Connect with us

LATEST NEWS

ಶೀಘ್ರದಲ್ಲೇ ನಿಷೇಧವಾಗಲಿದೆ ಕಿಂಗ್‌ಫಿಶರ್ ಬಿಯರ್

Published

on

ತೆಲಂಗಾಣ: ಇತ್ತೀಚಿಗೆ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ಪಾರ್ಟಿ ಅಂತೂ ಇದ್ದೇ ಇರುತ್ತದೆ. ಯುವಕರು ವಿವಿಧ ಬಗೆಯ ಬಿಯರ್‌ಗಳನ್ನು ತಂದು ಪಾರ್ಟಿ ಮಾಡುತ್ತಾರೆ. ಅದರಲ್ಲೂ ಕಿಂಗ್‌ಫಿಶರ್ ಯುವಕರು ಅಚ್ಚುಮೆಚ್ಚಿನ ಮಧ್ಯ ಆಗಿದೆ. ಆದರೆ ತೆಲಂಗಾಣದ ಬೆವರೇಜಸ್ ಕಾರ್ಪೊರೇಷನ್‌ ಲಿಮಿಟೆಡ್‌ಗೆ ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಡೆಟ್ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ಕಿಂಗ್‌ಫಿಶರ್ ಬಿಯರ್‌ ಅನ್ನು ಬಂದ್ ಮಾಡಲು ನಿರ್ಧರಿಸಿರುವುದು ತೆಲಂಗಾಣದ ಜನರಿಗೆ ಶಾಕ್ ತದಂತಾಗಿದೆ. ಯಾಕೆಂದರೆ ಈಗಿನ ಯುವಕರು ಬೇರೆ ರೀತಿಯ ಹಾಟ್ ಡ್ರಿಂಕ್ಸ್‌ಗಳಿಗಿಂತ ಬಿಯರ್‌ಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಅದರಲ್ಲಿಯು ಕಿಂಗ್‌ ಫಿಶರ್‌ ಅನ್ನು ಕುಡಿಯುವ ಯುವಕರು ತುಂಬಾ ಜನ ಇದ್ದಾರೆ. ಪಾರ್ಟಿಗಳಲ್ಲಿ ಮಧ್ಯಪ್ರಿಯರಿಗೆ ಈ ಬಿಯರ್ ಇಲ್ಲದಿದ್ದರೆ ಆಗುವುದೇ ಇಲ್ಲ ಅನ್ನುವಷ್ಟರ ಮಟ್ಟಿಗೆ ಕಿಂಗ್ ಫಿಶರ್ ತನ್ನ ಹವಾ ಕ್ರಿಯೇಟ್ ಮಾಡಿದೆ.

ತೆಲಂಗಾಣದಲ್ಲಿ ನಿಷೇಧ ಮಾಡಲು ಕಾರಣವೇನು ಗೊತ್ತೇ..?

ತೆಲಂಗಾಣದಲ್ಲಿ ಸುಮಾರು 2 ವರ್ಷಗಳಿಂದ ಕಂಪನಿಯು ತನ್ನ ಬಿಯರ್‌ನ ಮೂಲದರವನ್ನು ಹೆಚ್ಚಳ ಮಾಡಲು ಮನವಿ ಮಾಡಿದ್ದರು. ಆದರೆ ಇದುವರೆಗೆ ಇಲ್ಲಿನ ಸರ್ಕಾರ ಯಾವೂದೇ ರೀತಿಯ ಕ್ರಮವನ್ನು ಕೈಗೊಂಡಿಲ್ಲ. ಇದರಿಂದಾಗಿ ಕಂಪಡನಿಗಳಿಗೆ ಭಾರೀ ಪ್ರಮಾಣದ ನಷ್ಟವಾಗಿದೆ. ಯುನೈಟೆಡ್ ಬ್ರೆವರೀಸ್ ಬಿಯರ್‌ನ ಮೂಲ ದರವನ್ನು 2019-20ನೇ ಹಣಕಾಸು ವರ್ಷದಿಂದ TGBCL ಅನ್ನು ಪರಿಷ್ಕರಣೆ ಮಾಡಿಲ್ಲ.

2024ನೇ ನವೆಂಬರ್‌ನಲ್ಲಿ ಪ್ರತಿ ಬಾಟಲಿಗೆ 10 ರೂಪಾಯಿಯಷ್ಟು ಹೆಚ್ಚಳ ಮಾಡಲು ತೆಲಂಗಾಣ ಸರ್ಕಾರಕ್ಕೆ ಕಂಪೆನಿ ಒತ್ತಾಯಿಸಿತ್ತು. ಆದರೆ ಇನ್ನೂ ಬೆಲೆ ಏರಿಕೆ ಕಂಡಿಲ್ಲ. ಇದರಿಂದಾಗಿ ಕಂಪೆನಿ ಬಹಳಷ್ಟು ನಷ್ಟವನ್ನು ಅನುಭವಿಸುತ್ತಿದೆ. 2019 ರಲ್ಲಿ ಕಿಂಗ್ ಫಿಶರ್ ಬಿಯರ್‌ಗೆ ಇದ್ದ ಬೆಲೆಯೇ ಈಗಲೂ ಇದೆ. ಆದ್ದರಿಂದ ಅದಷ್ಟೂ ಬೇಗ ಕಿಂಗ್ ಫಿಶರ್ ಬೆಲೆಯನ್ನು ಏರಿಕೆ ಮಾಡುವವರೆಗೂ ತೆಲಂಗಾಣದಲ್ಲಿ ಈ ಬಿಯರ್‌ಅನ್ನು ಸ್ಥಗಿತಗೊಳಿಸಲು ಕಂಪೆನಿಯು ನಿರ್ಧರಿಸಿದೆ.

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page