Connect with us

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ.!

Published

on

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಿವಿ ಸದಾನಂದ ಗೌಡ ಅವರು, ಫ್ಲೈಟ್‌ ನಂ-ಐಎಕ್ಸ್‌ 0384 ವಿಮಾನ ದುಬೈಯಿಂದ 16.10ಕ್ಕೆ ಹೊರಟು ಮಂಗಳೂರಿಗೆ 21.10ಕ್ಕೆ ತಲುಪಲಿದೆ ಎಂದಿದ್ದಾರೆ.

ಲಾಕ್‌ ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ಏರ್ ಇಂಡಿಯಾ ವಿಮಾನವು ಮೇ 14 ರಂದು ಸಂಜೆ 4:10 ದುಬೈಯಿಂದ ಹೊರಡಲಿದ್ದು, ಮಂಗಳೂರಿಗೆ ರಾತ್ರಿ 9:10 ಕ್ಕೆ ಆಗಮಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು.

ಆದರೆ ಇದೀಗ ಕೆಲವು ಬದಲಾವಣೆಗಳಿಂದ ಎರಡು ದಿನ ಮೊದಲು ಈ ವಿಮಾನ ಹೊರಡಲಿದೆ. ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು, ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ.

ವಿಮಾನದಲ್ಲಿ ಆಗಮಿಸಲಿರುವ ಪ್ರಯಾಣಿಕರಲ್ಲಿ ಮಂಗಳೂರಿನವರಿಗೆ, ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು.

ಇನ್ನುಳಿದಂತೆ ಉಡುಪಿ ಜಿಲ್ಲೆ ಹಾಗು ಕೇರಳ ಭಾಗದ ಜನರಿಗೆ ಅವರ ಭಾಗದಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎನ್ನಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading

LATEST NEWS

ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

Published

on

ಶಿವಮೊಗ್ಗ: ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.


ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನ ವರದಿಯಾಗುತ್ತಿದ್ದು, ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.

ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ 18 ಲಕ್ಷ ರೂ ಮೌಲ್ಯದ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣ ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ.

ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು.

Continue Reading

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page