Connect with us

STATE

ಹೊನ್ನಾವರ ಮೀನುಗಾರಿಕಾ ಬೋಟು ಅಪಘಾತ :25 ಮೀನುಗಾರರ ರಕ್ಷಣೆ.!

Published

on

ಹೊನ್ನಾವರ ಮೀನುಗಾರಿಕಾ ಬೋಟು ಅಪಘಾತ :25 ಮೀನುಗಾರರ ರಕ್ಷಣೆ.!

ಕಾರವಾರ : ಉತ್ತರ ಕನ್ನಡ ಜಿಲ್ಲೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಅಪಘಾತಕ್ಕೀಡಾಗಿ ಮುಳುಗಡೆಯಾಗಿದೆ.

ಹೊನ್ನಾವರ ಬಂದರಿನಿಂದ ಸೈಂಟ್ ಅಂತೋನಿ ಎಂಬ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿದ್ದು ಈ ಸಂದರ್ಭ ಬೋಟ್ ಇಲ್ಲಿನ ಅಳಿವೆಯಲ್ಲಿ ಸಮುದ್ರದ ಅಲೆಗಳ  ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿದೆ.

ಬೋಟ್ ನಲ್ಲಿ 25 ಮೀನುಗಾರರಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆಂದು ವರದಿಯಾಗಿದೆ.

ಇಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಘಟನೆ ನಡೆಯತ್ತಿದ್ದಂತೆ ಸನಿಹದಲ್ಲಿದ್ದ ಇತರ  ದೊಣಿಗಾರರಿದ್ದ ಮೀನುಗಾರರು 25 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

ಸದ್ಯ ಮುಳುಗಡೆಯಾಗಿರುವ ಬೋಟ್ ಅನ್ನು ಮೇಲಕ್ಕೆತ್ತಲು ಪ್ರಯತ್ನ ನಡೆಸಲಾಗುತ್ತಿದೆಯಾದರೂ ಸಾಧ್ಯವಾಗುತ್ತಿಲ್ಲ ಎನ್ನಲಾಗಿದ್ದು ಲಕ್ಷಾಂತರ ಮೌಲ್ಯದ ಸೊತ್ತುಗಳು ಸಮುದ್ರ ಪಾಲಾಗಿದೆ ಎನ್ನಲಾಗಿದೆ.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

Published

on

ಉತ್ತರ ಪ್ರದೇಶ: ಶಾಲೆಯ ಶಿಕ್ಷಕಿ ಒಬ್ಬರು ತರಗತಿ ನಡೆಯಬೇಕಿದ್ದ ಸಮಯದಲ್ಲಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದಿದೆ.


ವೈರಲ್ ವೀಡಿಯೋದಲ್ಲಿ ಮುಖ್ಯಶಿಕ್ಷಕಿ ಶಾಲೆಯ ನೆಲದ ಮೇಲೆ ಮಲಗಿದ್ದು, ಐದನೇ ತರಗತಿಯ ವಿದ್ಯಾರ್ಥಿನಿಯರು ತಮ್ಮ ಕೈಗಳು, ಕಾಲುಗಳು ಮತ್ತು ಲಟ್ಟಣಿಗೆಯನ್ನು ಬಳಸಿ ಅವರಿಗೆ ಮಸಾಜ್ ಮಾಡುತ್ತಿರುವುದು ಕಂಡುಬಂದಿದೆ.

ಈ ಸಮಯದಲ್ಲಿ ಮುಖ್ಯ ಶಿಕ್ಷಕಿ ಮೊಬೈಲ್ ಫೋನ್ ಬಳಸುತ್ತಿರುವುದು ಕಂಡುಬರುತ್ತದೆ. ಈ ಘಟನೆ ಶಾಲೆಯ ಪಾಠದ ಸಮಯದಲ್ಲಿ ನಡೆದಿದೆ ಎಂದೂ ಹೇಳಲಾಗುತ್ತಿದೆ. ವೀಡಿಯೋದ ಸತ್ಯಾಸತ್ಯತೆಯನ್ನು ಇನ್ನೂ ಸ್ವತಂತ್ರವಾಗಿ ಪರಿಶೀಲಿಸಲಾಗಿಲ್ಲ, ಆದರೆ ಈ ವೀಡಿಯೋ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಕ್ಕಳಿಂದ ಈ ರೀತಿ ಕೆಲಸ ಮಾಡಿಸುವುದು ತಪ್ಪು ಮತ್ತು ಇದರ ಬಗ್ಗೆ ತನಿಖೆಯಾಗಬೇಕು ಎಂದು ಕೆಲವು ಬಳಕೆದಾರರು ಬರೆದಿದ್ದಾರೆ. ಶಾಲಾ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವುದು ಅತ್ಯಂತ ನಾಚಿಕೆಗೇಡಿನ ಸಂಗತಿ, ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇನ್ನೊಬ್ಬ ಬಳಕೆದಾರರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನೀರಿನ ಟ್ಯಾಂಕ್‌ನಲ್ಲಿ ಮೂರು ಹೆಣ್ಣು ಮಕ್ಕಳ ಶವ ಪತ್ತೆ; ತಂದೆಯೇ ಕೊಂದಿರುವುದಾಗಿ ಶಂಕೆ!

ಈ ಪ್ರಕರಣ ಬೆಳಕಿಗೆ ಬಂದ ನಂತರ ಶಿಕ್ಷಣ ಇಲಾಖೆಯೂ ಎಚ್ಚೆತ್ತುಕೊಂಡಿದೆ. ವೈರಲ್ ವಿಡಿಯೋದ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಆರೋಪಗಳು ನಿಜವೆಂದು ಸಾಬೀತಾದರೆ, ಸಂಬಂಧಪಟ್ಟ ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ. ಶಾಲೆಯ ವಾತಾವರಣವು ಮಕ್ಕಳಿಗೆ ಸುರಕ್ಷಿತವಾಗಿ ಮತ್ತು ಕಲಿಕೆಗೆ ಪೂರಕವಾಗಿರಬೇಕು ಎಂದು ಸ್ಥಳೀಯರೂ ಹೇಳುತ್ತಿದ್ದಾರೆ.

Continue Reading

LATEST NEWS

ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

Published

on

ಮಂಗಳೂರು/ಹಾಸನ : ರಾಜ್ಯದಲ್ಲಿ ಹೃದ*ಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಆರೋಗ್ಯ ಇಲಾಖೆ ನೌಕರ  ಹೃದಯಾ*ಘಾತಕ್ಕೆ ಬ*ಲಿಯಾಗಿರುವ ಘಟನೆ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

42 ವರ್ಷದ ದೇವಾನಂದ್ ಮೃತಪಟ್ಟವರು. ಕಳೆದ 15 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ವಾಹನ ಚಾಲಕರಾಗಿ ದೇವಾನಂದ್ ಕಾರ್ಯ ನಿರ್ವಹಿಸುತ್ತಿದ್ದರು. ಇಂದು(ಮಾ.08) ಮುಂಜಾನೆ ಮಲಗಿದ್ದಲ್ಲಿಯೇ ಅವರಿಗೆ ಹೃದಯಾ*ಘಾತವಾಗಿದೆ.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ದೇವಾನಂದ್ ಸಾ*ವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಇನ್ನು, ದೇವಾನಂದ್ ಹಲವು ಪೌರಾಣಿಕ ನಾಟಕಗಳಲ್ಲಿ ನಟಿಸಿ ಗಮನ ಸೆಳೆದಿದ್ದರು. ತಾಯಿ, ಮಡದಿ, ಇಬ್ಬರು ಮಕ್ಕಳನ್ನು ದೇವಾನಂದ್ ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page