Connect with us

DAKSHINA KANNADA

ಕರಾವಳಿ ಸೇರಿದಂತೆ ರಾಜ್ಯದಲ್ಲಿ ನ.9ರವರೆಗೆ ಗುಡುಗು ಸಹಿತ ಮಳೆ-ಯೆಲ್ಲೋ ಅಲರ್ಟ್ ಘೋಷಣೆ

Published

on

ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಕೂಡಾ ಮಾಡಲಾಗಿದೆ. ಹಾಗೇ, ಇಂದಿನಿಂದ ರಾಜ್ಯಾದ್ಯಂತ ಚಳಿ ಕೂಡಾ ಹೆಚ್ಚಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ.

ನೆರೆಯ ರಾಜ್ಯವಾದ ತಮಿಳುನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page