Connect with us

LATEST NEWS

ಪಾಕಿಸ್ತಾನದ ಮಾಜಿ ಅಧ್ಯಕ್ಷ 79 ವರ್ಷದ ಪರ್ವೇಜ್ ಮುಷರಫ್ ನಿಧನ..!

Published

on

ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಅವರು ಭಾನುವಾರ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅದ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಅವರು ಭಾನುವಾರ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

79 ವರ್ಷದ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಮುಷರಫ್ ಅವರು ದುಬೈನ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಮುಷರಫ್ ಅವರು 1943ರ ಆಗಸ್ಟ್ 11ರಂದು ದೆಹಲಿಯಲ್ಲಿ ಜನಿಸಿದರು. ಅವರು 1999 ರಲ್ಲಿ ದೇಶದಲ್ಲಿ ಮಾರ್ಷಲ್ ಕಾನೂನನ್ನು ಹೇರಿದ ನಂತರ ಮುಖ್ಯ ಕಾರ್ಯನಿರ್ವಾಹಕ ಹುದ್ದೆಯನ್ನು ವಹಿಸಿಕೊಂಡರು ಮತ್ತು 2001 ರಿಂದ 2008 ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಮಾಜಿ ಅಧ್ಯಕ್ಷರ ಕುಟುಂಬವು 1947 ರಲ್ಲಿ ನವದೆಹಲಿಯಿಂದ ಕರಾಚಿಗೆ ಸ್ಥಳಾಂತರಗೊಂಡಿತು. ಅವರು 1964 ರಲ್ಲಿ ಪಾಕಿಸ್ತಾನದ ಸೇನೆಗೆ ಸೇರಿದರು ಮತ್ತು ಕ್ವೆಟ್ಟಾದ ಸೇನಾ ಸಿಬ್ಬಂದಿ ಮತ್ತು ಕಮಾಂಡ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು.

DAKSHINA KANNADA

ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

Published

on

 

ಸಾಂದರ್ಭಿಕ ಚಿತ್ರ

ಮಂಗಳೂರು : ವಿವಿಧ ಡಾಕ್ಯುಮೆಂಟ್ಸ್‌ ಗಳಿದ್ದ ಪರ್ಸೊಂದು ಕಳೆದುಹೋಗಿದೆ. ಚೇತನ್ ಎಂಬವರು ಬಂಟ್ವಾಳದಿಂದ ಕುಂಟಲ್ ಪಲ್ಕೆಯವರೆಗೆ ಆಟೋದಲ್ಲಿ ಪ್ರಯಾಣಿಸಿದ್ದು, ಈ ವೇಳೆ ಅವರ ಪರ್ಸ್  ಜೇಬಿನಿಂದ ಕೆಳಗೆ ಬಿದ್ದಿದೆ. ಅದರಲ್ಲಿ ಆಧಾರ್ ಕಾರ್ಡ್, ಹಣ ಹಾಗೂ ಇತರೆ ಡಾಕ್ಯುಮೆಂಟ್ಸ್‌ ಗಳಿದ್ದವು. ಯಾರಿಗಾದರೂ ಪರ್ಸ್ ಸಿಕ್ಕಿದ್ದಲ್ಲಿ 9036015784 ನಂಬರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Continue Reading

LATEST NEWS

ಬ್ಯಾಡ್ಮಿಂಟನ್ ವೃತ್ತಿಜೀವನಕ್ಕೆ ವಿದಾಯ ಹೇಳಿದ ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್

Published

on

ನವದೆಹಲಿ: ಭಾರತದ ಬ್ಯಾಡ್ಮಿಂಟನ್‌ ತಾರೆ ಹಾಗೂ ಮಾಜಿ ನಂ.1 ಆಟಗಾರ್ತಿ ಸೈನಾ ನೆಹ್ವಾಲ್‌ ವೈಯಕ್ತಿಕ ಕಾರಣಗಳಿಂದ ತಮ್ಮ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ.


‘ನಾನು ಎರಡು ವರ್ಷಗಳಿಂದ ಬ್ಯಾಡ್ಮಿಂಟನ್ ಆಡುತ್ತಿಲ್ಲ. ನನ್ನ ದೇಹವು, ನನ್ನ ಆಟಕ್ಕೆ ಸ್ಪಂದಿಸುತ್ತಿಲ್ಲ. ನಾನು ನನ್ನದೇ ಉದ್ದೇಶಗಳಿಂದ ಬ್ಯಾಡ್ಮಿಂಟನ್‌ ಅಂಗಳದಿಂದ ಹಿಂದೆ ಸರಿಯುತ್ತಿದ್ದೇನೆ. ಅದನ್ನು ಅಧಿಕೃತವಾಗಿ ಹೇಳುವ ಅವಶ್ಯಕತೆಯಿಲ್ಲ’ ಎಂದು ಪಾಡ್‌ಕಾಸ್ಟ್‌ನಲ್ಲಿ ಸೈನಾ ನೆಹ್ವಾಲ್‌ ಹೇಳಿದ್ದಾರೆ.

2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಸೈನಾ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಸಮಸ್ಯೆ ಅವರ ವೃತ್ತಿ ಜೀವನಕ್ಕೆ ಪರಿಣಾಮ ಬೀರಿತ್ತು. ಈ ಗಾಯದಿಂದ ಮರಳಿದ ಅವರು, 2017ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಮತ್ತು 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದರು. ಕೊನೆಯದಾಗಿ ಅವರು 2023ರ ಸಿಂಗಪುರ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಆಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಅವರಿಗೆ ಆಡಲು ಸಾಧ್ಯವಾಗದಿರುವುದರಿಂದ ನಿವೃತ್ತಿ ನಿರ್ಧಾರಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ವಿಷನ್ ಕುಡ್ಲ ಟ್ರಸ್ಟ್ : ಜ.25 ರಂದು ಉಳ್ಳಾಲದಲ್ಲಿ ಹಗ್ಗಜಗ್ಗಾಟ ಪಂದ್ಯಾಟ

‘ನಿವೃತ್ತಿ ಘೋಷಿಸುವುದು ಅಷ್ಟು ದೊಡ್ಡ ವಿಷಯವೆಂದು ನಾನು ಭಾವಿಸಿರಲಿಲ್ಲ. ಆದರೆ, ಇನ್ನುಮುಂದೆ ಆಡಲು ಸಾಧ್ಯವಿಲ್ಲ ಎಂಬುದನ್ನು ನಾನು ಅರಿತುಕೊಂಡಿದ್ದೇನೆ. ಏಕೆಂದರೆ, ನನ್ನ ಮೊಣಕಾಲುಗಳು ನನ್ನ ಆಟಕ್ಕೆ ಸ್ಪಂದಿಸುತ್ತಿಲ್ಲ’ ಎಂದು ಹೇಳಿ ಭಾವುಕರಾಗಿದ್ದಾರೆ. ‘ಬ್ಯಾಡ್ಮಿಂಟನ್‌ನಲ್ಲಿ ವಿಶ್ವದ ಅತ್ಯುತ್ತಮ, ಆಟಗಾರರಾಗಬೇಕು ಎಂದರೆ 8-9 ಗಂಟೆಗಳ ಕಾಲ ತರಬೇತಿ ಪಡೆಯಬೇಕು. ಆದರೆ, ನನ್ನ ಮೊಣಕಾಲು ಒಂದು ಅಥವಾ ಎರಡು ಗಂಟೆಗಳಲ್ಲಿ ಬಲ ಕಳೆದುಕೊಳ್ಳುತ್ತಿದೆ. ಹಾಗಾಗಿ ಇನ್ನುಮುಂದೆ ಆಟ ನಿಲ್ಲಿಸಲು ಮುಂದಾಗಿದ್ದೇನೆ’ ಎಂದು ಹೇಳಿದರು.

Continue Reading

LATEST NEWS

ಭಾಷಣದ ವೇಳೆ ಎಡವಟ್ಟು; ಮಾಜಿ ಸಚಿವ ಶ್ರೀರಾಮುಲು ವಿರುದ್ದ ಪೋಕ್ಸೋ ಕೇಸ್!

Published

on

ಬಳ್ಳಾರಿ: ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಶ್ರೀರಾಮುಲು ಭಾಷಣದ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ಶ್ರೀರಾಮುಲು ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.


ಬಳ್ಳಾರಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೊ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಭಾಷಣದ ವೇಳೆ ಸಂವೇದನಾ ಶೀಲ ವಿವರ ಉಲ್ಲೇಖಿಸಿ, ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ದೂರಿನನ್ವಯ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪೋಕ್ಸೋ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಜ.17ರಂದು ನಡೆದ ಬಿಜೆಪಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡುವಾಗ ಶ್ರೀರಾಮುಲು ಅವರು ಸಂತ್ರಸ್ತೆಯ ಹೆಸರು ಹಾಗೂ ವಿಳಾಸವನ್ನು ಬಹಿರಂಗಪಡಿಸಿದ್ದರು. ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಡ್ರಗ್ ಸೇವಿಸಿಯೇ ಶಾಲಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳುತ್ತಾ, ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ, ತರಗತಿ ಹಾಗೂ ಓದುವ ಶಾಲೆಯ ಹೆಸರನ್ನೂ ಬಗಿರಂಗಪಡಿಸಿದ್ದರು.

ಇದನ್ನೂ ಓದಿ: ಬಾಲ್ಯದ ಗೆಳೆಯನನ್ನು ವರಿಸಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ!

‘ಶಾಸಕ ಭರತ್‌ ರೆಡ್ಡಿ ಯುವಕರನ್ನು ಯಾವ ಹಂತಕ್ಕೆ ಮಾದಕ ವ್ಯಸನಿಗಳನ್ನಾಗಿ ಮಾಡಿದ್ದಾರೆ ಎಂದರೆ, ನಾಲ್ಕೈದು ವಿದ್ಯಾರ್ಥಿಗಳು ಡ್ರಗ್ಸ್‌ ತೆಗೆದುಕೊಂಡು ನಗರದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದಾರೆ’ ಎಂದಿದ್ದರು. ಮುಂದುವರಿದು, ವಿದ್ಯಾರ್ಥಿನಿಯ ಹೆಸರು, ಶಾಲೆ, ತರಗತಿ ಮತ್ತು ಜಾತಿಯನ್ನೂ ಬಹಿರಂಗಪಡಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page