Connect with us

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

hasana

ಆತ್ಮಹತ್ಯೆ ನಾಟಕವಾಡಿ ಪ್ರಿಯಕರನ ಜೊತೆ ಎಸ್ಕೇಪ್: ಪ್ರಿಯಾಂಕಾ-ಡೇವಿಡ್ ಪ್ರೇಮಪುರಾಣ ಬಯಲು

Published

on

ಹಾಸನ: ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಪ್ರಿಯಾಂಕಾ ಎಂಬ ಮಹಿಳೆಯ ನಾಪತ್ತೆ ಪ್ರಕರಣವು ತನಿಖೆಯ ನಂತರ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಕೆರೆಯ ಬಳಿ ಆಕೆಯ ಬಟ್ಟೆ, ಬ್ಯಾಗ್ ಮತ್ತು ಚಪ್ಪಲಿಗಳು ಪತ್ತೆಯಾಗಿದ್ದವು, ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿತ್ತು.


ಅಗ್ನಿಶಾಮಕ ದಳ ಮತ್ತು ಮುಳುಗುತಜ್ಞರು ಕೆರೆಯಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ತದನಂತರ ಪೊಲೀಸರ ತನಿಖೆಯಿಂದ ಆಕೆ ತನ್ನ ಪ್ರಿಯಕರ ಡೇವಿಡ್ ಎಂಬುವವನ ಮನೆಯಲ್ಲಿ ಸುರಕ್ಷಿತವಾಗಿರುವುದು ಪತ್ತೆಯಾಗಿದೆ. 11 ವರ್ಷಗಳ ಹಿಂದೆ ಮದುವೆಯಾಗಿದ್ದ ಪ್ರಿಯಾಂಕಾ, ತನ್ನ ಪತಿ ಕೆಲಸಕ್ಕೆ ಹೋದ ಸಮಯದಲ್ಲಿ ಉತ್ತರ ಪ್ರದೇಶ ಮೂಲದ, ಡೇವಿಡ್ ಎಂಬುವವನ ಜೊತೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ.

ಡೇವಿಡ್ ಸುಮಾರು ಒಂದು ವರ್ಷದಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮೊದಲು ಹೆಂಡತಿ ಎಂದು ಹೇಳಿ ಒಬ್ಬ ಮಹಿಳೆಯೊಂದಿಗೆ ಡೇವಿಡ್ ವಾಸವಿದ್ದ. ಆ ಮಹಿಳೆ ಆರು-ಏಳು ತಿಂಗಳ ಹಿಂದೆ ಅಪ್ಪ-ಅಮ್ಮನಿಗೆ ಹುಷಾರಿಲ್ಲವೆಂದು ಹೋದವಳು ನಂತರ ಮರಳಿ ಬಂದಿರಲಿಲ್ಲ. ಅಂದಿನಿಂದ ಡೇವಿಡ್ ಒಬ್ಬನೇ ವಾಸವಾಗಿದ್ದ. ಇನ್ನು ಆ ಮಿಸ್ಸಿಂಗ್ ಮಹಿಳೆ ಮನೆಯಲ್ಲಿರುವ ವಿಷಯವೂ ನಮಗೆ ಗೊತ್ತಿರಲಿಲ್ಲ ಎಂದು ಮನೆ ಮಾಲಿಕ ಹೇಳಿದ್ದಾರೆ.

ಇದನ್ನೂ ಓದಿ: ನೆಲಮಂಗಲ ಬಳಿ ಭೀಕರ ಅಪಘಾತ; ಡಿವೈಡರ್‌ಗೆ ದಾಟಿ ಬಸ್ಸಿಗೆ ಗುದ್ದಿದ ಕಾರು; ಐವರ ದುರ್ಮರಣ

ಹಾಸನ ಮತ್ತು ಬೇಲೂರು ಠಾಣೆಯ ಪೊಲೀಸರು ಇಬ್ಬರ ಅಕ್ರಮ ಸಂಬಂಧವನ್ನು ಪತ್ತೆ ಮಾಡಿದ್ದಾರೆ. ನೇರವಾಗಿ ಕುಣಿಗಲ್‌ಗೆ ಬಂದ ಪೊಲೀಸರು ಪ್ರಿಯಾಂಕಾ ಮತ್ತು ಡೇವಿಡ್ ಇಬ್ಬರನ್ನೂ ಬಂಧಿಸಿದ್ದಾರೆ.

Continue Reading

hasana

ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

Published

on

ಹಾಸನ: ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದಿದೆ.


ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕ (29) ಎಂಬುವವರು ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದಕ್ಕೆ ಆಗಮಿಸಿದ್ದರು. ಫೆಬ್ರವರಿ 12 ರಂದು ರಾತ್ರಿ 7-30 ರ ಸುಮಾರಿಗೆ ತಮ್ಮ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕ ತಮಗೆ ಯಾರೋ ಪರಿಚಯದವರು ಸಿಕ್ಕಿರುವುದಾಗಿ ತಿಳಿಸಿದ್ದರು. ಆ ಮಾತು ಮುಗಿಯುತ್ತಿದ್ದಂತೆಯೇ ಫೋನ್‌ ಸ್ವಿಚ್‌ ಆಫ್‌ ಆಗಿದೆ.

ನಿಗೂಢವಾಗಿ ನಾಪತ್ತೆಯಾದ ಬೆನ್ನಲ್ಲೇ ಈ ವಿಚಾರವಾಗಿ ದೂರು ಕೊಟ್ಟರೂ ಸಹ ಸ್ಪಂದಿಸಿದ ಅರೆಹಳ್ಳಿ ಮತ್ತು ಬೇಲೂರು ಪೊಲೀಸರ ವಿರುದ್ಧ ಸಂಬಂಧಿಕರು ಗಂಭೀರವಾಗಿ ಆರೋಪಿಸಿದ್ದಾರೆ. ಕುಟುಂಬಸ್ಥರು ಸ್ಥಳಕ್ಕೆ ಬಂದಾಗ ಅಲ್ಲಿ ಮಹಿಳೆಯ ಬ್ಯಾಗ್, ಚಪ್ಪಲಿ ಹಾಗೂ ಒಳ ಉಡುಪುಗಳು ಪತ್ತೆಯಾಗಿರುವುದು ತೀವ್ರ ಆತಂಕ ಹಾಗೂ ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಮಹಿಳೆಯು ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ಧರಿಸಿದ್ದರು ಎಂದು ಹೇಳಲಾಗುತ್ತಿದೆ. ಒಡವೆಗಾಗಿ ದುಷ್ಕರ್ಮಿಗಳು ಮಹಿಳೆಯನ್ನ ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Continue Reading

hasana

ಹಾಸನ: ಗಾಂಜಾ ಮಾರಾಟಕ್ಕೆ ಯತ್ನ; ಮೂವರ ಬಂಧನ

Published

on

ಹಾಸನ: ಹಾಸನ ಮತ್ತು ಹಳೇಬೀಡು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹3 ಲಕ್ಷ ಮೌಲ್ಯದ 2 ಕೆಜಿಗೂ ಅಧಿಕ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


ಹಾಸನ ನಗರದ ದೇವೇಗೌಡನಗರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ಪೊಲೀಸರು ದಾಳಿ ಮಾಡಿದ್ದು, ಶ್ರೀನಗರ ನಿವಾಸಿ, ಆದಿಲ್ ಪಾಷಾ(29), ಅಂಬೇಡ್ಕರ್ ನಗರದ ನಿವಾಸಿ, ಮುಹಮ್ಮದ್ ತಬ್ರಿಜ್(29) ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳಿಂದ 1.301 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕದಿಯಲು ಹೋಗಿ ಸಿಕ್ಕಿ ಬಿದ್ದ…ಮನೆಯವರ ವಿರುದ್ಧವೇ ದೂರು ಕೊಟ್ಟ ಐನಾತಿ ಕಳ್ಳ!

ಗೋವಿಂದ(40) ಎಂಬಾತ ಹಗರೆ-ಹಳೇಬೀಡು ರಸ್ತೆಯ ಬಂಡಾರಿಕಟ್ಟೆ ಬಸ್‌ ನಿಲ್ದಾಣದ ಬಳಿ ಗಾಂಜಾ ಮಾರಾಟಕ್ಕೆ ನಿಂತಿದ್ದು, ಆತನನ್ನು ಹಳೇಬೀಡು ಪೊಲೀಸರು ಬಂಧಿಸಿದ್ದಾರೆ. ಆತನಿಂದ 510 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page