Connect with us

LATEST NEWS

ಅರಣ್ಯ ಇಲಾಖಾಧಿಕಾರಿಸಿಬ್ಬಂದಿಗಳ ಮೇಲೆ ಶ್ರೀಗಂಧ ಚೋರರಿಂದ ಮಾರಕಾಸ್ತ್ರ ದಾಳಿ: ಫೈರಿಂಗ್ ನಲ್ಲಿ ಒರ್ವ ಕಳ್ಳ ಸಾವು..!

Published

on

ತುಮಕೂರು :ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಶ್ರೀಗಂಧ ಕಳ್ಳರ ಮೇಲೆ ಅರಣ್ಯಾಧಿಕಾರಿಗಳು ಫೈರಿಂಗ್ ಮಾಡಿದ್ದಾರೆ.

ಘಟನೆಯಲ್ಲಿ ಒರ್ವ ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಕಂಪಾಲಾಪುರ ಶ್ರೀಗಂಧ ಮೀಸಲು ಆರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಉಪ ಅರಣ್ಯಾಧಿಕಾರಿ ಮಹೇಶ್ ಫೈರಿಂಗ್ ಮಾಡಿದ್ದು ಓರ್ವ ಕಳ್ಳ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರಣ್ಯ ಸಿಬ್ಬಂದಿ ಶೇಖರ್‌ ಎಂಬವರ ಎಡ ಕೈಗೆ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಹೋಬಳಿ ಕಂಪಾಲಾಪುರ ಮೀಸಲು ಆರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಶ್ರೀಗಂಧ ಪ್ಲಾಂಟ್ ಮಾಡಲಾಗಿದೆ. ಸುಮಾರು 1500ಕ್ಕೂ ಹೆಚ್ಚು ಶ್ರೀಗಂಧದ ಮರಗಳಿವೆ. ಈ ಹಿಂದೆಯೂ ಇಲ್ಲಿ ಸಾಕಷ್ಟು ಭಾರಿ ಶ್ರೀಗಂಧ ಕಳವು ಪ್ರಕರಣಗಳು ನಡೆದಿವೆ.

ಇಂದು ಶನಿವಾರ ನಸುಮಾರು ನಾಲ್ಕು ಜನ ಇರುವ ಕಳ್ಳರ ತಂಡ ಶ್ರೀಗಂಧ ಮರಗಳನ್ನು ಕತ್ತರಿಸುತ್ತಿದ್ದಾಗ ಗಸ್ತಿನಲ್ಲಿದ್ದ ಉಪ ಅರಣ್ಯಾಧಿಕಾರಿ ಮಹೇಶ್, ಸಿಬ್ಬಂದಿಗಳಾದ ಶಿವನಂಜಪ್ಪ, ಶರಣಪ್ಪ, ಶಿವನಂಜಯ್ಯ ಕಳ್ಳರನ್ನು ಹಿಡಿಯಲು ಮುಂದಾಗಿದ್ದಾರೆ.

ಈ ವೇಳೆ ಕಳ್ಳರು ಅರಣ್ಯ ಸಿಬ್ಬಂದಿಯ ಮೇಲೆ ಮಚ್ಚು ಹಾಗೂ ಕಲ್ಲುಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯಾಧಿಕಾರಿಗಳು ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿದಸಿದ್ದಾರೆ.

ಆದರೂ ಕಳ್ಳರು ಮಚ್ಚಿನಿಂದ ಹಲ್ಲೆ ಮಾಡಲು ಮುಂದಾದಾಗ ಅತ್ಮರಕ್ಷಣೆಗಾಗಿ ಉಪ ಅರಣ್ಯಾಧಿಕಾರಿ ಮಹೇಶ್ ನೇರವಾಗಿ ಕಳ್ಳರ ಮೇಲೆ ಗುಂಡು ಹಾರಿಸಿದ್ದಾಗ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಮೂವರು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಎಸ್‌ಪಿ ರಾಹುಲ್ ಕುಮಾರ್, ಡಿಎಫ್‌ಓ ಡಾ.ರಮೇಶ್, ಎಸಿಎಫ್‌ಓ ಚಿಕ್ಕರಾಜು, ತಹಸೀಲ್ದಾರ್ ಮಹಾಬಲೇಶ್ವರ್, ಡಿವೈಎಸ್‌ಪಿ ರಮೇಶ್, ಸಿಪಿಐ ಗುರುಪ್ರಸಾದ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯೂರುದುರ್ಗ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

DAKSHINA KANNADA

ಅದ್ದೂರಿಯಾಗಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

Published

on

ಮಂಗಳೂರು :  72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಸಹಕಾರ ಸಪ್ತಾಹವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಉದ್ಘಾಟಿಸಿದರು.

ಬಳಿಕ ಅವರು  ಮಾತನಾಡಿ, ಸಹಕಾರ ಕ್ಷೇತ್ರವು ಶಕ್ತಿ ಇಲ್ಲದವರಿಗೆ ಶಕ್ತಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗವು ಈ ದಿಶೆಯಲ್ಲಿ ಶ್ಲಾಘನೀಯ ಕೆಲಸ ಮಾಡಿದೆ. ಕರಾವಳಿ ಭಾಗದ ಸಾಕಷ್ಟು ಮಂದಿ ಮಹಿಳೆಯರು ಸ್ವ- ಸಹಾಯ ಸಂಘಗಳ ಮೂಲಕ ಸ್ವಾವಲಂಬಿಗಳಾಗಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ತುಂಬಿದೆ. ಶಿಕ್ಷಣ ಮತ್ತು ಇತರ ಕೆಲವು ಕ್ಷೇತ್ರಗಳಿಗೆ ಸಾಲ ಸೌಲಭ್ಯ ನೀಡಲು ವಾಣಿಜ್ಯ ಬ್ಯಾಂಕುಗಳು ಹಿಂದೇಟು ಹಾಕಿದಾಗ ಸಹಕಾರಿ ಬ್ಯಾಂಕು ಮುಂದೆ ಬಂದು ಸಾಲ ಒದಗಿಸಿ ಸಹಕರಿಸಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಗಾರ್ಮೆಂಟ್ ಫ್ಯಾಕ್ಟರಿಯನ್ನು ಆರಂಭಿಸಿ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಿ ಎಂದು ಸಲಹೆ ಮಾಡಿದರು.

ವಸ್ತು ಪ್ರದರ್ಶನ ಮಳಿಗೆ ಜಿ.ಟಿ. ದೇವೇಗೌಡ ಉದ್ಘಾಟನೆ :

ಸಪ್ತಾಹದ ಅಂಗವಾಗಿ ಏರ್ಪಡಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳನ್ನು ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಸಹಕಾರಿ ಕ್ಷೇತ್ರವನ್ನು ಭದ್ರವಾಗಿ ಉಳಿಸಿದ ಕೀರ್ತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಸಲ್ಲುತ್ತದೆ. ಇಲ್ಲಿ ಸಹಕಾರಿ ತತ್ವಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ನಡೆಯುತ್ತಿದೆ. ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಂತಹ ಚುರುಕು ಮತಿಯ ಜನರಿಂದಾಗಿ ಇದು ಸಾಧ್ಯವಾಗಿದೆ ಎಂದು ಹೇಳಿದರು.

ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ : ಎಂ.ಎನ್.ಆರ್

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ। ಎಂ.ಎನ್.ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಬ್ಯಾಂಕುಗಳ ತವರೂರು. ವಿಪರ್ಯಾಸವೆಂದರೆ ಜಿಲ್ಲೆಯಲ್ಲಿ ಹುಟ್ಟಿದ ವಾಣಿಜ್ಯ ಬ್ಯಾಂಕುಗಳು ವಿಲೀನಗೊಂಡು ನೆಲೆ ಕಳೆದುಕೊಳ್ಳುತ್ತಿವೆ. ಆದರೆ, ಸಹಕಾರಿ ಬ್ಯಾಂಕುಗಳು ಹಳ್ಳಿ ಹಳ್ಳಿಗಳಿಗೆ ಹೋಗಿ ಸೇವೆ ಒದಗಿಸುತ್ತಿವೆ. ವಾಣಿಜ್ಯ ಬ್ಯಾಂಕುಗಳಿಗೆ ಮಹಿಳೆಯರು ಹೋದರೆ ವರ್ಷ ಕಳೆದರೂ ಸಾಲ ಸಿಗುತ್ತಿಲ್ಲ. ಆದರೆ ಸಹಕಾರಿ ಬ್ಯಾಂಕುಗಳಿಗೆ ಹೋದರೆ ಅರ್ಧ ದಿನದ ಒಳಗೆ ಸಾಲ ಕೊಡುವ ವ್ಯವಸ್ಥೆ ನಮ್ಮಲ್ಲಿದೆ. ಹಾಗಾಗಿ ಸಹಕಾರಿ ಸಂಸ್ಥೆಗಳು ಜನರ ವಿಶ್ವಾಸಕ್ಕೆ ಪಾತ್ರವಾಗಿವೆ ಎಂದರು.

ಪ್ರಶಸ್ತಿ ಪ್ರದಾನ :

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಸಹಕಾರಿ ಸಂಸ್ಥೆಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ, ಎರಡು ಉತ್ತಮ ಸಹಕಾರಿ ಸಂಸ್ಥೆಗಳಿಗೆ ಮತ್ತು ಮಹಿಳಾ ಸಹಕಾರಿ ಬ್ಯಾಂಕುಗಳಿಗೆ ಪ್ರಶಸ್ತಿ ವಿತರಣೆ, ನಂದಿನಿಯ ಎರಡು ಹೊಸ ಉತ್ಪನ್ನಗಳ ಬಿಡುಗಡೆ, ಸಹಕಾರ ಶಿಕ್ಷಣ ನಿಧಿಯ ಅರ್ಪಣೆ, ಸ್ಮರಣ ಸಂಚಿಕೆ ಮತ್ತು ಸಹಕಾರಿ ಪತ್ರಿಕೆ ಬಿಡುಗಡೆ ನೆರವೇರಿತು.

ಇದನ್ನೂ ಓದಿ : 72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ

ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಯಶ್ ಪಾಲ್‌ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ ಭಂಡಾರಿ ಮತ್ತು ಐವನ್ ಡಿ’ಸೋಜಾ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು, ಕರ್ನಾಟಕ ರಾಜ್ಯ ಸಹಕಾರ ಸಂಘಗಳ  ನಿಬಂಧಕ ಟಿ.ಎಚ್.ಎಂ. ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ವ್ಯವಸ್ಥಾಪಕ ನಿರ್ದೇಶಕ ಲಿಂಗರಾಜ್, ಸಹಕಾರ ಸಂಘಗಳ ಜಂಟಿ ನಿಬಂಧಕ ಮೈಸೂರು ಪ್ರಾಂತ್ಯದ ಪ್ರಸಾದ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ ನಿಬಂಧಕ ರಮೇಶ್ ಎಚ್.ಎನ್., ಉಡುಪಿ ಜಿಲ್ಲೆಯ ಉಪ ನಿಬಂಧಕರಾದ ಲಾವಣ್ಯ, ಎಸ್.ಸಿ.ಡಿ.ಸಿ.ಸಿ.  ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪೂರ್ಣಿಮಾ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

 

Continue Reading

DAKSHINA KANNADA

72ನೇ ಅಖಿಲ ಭಾರತ ಸಹಕಾರ ಸಪ್ತಾಹ : ಆಕರ್ಷಕ ಮೆರವಣಿಗೆ

Published

on

ಮಂಗಳೂರು : ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’  ಎಂಬ ಧ್ಯೇಯ ವಾಕ್ಯದೊಂದಿಗೆ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಇಂದು ನಡೆಯಿತು. ಉದ್ಘಾಟನಾ ಕಾರ್ಯಕ್ರಮಕ್ಕೆ ಮೊದಲು ಕೊಡಿಯಾಲ್‌ ಬೈಲಿನ  ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಿಂದ ಕರಾವಳಿ ಉತ್ಸವ ಮೈದಾನ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆಗೆ  ರಾಜ್ಯ ವಿಧಾನ ಸಭೆಯ ಸ್ಪೀಕರ್‌ ಯು.ಟಿ. ಖಾದರ್ ಚಾಲನೆ ನೀಡಿದರು.

ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್ .ರಾಜೇಂದ್ರ ಕುಮಾರ್, ಸಹಕಾರಿ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ನಬಾರ್ಡ್ ಜನರಲ್ ಮ್ಯಾನೇಜರ್ ಡಾ. ಸುರೇಂದ್ರ ಬಾಬು ಮತ್ತಿತರರು ಉಪಸ್ಥಿತರಿದ್ದರು. ಮೆರವಣಿಗೆಯಲ್ಲಿ 45ಕ್ಕೂ ಅಧಿಕ ಟ್ಯಾಬ್ಲೋ, ಡೊಳ್ಳು, ಕುಣಿತ, ಕಂಗೀಲು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕಲಾ ತಂಡಗಳು ಭಾಗವಹಿಸಿದ್ದವು.

ಸಹಕಾರ ಬಂಧುಗಳು ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಪಾಲ್ಗೊಂಡಿದ್ದರು. ಸಹಕಾರ ರಥ, ಘಟೋತ್ಕಜ, ಚೆಂಡೆ, ಕೊಂಬು, ಸಹಕಾರಿ ಬಣ್ಣದ ಕೊಡೆಗಳು, ಭುವನೇಶ್ವರಿ ದೇವಿಯ ಸ್ತಬ್ಧಚಿತ್ರ, ಪುರುಷರ ಹಾಗೂ ಮಹಿಳೆಯರ ಡೊಳ್ಳು ಕುಣಿತ, ಮೊಳಹಳ್ಳಿ ಶಿವರಾವ್ ಸ್ತಬ್ಧಚಿತ್ರ, ಮಹಿಳೆಯರ ವೀರಗಾಸೆ, ಹೈನುಗಾರಿಕೆ ಸ್ತಬ್ಧಚಿತ್ರ, ಮೀನುಗಾರಿಕೆ ಸ್ತಬ್ಧಚಿತ್ರ, ಹೊನ್ನಾವರ ಬ್ಯಾಂಡ್ , ಕೆಎಂಎಫ್ – ನಂದಿನಿ ಆನ್ ವ್ಹೀಲ್ ಸ್ತಬ್ಧಚಿತ್ರ, ಸುಗ್ಗಿ ಕುಣಿತ, ತುಳುನಾಡು ವೈಭವ ಸ್ತಬ್ಧಚಿತ್ರ, ನವೋದಯ ಪ್ರಚಾರ ವಾಹನ, ಪುರವಂತಿಗೆ, ಗ್ರಾಮೀಣ ಬ್ಯಾಂಕಿಂಗ್ ಚಟುವಟಿಕೆಯ ಸ್ತಬ್ಧಚಿತ್ರ, ಚೆಂಡೆ ವಾಹನ, ಸೋಮನ ಕುಣಿತ, ಪಟ್ಟದ ಕುಣಿತ, ಶಿವನ ಮೂರ್ತಿಯ ಸ್ತಬ್ಧಚಿತ್ರ, ನವೋದಯ ಗುಂಪಿನ ಸಭೆ ನಡೆಸುವ ಸ್ತಬ್ಧಚಿತ್ರ, ಗೊರವರ ಕುಣಿತ, ಪ್ರಾಥಮಿಕ ಪತ್ತಿನ ಸಂಘದ ಸ್ತಬ್ಧಚಿತ್ರ, ಕೃಷಿ ಚಟುವಟಿಕೆಯ ಸ್ತಬ್ಧಚಿತ್ರ, ಉಳುಮೆ ಮಾಡುವ ರೈತನ ಸ್ತಬ್ಧಚಿತ್ರ, ಎಸ್ ಸಿಡಿಸಿಸಿ ಬ್ಯಾಂಕ್ ನ ಮೊಬೈಲ್ ಬ್ಯಾಂಕ್ ವಾಹನ ಮತ್ತಿತರ ಸ್ತಬ್ಧಚಿತ್ರಗಳು ಮೆರವಣಿಗೆಗೆ ಮೆರುಗು ನೀಡಿದವು.

Continue Reading

LATEST NEWS

ಬಿಜೆಪಿ ಟಿಕೆಟ್ ನಿರಾಕರಣೆ; ಆತ್ಮಹತ್ಯೆ ಮಾಡಿಕೊಂಡ ಆರ್‌ಎಸ್‌ಎಸ್ ಕಾರ್ಯಕರ್ತ

Published

on

ಮಂಗಳೂರು/ತಿರುವನಂತಪುರಂ : ಕೇರಳದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ತಿರುವನಂತಪುರಂ ಕಾರ್ಪೊರೇಷನ್‌ನ ತೃಕ್ಕಣ್ಣಪುರಂ ವಾರ್ಡ್‌ನಲ್ಲಿ ಈ ಘಟನೆ ನಡೆದಿದೆ.

ಆನಂದ್ ಕೆ ಥಂಪಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಅವರನ್ನು ವಾರ್ಡ್‌ಗೆ ಸಂಭಾವ್ಯ ಬಿಜೆಪಿ ಅಭ್ಯರ್ಥಿ ಎಂದು ಹೇಳಲಾಗಿತ್ತು, ಆದರೆ ಅಂತಿಮ ಪಟ್ಟಿಯಲ್ಲಿ ಅವರ ಹೆಸರನ್ನು ಕೈಬಿಡಲಾಗಿತ್ತು ಎನ್ನಲಾಗಿತ್ತು. ಹೀಗಾಗಿ ಆನಂದ್ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಹೆಚ್ಚು ಮಾರ್ಕ್ಸ್ ಕೊಡುತ್ತೇನೆಂದು ಉಪನ್ಯಾಸಕನಿಂದ ಲೈಂಗಿಕ ಕಿರುಕುಳ; ವಿದ್ಯಾರ್ಥಿನಿ ಏನ್ಮಾಡಿದ್ಲು?

ಆ*ತ್ಮಹ*ತ್ಯೆ ಮಾಡಿಕೊಳ್ಳುವ ಮೊದಲು ಆನಂದ್ ವಾಟ್ಸ್ಯಾಪ್ ಮೂಲಕ ಸ್ನೇಹಿತರಿಗೆ ಮೆಸೇಜ್ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ. ಅದರಲ್ಲಿ ಆನಂದ್, ಬಿಜೆಪಿ ಮತ್ತು ಆರ್‌ ಎಸ್‌ ಎಸ್ ನಾಯಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.  ಬಿಜೆಪಿ ಮತ್ತು ಆರ್‌ ಎಸ್‌ ಎಸ್ ನಾಯಕರು ಮರಳು ಮಾಫಿಯಾ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page