Connect with us

LATEST NEWS

ವಿಟ್ಲ: ಯುವತಿಯ ಮೈಮುಟ್ಟಿ ವಕೀಲನಿಂದ ಕಿರುಕುಳ-ದೂರು ದಾಖಲು

Published

on

ಮಂಗಳೂರು: ಆಫೀಸಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯ ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಾಗ ಪ್ರತಿರೋಧಿಸಿದಾಗ ಮನೆಯಲ್ಲಿ ಹೇಳಿದರೆ ಮರ್ಯಾದೆ ತೆಗೆಯುತ್ತೇನೆ ಎಂದು

ವಕೀಲನೊಬ್ಬ ಬೆದರಿಕೆ ಹಾಕಿದ ಬಗ್ಗೆ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಳೆದ ಒಂಬತ್ತು ತಿಂಗಳಿನಿಂದ ವಿಟ್ಲದಲ್ಲಿರುವ ವಿಹೆಚ್‌ ಕಾಂಪ್ಲೆಕ್ಸ್ ನಲ್ಲಿರುವ ವಕೀಲರಾದ ಉಮ್ಮರ್ ಕೆ ಎಂಬಾತನ ಕಚೇರಿಯಲ್ಲಿ ಯುವತಿಯೊಬ್ಬಳು ಕಂಪ್ಯೂಟರ್ ಟೈಪಿಂಗ್ ಕೆಲಸ ಮಾಡಿಕೊಂಡಿದ್ದಳು.

ಯುವತಿಯ ಮೇಲೆ ಆ. 16 ರಂದು ಸಾಯಂಕಾಲ ಆಫೀಸಿನಲ್ಲಿ ಯಾರೂ ಇಲ್ಲದಿರುವ ವೇಳೆ ಆರೋಪಿಯು ಸಂತ್ರಸ್ತೆಯ ಬಳಿ ಬಂದು ಮೈಮುಟ್ಟಿ, ಹಿಂದಿನಿಂದ ಬಂದು ತಬ್ಬಿಕೊಂಡಿದ್ದಾನೆ.

ಈ ವೇಳೆ ಸಂತ್ರಸ್ತೆಯು ಹೆದರಿ ಆರೋಪಿಯನ್ನು ತಳ್ಳಿ, ಈ ವಿಚಾರವನ್ನು ಮನೆಯಲ್ಲಿ ತಿಳಿಸುವುದಾಗಿ ಹೇಳಿದಾಗ ಆರೋಪಿಯು ನೀನು ಮನೆಯಲ್ಲಿ ಹೇಳಬೇಡ, ಹೇಳಿದರೆ ನಿನ್ನ ಮರ್ಯಾದೆ ಹೋಗುತ್ತದೆ ಎಂದು ಹೆದರಿಸಿದ್ದಾರೆ.

ಈ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಸಂತ್ರಸ್ತೆಯು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

DAKSHINA KANNADA

ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

Published

on

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ 20 ರಂದು ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.

ಇದನ್ನೂ ಓದಿ: ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ಜೈಲು ಆವರಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page