲಿನ ಕನ್ನಡಿಗರಿಗಾಗಿಯೇ ಈ ಬಾಡಿಗೆ ವಿಮಾನವನ್ನು ಕಳುಹಿಸಲಾಗು ತ್ತಿದೆ. ಎಲ್ಲ ಪ್ರಯಾಣಿಕರ ಪ್ರಯಾಣ ವೆಚ್ಚವನ್ನು ಕಂಪೆನಿಯೇ ಭರಿಸುತ್ತಿದೆ.

ಅಲ್ಲದೆ, ಮಂಗಳೂರಿನಲ್ಲಿ ಕ್ವಾರಂಟೈನ್‌ಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಜೊತೆಗೆ ಕೊರೋನ ಪರೀಕ್ಷಾ ವೆಚ್ಚವನ್ನೂ ಸಂಸ್ಥೆಯೇ ಪಾವತಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ಸಂಕಷ್ಟದಲ್ಲಿರುವ ಸಾರ್ವಜನಿಕರಿಗಾಗಿ ಬಾಡಿಗೆ ವಿಮಾನ ನೇಮಿಸಿ ಕಳಿಸಿದ್ದ ಸಾಕೋ ಕಂಪೆನಿಯ ಈ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಮಂಗಳೂರು ಮೂಲದ ಯುವ ಉದ್ಯಮಿಗಳಾದ ಅಲ್ತಾಫ್ ಉಳ್ಳಾಲ್ ಹಾಗು ಬಶೀರ್ ಸಾಗರ್ ಅವರು ಹಲವಾರು ಸಾಮಾಜಿಕ ಸೇವಾ ಚಟುವಟಿಕೆಗಳ ಮೂಲಕ ಈಗಾಗಲೇ ಗಮನ ಸೆಳೆದಿದ್ದಾರೆ,

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Published

on

ಪುತ್ತೂರು: ಕೃಷ್ಣ ಜೆ ರಾವ್ ನಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಳಿಕ ಮಗು ಕೊಟ್ಟು ಇದೀಗ ಮದುವೆ ಆಗುವುದಿಲ್ಲ ಎಂದು ವಂಚನೆ ಮಾಡಿದ ಪ್ರಕರಣದ ಸಂತ್ರಸ್ತೆ ಮನೆಗೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಂತ್ರಸ್ತೆ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಸಂತ್ರಸ್ತೆಯ ಮಗುವನ್ನು ನಾಗಲಕ್ಷ್ಮಿ ಚೌಧರಿ ಮುದ್ದಾಡಿದರು. ಅಲ್ಲದೆ ಸಂತ್ರಸ್ತೆಯ ಎಲ್ಲಾ ರೀತಿಯ ಹೋರಾಟಕ್ಕೆ ಜೊತೆಯಾಗಿರುವುದಾಗಿ ಭರವಸೆ ನೀಡಿದರು.

ಸಂತ್ರಸ್ತೆಗೆ ಶಿಕ್ಷಣ ಮುಂದುವರಿಸುವಂತೆ ಸಲಹೆ

ಅಲ್ಲದೇ, ಶಿಕ್ಷಣ ಮುಂದುವರಿಸುವಂತೆ ಸಂತ್ರಸ್ತೆಗೆ ನಾಗಲಕ್ಷ್ಮೀ ಅವರು ಸೂಚಿಸಿದರು. ಗಟ್ಟಿಯಾಗಿ ನಿಂತು ಸಂಕಷ್ಟ ಎದುರಿಸುವಂತೆ ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಮನವಿ ಮಾಡಿದರು. ಶಿಕ್ಷಣ ಮುಂದುವರಿಸಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಜೀವನದಲ್ಲಿ ಕುಗ್ಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳದಂತೆ ಸಂತ್ರಸ್ತೆಗೆ ನಾಗಲಕ್ಷ್ಮಿ ಧೈರ್ಯ ತುಂಬಿದ್ದಾರೆ.

ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ!

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಹಿಳಾ ಆಯೋಗ ತಾಯಿಯಂತೆ ಸಂತ್ರಸ್ತೆಯ ಪರ ನಿಲ್ಲುತ್ತದೆ, ಎಲ್ಲಾ ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ. ತಾಯಿ ಸ್ಥಾನದಲ್ಲಿ ನಿಂತು ಮಹಿಳೆಯ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು ಎಂದರು.

ಮುಂದುವರಿದು, ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ, ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page