Connect with us

LATEST NEWS

ಕೊರೋನಾ ಶುಭಸುದ್ದಿ : ಭಾರತ್ ಬಯೋಟೆಕ್​ನಿಂದ ಪ್ರಾಣಿಗಳ ಮೇಲೆ ಕೊವಾಕ್ಸಿನ್ ಕೊರೋನಾ ಲಸಿಕೆ ಯಶಸ್ವಿ..!

Published

on

ಕೊರೋನಾ ಶುಭಸುದ್ದಿ : ಭಾರತ್ ಬಯೋಟೆಕ್​ನಿಂದ ಪ್ರಾಣಿಗಳ ಮೇಲೆ ಕೊವಾಕ್ಸಿನ್ ಕೊರೋನಾ ಲಸಿಕೆ ಯಶಸ್ವಿ..!

ನವದೆಹಲಿ : ಕೊರೋನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಜಗತ್ತಿನ ಅನೇಕ ರಾಷ್ಟ್ರಗಳು ಪ್ರಯತ್ನಿಸುತ್ತಲೇ ಕೆಲವು ಈಗಾಗಲೇ ಲಸಿಕೆಗಳು ಆರಂಭದಲ್ಲೇ ಫಲ ಕಾಣದೇ ವಿಫಲವಾಗಿವೆ, ಈ ಮಧ್ಯೆ ಭಾರತದಲ್ಲೇ  ಭಾರಿ ನಿರೀಕ್ಷೇ ಇಟ್ಟುಕೊಂಡಿರುವ ಲಸಿಕೆ ಶುಭ ಸುದ್ದಿಯನ್ನು ನೀಡಿದೆ.

ಪ್ರಮುಖ ಔಷಧಿ ಸಂಸ್ಥೆಗಳಲ್ಲೊಂದಾದ ಹೈದ್ರಾಬಾದಿನ ಭಾರತ್ ಬಯೋಟೆಕ್ ಕಂಡುಹಿಡಿದಿರುವ ಕೊರೋನಾ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದ್ದು, ಆ ಲಸಿಕೆ ಯಶಸ್ವಿಯಾಗಿದೆ ಎಂದು ಘೋಷಿಸಿದೆ.

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ವೈರಾಲಜಿ ಜೊತೆ ಸೇರಿಕೊಂಡು ಭಾರತ್ ಬಯೋಟೆಕ್ ಇಂಡಿಯಾ ಲಿಮಿಟೆಡ್ ಕೊವಾಕ್ಸಿನ್ ಲಸಿಕೆಯನ್ನು ಕಂಡುಹಿಡಿದಿದೆ. ಈಗಾಗಲೇ ಈ ಲಸಿಕೆಯನ್ನು ಪ್ರಾಣಿಗಳ ಪ್ರಯೋಗ ಮಾಡಲಾಗಿದ್ದು, ಯಶಸ್ಸು ಸಿಕ್ಕಿದೆ.

ಈ ಮೂಲಕ ಭಾರತದ ಔಷಧ ಕಂಪನಿಯೊಂದು ಕೊರೋನಾ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ಬಹುತೇಕ ಯಶಸ್ಸು ಕಂಡಿದೆ.ವಿಶ್ವದಲ್ಲಿ ಸುಮಾರು 140 ಕಂಪೆನಿಗಳಲ್ಲಿ ಕೋವಿಡ್-19ಗೆ ಲಸಿಕೆ ಕಂಡುಹಿಡಿಯುತ್ತಿರುವ ಕಾರ್ಯ ನಡೆಯುತ್ತಿದೆ. ಅವುಗಳಲ್ಲಿ 16 ಕಂಪೆನಿಗಳು ಕ್ಲಿನಿಕಲ್ ಪ್ರಯೋಗದ ಹಂತ ತಲುಪಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಅವುಗಳಲ್ಲಿ ಚೀನಾ ದೇಶದಲ್ಲಿ 5, ಅಮೆರಿಕದಲ್ಲಿ 3, ಇಂಗ್ಲೆಂಡ್ ನಲ್ಲಿ 2, ಜರ್ಮನಿ, ರಷ್ಯಾ ಮತ್ತು ಆಸ್ಟ್ರೇಲಿಯಾಗಳಲ್ಲಿ ತಲಾ ಒಂದು ಕಂಪೆನಿಗಳು ಕ್ಲಿನಿಕಲ್ ಪ್ರಯೋಗ ಹಂತ ತಲುಪಿವೆ.

ಇದೀಗ ಭಾರತದ ಹೈದರಾಬಾದ್​ ಮೂಲದ ಭಾರತ್ ಬಯೋಟೆಕ್ ಸಂಸ್ಥೆಗೆ ಭಾರತ್ ಬಯೋಟೆಕ್​ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿತ್ತು.

ಇದೀಗ ಈ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೊವಾಕ್ಸಿನ್ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದ್ದು, ಯಶಸ್ವಿಯಾಗಿದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ಟ್ವೀಟ್ ಮಾಡಿದೆ.

ಭಾರತ್ ಬಯೋಟೆಕ್ ಸಂಸ್ಥೆ ಇದುವರೆಗೆ ಪೋಲಿಯೋ, ರೇಬಿಸ್, ರೊಟಾ ವೈರಸ್, ಚಿಕಾನ್ ಗುನ್ಯಾ, ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಜಿಂಕಾ ವಿರುದ್ಧದ ಕಾಯಿಲೆಗಳಿಗೆ ಲಸಿಕೆಯನ್ನು ಕಂಡುಹಿಡಿದಿದೆ. ಇದೀಗ ಮಾರಣಾಂತಿಕ ಕೊರೋನಾ ವೈರಸ್​ಗೂ ಲಸಿಕೆ ಕಂಡುಹಿಡಿಯುವ ಪ್ರಯತ್ನದಲ್ಲಿ ಬಹುತೇಕ ಯಶಸ್ಸು ಕಂಡಿದೆ.

 

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page