Connect with us

LATEST NEWS

ಹಿರಿಯ ನಟ, ಚಿಂತಕ ಪ್ರೊ.ಜಿ.ಕೆ ಗೋವಿಂದ ರಾವ್ ನಿಧನ

Published

on

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ಮುಂಜಾನೆ 4.45ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದು, ಹುಬ್ಬಳ್ಳಿಯ ಮುಕ್ತಿಧಾಮದಲ್ಲಿ ಬೆಳಗ್ಗೆ 8.30 ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

Published

on

ಉಡುಪಿ: ಕರಾವಳಿಯಲ್ಲಿ ಹೆಚ್ಚುತ್ತಿರುವ ಲವ್‌ ಜಿಹಾದ್‌ ಬಗ್ಗೆ ಉಡುಪಿಯಲ್ಲಿ ಇಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್‌ ಪ್ರತಿಕ್ರಿಯೆ ನೀಡಿದ್ದಾರೆ.

ಲವ್ ಜಿಹಾದ್ ಕರಾವಳಿ ಭಾಗದಲ್ಲಿ ಹೆಚ್ಚುತ್ತಿದೆ. ಮೊದಲು ಈ ಬಗ್ಗೆ ಹಿಂದುಗಳು ಜಾಗೃತರಾಗಬೇಕು. ನಮ್ಮ ಕುಟುಂಬದ ಮಕ್ಕಳನ್ನು ನಾವೇ ಸರಿಯಾಗಿ ನೋಡಿಕೊಳ್ಳಬೇಕು, ಲವ್‌ ಜಿಹಾದ್‌ನಲ್ಲಿ ದೊಡ್ಡ ಜಾಗತಿಕ ಜಾಲವೇ ಶಾಮೀಲಾಗಿದೆ ಎಂದರು.

ಬೆಂಗಳೂರಿನಲ್ಲಿ ಬ್ರಾಹ್ಮಣ ಹೆಣ್ಣುಮಗಳನ್ನು ಮದುವೆಯಾಗಿ ಮಗು ಕೊಟ್ಟು ಮತ್ತೊಂದು ಮದುವೆಯಾದ ಪ್ರಕರಣ ಇತ್ತೀಚೆಗೆ ನಡೆದಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಅಪಾಯ ಖಂಡಿತ.

ಇದನ್ನೂ ಓದಿ: ರಾಹುಲ್ ಗಾಂಧಿ ಒಬ್ಬ ಅಪ್ರಾಪ್ತ ಬುದ್ಧಿಹೀನ: ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಹೇಳಿಕೆ

ಈ ಸರಕಾರ ಅಂತೂ ಏನು ಮಾಡಲ್ಲ ಎಂದ ಯತ್ನಾಳ್, 18 ವರ್ಷ ಪ್ರಾಯವಾದರೆ ಕಾನೂನಾತ್ಮಕವಾಗಿ ಏನು ಮಾಡಲು ಬರಲ್ಲ. ತಂದೆ ತಾಯಿ ಒಪ್ಪಿಗೆ ಇಲ್ಲದೆ ಇಂತಹ ಮದುವೆಗಳಿಗೆ ಅವಕಾಶ ನೀಡಬಾರದು. ಕಾನೂನು ಜಾರಿ ಮಾಡುವ ಸರ್ಕಾರ ಬರಬೇಕು. ಆದರೆ ಇದು ಕಾಂಗ್ರೆಸ್ ನಿಂದ ಆಗಲ್ಲ ಎಂದು ನುಡಿದರು.

Continue Reading

LATEST NEWS

ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಬಸ್‌ಗಳ ನಡುವೆ ಭೀಕರ ಅಪಘಾತ; ಹಲವು ಪ್ರಯಾಣಿಕರ ಸ್ಥಿತಿ ಗಂಭೀರ

Published

on

ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಖಾಸಗಿ ಬಸ್‌ ನಡುವೆ ನಡೆದ ಭೀಕರ ಅಪಘಾತದ ಪರಿಣಾಮ 20ಕ್ಕೂ ಹೆಚ್ಚೂ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ನಡೆದಿದೆ.


ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ ಮತ್ತು ಎದರುನಿಂದ ಬಂದ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬೆಟ್ಟದ ಕಡಿದಾದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾರಾಟ ಯತ್ನ; ಮೂವರ ಬಂಧನ

ಗಾಯಗೊಂಡ ಪ್ರಯಾಣಿಕರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಮಹದೇಶ್ವರ ಬೆಟ್ಟದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ಮುಂದುವರೆಸಿದ್ದಾರೆ.

Continue Reading

DAKSHINA KANNADA

ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾರಾಟ ಯತ್ನ; ಮೂವರ ಬಂಧನ

Published

on

ಮಂಗಳೂರು : ಬೆಂಗಳೂರು ನಗರದಿಂದ ಎಂಡಿಎಂಎ ಮಾ*ದಕ ವಸ್ತುವನ್ನು ಖರೀದಿಸಿಕೊಂಡು ಬಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 11 ಲಕ್ಷದ 90 ಸಾವಿರ ರೂಪಾಯಿ ಮೌಲ್ಯದ 118.13 ಗ್ರಾಂ ತೂಕದ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ ಮತ್ತು ಒಂದು ಸ್ವಿಫ್ಟ್‌ ಕಾರು ಸಹಿತ ಒಟ್ಟು 17 ಲಕ್ಷದ 95 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಉಳ್ಳಾಲದ ಬಸ್ತಿಪಡ್ಪು ನಿವಾಸಿ 34 ವರ್ಷದ ಮುಸ್ತಫಾ ಸೀದಿಯಬ್ಬ, ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿ 28 ವರ್ಷದ ಮೈಯದ್ದಿ ಮತ್ತು ಮುಕ್ಕಚ್ಚೇರಿಯ 28 ವರ್ಷದ ಮೊಹಮ್ಮದ್ ಶಿಫಾನ್ ಬಂಧಿತ ಆರೋಪಿಗಳು. ಈ ಮೂವರು ಸೇರಿಕೊಂಡು ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ : ತ್ರಿಕೋನ ಪ್ರೇಮಕಥೆ… ಮುಖಕ್ಕೆ ಗುಂ*ಡು ಹಾ*ರಿಸಿ ಯುವತಿಯ ಕೊ*ಲೆ!

ಆರೋಪಿ ಮುಸ್ತಫಾ ಸೀದಿಯಬ್ಬನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಈ ಮಾ*ದಕ ವಸ್ತು ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page