Connect with us

ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಒಟ್ಟು 34 ಮಂದಿಗೆ ಹೋಮ್ ಕ್ವಾರಂಟೈನ್

Published

on

ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಒಟ್ಟು 34 ಮಂದಿಗೆ ಹೋಮ್ ಕ್ವಾರಂಟೈನ್

ಬಂಟ್ವಾಳ: ಕೊರೊನಾ ಪಾಸಿಟಿವ್ ಪ್ರಕರಣದಲ್ಲಿ ಬಂಟ್ವಾಳದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಒಟ್ಟು 34 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದ್ದಾರೆ.

ಅವರು ಬಿಸಿರೋಡಿನ ಮಿನಿ ವಿಧಾನ ಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಪತ್ರಕರ್ತರ ಜೊತೆ ಮಾತನಾಡಿದರು.

ಬಂಟ್ವಾಳದಲ್ಲಿ ಪಾಸಿಟಿವ್ ಪ್ರಕರಣ ಪತ್ತೆಯಾದ ಬಳಿಕ ತುರ್ತಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದ ಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಿಸಿರೋಡು ಮಿನಿ ವಿಧಾನಸೌಧದಲ್ಲಿ ನಡೆಯಿತು.

ಮೃತ ಮಹಿಳೆಯ ಕುಟುಂಬದ ಸದಸ್ಯರು, ಸಂಪರ್ಕದಲ್ಲಿರುವವರು ಹಾಗೂ ಸುತ್ತಮುತ್ತಲಿನ ಮನೆಯವರು ಸೇರಿದಂತೆ 28 ಜನರು ಮತ್ತು ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು 6 ಮಂದಿ ಹೀಗೆ ಒಟ್ಟು 34 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ.

ಘಟನೆಯ ಬಳಿಕ ಬಂಟ್ವಾಳದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌.

ಸೀಲ್ ಡೌನ್ ಅಗಿರುವ ಬಂಟ್ವಾಳ ಪೇಟೆಯ ಜನರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು.

ಅವರಿಗೆ ದಿನಬಳಕೆಯ ವಸ್ತುಗಳನ್ನು ಶಾಸಕರ ವಾರ್ ರೂಂ.ಹಾಗೂ ತಾಲೂಕು ಆಡಳಿತದ ಮೂಲಕ ನೀಡುವ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಎರಡು ದಿನಕ್ಕೊಮ್ಮೆ ಪಿ.ಡಿ.ಒ.ಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ಇಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಾಗುವುದು.

ಬೀದಿ ಬದಿಯ ವ್ಯಾಪಾರ ಕ್ಕೆ ಬ್ರೇಕ್ ಹಾಕಿ ಅಧಿಕಾರಿಗಳು ಸೂಚಿಸಿದ ಮೈದಾನದಲ್ಲಿ ಮಾತ್ರ ತರಕಾರಿ, ಹಣ್ಣು ಹಂಪಲು ಹಾಗೂ ಮೀನು ವ್ಯಾಪಾರಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದು ಈ ಬಗ್ಗೆ ಚರ್ಚೆ ನಡೆದಿದ್ದು, ಬಂಟ್ವಾಳ, ಬಿಸಿರೋಡು, ಮೆಲ್ಕಾರ್ ಮತ್ತು ಕಲ್ಲಡ್ಕದಲ್ಲಿ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಆಶಾಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ಬಗ್ಗೆ ನಿಗಾ ವಹಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.

ಪೋಲೀಸರಿಗೆ ಹೆಚ್ಚಿನ ಪವರ್

ಈ ಘಟನೆಯ ಬಳಿಕ ಮುಂದಿನ ಹತ್ತು ದಿನಗಳ ಕಾಲ ಲಾಕ್ ಡೌನ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಟ ಮಾಡುವವರ ಮೇಲೆ ನಿಗಾ ಇಡಿ. ಕಾನೂನು ಕ್ರಮವನ್ನು ಬಿಗಿಗೊಳಿಸಿ ಎಂದು ಸಂಸದರು ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಲಾಕ್ ಡೌನ್ ಅವಧಿಯಲ್ಲಿ ಹೆಚ್ಚು ಅಧಿಕಾರ ಪೋಲೀಸರಿಗೆ ನೀಡಲಾಗಿದೆ ಹಾಗಾಗಿ ಸಾರ್ವಜನಿಕರು ಸಹಕರಿಸುವಂತೆಯೂ ವಿನಂತಿ ಮಾಡಿದ್ದಾರೆ.

ಈಗಾಗಲೇ ಶಾಸಕರ ತಂಡ ಉತ್ತಮವಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಾ ಇದ್ದು ,ಟಾಸ್ಕ್ ಪೋರ್ಸ್ ಸಮಿತಿಗಳ ಮೂಲಕ ಗ್ರಾಮ ಗ್ರಾಮದ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಕ್ರಮ ಕೈಗೊಂಡಿದೆ.

ರೇಷನ್ ಕಾರ್ಡ್ ಇಲ್ಲದ ಕುಟುಂಬಗಳಿಗೆ ರೇಷನ್ ನೀಡುವ ಕೆಲಸ ಶಾಸಕರು ಮಾಡುತ್ತಾ ಇದ್ದಾರೆ.

ಒಟ್ಟಿನಲ್ಲಿ ಶಾಸಕರು ಹಾಗೂ ಅಧಿಕಾರಿಗಳ ತಂಡ ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಸಂಸದರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ತಹಶೀಲ್ದಾರ್ ರಶ್ಮಿ. ಎಸ್. ಆರ್‌, ತಾಲೂಕು ವೈದ್ಯಾಧಿಕಾರಿ ದೀಪಾ ಪ್ರಭು, ಡಿವೈ.ಎಸ್.ಪಿ.ವೆಲಂಟೈನ್ ಡಿ.ಸೋಜ, ತಾ.ಪಂ.ಇ.ಒ.ರಾಜಣ್ಣ  ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading

LATEST NEWS

ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

Published

on

ಬೆಂಗಳೂರು: ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಎರಡು ಪುಟ್ಟ ಕಂದಮ್ಮಗಳು ಕೊನೆಯುಸಿರೆಳೆದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಾನ್ಸ್‌ಟೇಬಲ್ ನಾಗನಗೌಡ ಅವರ 2 ವರ್ಷದ ಮಗಳು ವರ್ಷ ಹಾಗೂ ಅವರ ಅಣ್ಣನ ಮಗಳು 4 ವರ್ಷದ ಭಾನು ಎಂದು ಗುರುತಿಸಲಾಗಿದೆ.

ನಗರದ ಸಿಎಆರ್ ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು.

ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಶಾಲಾ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಗನಗೌಡ ಮತ್ತು ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ.

ದುರದೃಷ್ಟವಶಾತ್, ಮಕ್ಕಳಿಬ್ಬರು ನೇರವಾಗಿ ಬಸ್ಸಿನ ಚಕ್ರದ ಕೆಳಗೆ ಬಿದ್ದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಬಸ್ ಮಕ್ಕಳ ಮೇಲೆ ಹರಿದಿದೆ. ತಲೆಗೆ ಗಂಭೀರ ಗಾಯಗಳಾದ ಪರಿಣಾಮ ಎರಡು ಮತ್ತು ನಾಲ್ಕು ವರ್ಷದ ಇಬ್ಬರು ಪುಟಾಣಿಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

LATEST NEWS

ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ ಕೋಟಿ ಕೋಟಿ ವಂಚನೆ

Published

on

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ನೀಡಿದ ಭರವಸೆಯನ್ನು ನಂಬಿದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿದ್ದಾಗಿ ದೂರು ನೀಡಲಾಗಿದೆ. ಆಕೆ ಜೊತೆ ಪತಿ ಕೂಡಾ ಕೈಜೋಡಿಸಿದ್ದಾರೆ.

2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು. ಈ ನಡುವೆ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡು ಮಂಗಳೂರಿನಲ್ಲೂ ಇದೇ ರೀತಿ ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ದೊರಕಿಸಿಕೊಡುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page