Connect with us

LATEST NEWS

ದಿನ ಭವಿಷ್ಯ 05-10-2025: ಇಂದಿನಿಂದ ಈ ರಾಶಿಯವರು ಆರ್ಥಿಕವಾಗಿ ಬೆಳವಣಿಗೆಯನ್ನು ಕಾಣುವರು

Published

on

2025 ಅಕ್ಟೋಬರ್ 4ರ ಶನಿವಾರವಾದ ಇಂದು, ಚಂದ್ರನ ಸ್ಥಾನ ಬದಲಾವಣೆಯಿಂದ ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭವಾಗಲಿದೆ? ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು? ಒಟ್ಟಾರೆ ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

ಮೇಷ ರಾಶಿ: ಇಂದು ಮೇಷ ರಾಶಿಯವರಿಗೆ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳ ಪ್ರಭಾವವನ್ನು ತಪ್ಪಿಸಿ. ಕುಟುಂಬದಿಂದ ಬೆಂಬಲ ಸಿಗಲಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಗಳು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತವೆ. ಇಂದು ಆರ್ಥಿಕ ಲಾಭದ ಸಾಧ್ಯತೆಗಳಿವೆ. ಮನಸ್ಸು ಸಂತೋಷವಾಗಿ ಉಳಿಯುತ್ತದೆ. ವ್ಯಾಪಾರ ಸುಧಾರಣೆಯಾಗಲಿದೆ. ಆದಾಯವೂ ಹೆಚ್ಚಲಿದೆ. ವ್ಯಾಪಾರಕ್ಕೆ ವಿದೇಶ ಪ್ರಯಾಣ ಲಾಭದಾಯಕವಾಗಿರುತ್ತದೆ. ನೀವು ಸ್ನೇಹಿತರಿಂದ ಬೆಂಬಲವನ್ನು ಪಡೆಯುತ್ತೀರಿ.

ವೃಷಭ ರಾಶಿ : ನಡೆ ಮತ್ತು ನುಡಿಯಲ್ಲಿ ಸಂಯಮವು ಅಗ್ರಮಾನ್ಯವಾಗಲಿ. ಶ್ರಮದಿಂದ ಎಲ್ಲ ಕಾರ್ಯವೂ ಆಗದು. ಉಪಾಯದಿಂದ ಮಾಡುವುದನ್ನು ಹಾಗೆಯೇ ಮಡುವುದು ಸೂಕ್ತ. ನೀವು ಬಂಧುಗಳಿಂದ ಸಹಾಯವನ್ನು ನಿರೀಕ್ಷಿಸುವಿರಿ. ನಿಮ್ಮ ಸಂಪತ್ತಿನ ಅಳೆಯುವರು. ಗುಟ್ಟನ್ನು ನೀವು ಬಿಟ್ಟಕೊಡುವಿರಿ. ನಿಮ್ಮ ತಪ್ಪು ತಿಳಿದಿಕೊಂಡವರಿಗೆ ಸರಿಯಾದ‌ ಮಾಹಿತಿಯನ್ನು ಕೊಡುವಿರಿ.‌ ಇಂದು ನಿಮ್ಮ ಆಲಸ್ಯವು ಯಶಸ್ಸಿನ ಶತ್ರುವಾಗಬಹುದು. ಸುಳ್ಳು ಹೇಳಿಕೊಂಡು ನಿಮ್ಮ ದಾಖಲೆಗಳನ್ನು ಪರಿಶೀಲಿಸಬಹುದು. ಧಾರ್ಮಿಕ ವಿಚಾರಕ್ಕೆ ನೀವು ಹೆಚ್ಚು ಒತ್ತಡುವಿರಿ. ಆರ್ಥಿಕವಾಗಿ ಬೆಳವಣಿಗೆಯನ್ನು ಕಾಣುವಿರಿ.

ಮಿಥುನ ರಾಶಿ : ದೈನಂದಿನ ಒತ್ತಡದಿಂದ ಕೊಂಚ ಬಿಡುವು ತೆಗೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ಬ್ಯಾಟರಿ ರೀಚಾರ್ಜ್ ಮಾಡಿಕೊಳ್ಳಲು ಸಂತೋಷದ ಪ್ರವಾಸ ಕಾಯುತ್ತಿದೆ. ವಿರುದ್ಧ ಲಿಂಗಿಗಳ ಮೆಚ್ಚುಗೆ ಪಡೆಯುವುದ ನಿಮಗೆ ಸಹಜವಾಗಿ ಬಂದಿದೆ. ನೀವು ಯಾರನ್ನಾದರೂ ಪ್ರೀತಿಸಿದರೆ ನೀವು ಮುಂದಡಿ ಇಡುತ್ತೀರಿ. ಸಂಜೆ ಧ್ಯಾನ ಮಾಡುವುದು ನಿಮ್ಮನ್ನು ಅಥವಾ ನಿಮ್ಮ ಪ್ರಿಯತಮೆಯನ್ನು ಸಜ್ಜುಗೊಳಿಸಿಕೊಳ್ಳುವುದು.

ಕರ್ಕಾಟಕ ರಾಶಿ:ನೀವು ಉದ್ಯೋಗಕ್ಕೆ ಆದ್ಯತೆ ನೀಡಬಹುದು. ನಿಮಗೆ ಕೊಟ್ಟ ಕೆಲಸವನ್ನು ಏಕಾಗ್ರತೆಯಿಂದ ಬೇಗನೆ ಮುಗಿಸುತ್ತೀರಿ. ನಿಮ್ಮ ಕೆಲಸ ಮಾಡುವ ಉತ್ಸಾಹ ಅತ್ಯಂತ ಉನ್ನತವಾಗಿರುತ್ತದೆ. ಇದು ಮಿತ್ರರಿಗೆ ಬಹಳ ಪ್ರಾಮುಖ್ಯತೆ ನೀಡುತ್ತದೆ ಅದು ನೀವು ಹೊರಗಡೆ ಹೋಗಿ ಅವರನ್ನು ಭೇಟಿಯಾಗುತ್ತೀರಿ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಇಂದು ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಬಡ್ತಿಗೆ ಅವಕಾಶಗಳು ಬರಬಹುದು. ಕೆಲಸದ ವ್ಯಾಪ್ತಿ ವಿಸ್ತಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಕೊಡಿ. ಆತ್ಮವಿಶ್ವಾಸ ಕಡಿಮೆಯಾಗಲಿದೆ. ತಾಳ್ಮೆಯಿಂದಿರಿ. ಅತಿಯಾದ ಕೋಪವನ್ನು ತಪ್ಪಿಸಿ. ಸಂಭಾಷಣೆಯಲ್ಲಿ ತಾಳ್ಮೆಯಿಂದಿರಿ. ವ್ಯಾಪಾರದ ಕೆಲಸದ ಆಹ್ಲಾದಕರ ಫಲಿತಾಂಶಗಳನ್ನು ನೀವು ಪಡೆಯುತ್ತೀರಿ.

ಕನ್ಯಾ ರಾಶಿ : ಕೈಯಲ್ಲಿರುವುದನ್ನು ಬಿಟ್ಟು, ಮತ್ತೊಂದನ್ನೂ ಪಡೆಯಲಾಗದು. ಔಷಧೀಯ ವ್ಯಾಪಾರದಲ್ಲಿ ಗಣನೀಯ ಪ್ರಗತಿಯು ಕಾಣಿಸುವುದು. ಕುಟುಂಬದಲ್ಲಿ ಬರುವ ಕಲಹಕ್ಕೆ ವಿರಾಮದ ಅಗತ್ಯವಿದೆ. ನಿಮ್ಮ ಬಳಿ ಅಪರಿಚಿತರು ಸಹಾಯವನ್ನು ಕೇಳಿಕೊಂಡು ಬರಬಹುದು. ಇಲ್ಲ ಎನದೇ ಅಲ್ಪವನ್ನಾದರೂ ದಾನಮಾಡಿ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಯಾವ ಹೊರೆಯನ್ನೂ ನೀವು ಹೊರಲು ಸಿದ್ಧರಾಗುವುದಿಲ್ಲ. ಮನೆಯಲ್ಲಿ ದೊಡ್ಡ ಮಟ್ಟದಲ್ಲಿ ಧಾರ್ಮಿಕ ಕಾರ್ಯವನ್ನು ಮಾಡುವ ಯೋಚನೆ‌ ಇರಲಿದೆ. ಅಧಿಕ ಕಾರ್ಯಗಳು ಇರಲಿದ್ದು ನಿಮಗೆ ಯಾವುದೂ ಸೂಚಿಸದೇ ಹೋಗಬಹುದು.

ತುಲಾ ರಾಶಿ: ಇಂದು ನಿಮ್ಮ ಮನಸ್ಸು ಚಂಚಲವಾಗಿರುತ್ತದೆ. ನಿಮ್ಮ ಪೋಷಕರಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ಮಿತ್ರರ ನೆರವಿನಿಂದ ವ್ಯಾಪಾರ ಸುಧಾರಿಸಲಿದೆ. ನಿಮ್ಮ ಉದ್ಯೋಗದಲ್ಲಿ ವಿದೇಶ ಪ್ರವಾಸಕ್ಕೆ ಅವಕಾಶ ಸಿಗಬಹುದು. ಪ್ರಯಾಣ ಲಾಭದಾಯಕವಾಗಲಿದೆ. ತಾಯಿಯ ಆರೋಗ್ಯ ಸುಧಾರಿಸಲಿದೆ. ಬಟ್ಟೆಯ ಬಗ್ಗೆ ಆಸಕ್ತಿ ಹೆಚ್ಚಾಗಬಹುದು. ಕುಟುಂಬದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಬಹುದು. ಇಂದು ಓಡಾಟ ಹೆಚ್ಚು ಇರುತ್ತದೆ.

ವೃಶ್ಚಿಕ ರಾಶಿ: ಇಂದು ನೀವು ಹಳೆಯ ಹೂಡಿಕೆಗಳಿಂದ ಉತ್ತಮ ಲಾಭವನ್ನು ಪಡೆಯುತ್ತೀರಿ. ಆರ್ಥಿಕ ಲಾಭಕ್ಕೆ ಹಲವು ಅವಕಾಶಗಳು ದೊರೆಯಲಿವೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ನೀವು ಪರಿಹಾರವನ್ನು ಪಡೆಯುತ್ತೀರಿ. ಕಚೇರಿ ಕೆಲಸಗಳನ್ನು ಆತ್ಮವಿಶ್ವಾಸದಿಂದ ನಿಭಾಯಿಸುವಿರಿ. ಮನೆಯಲ್ಲಿ ಶುಭ ಕಾರ್ಯಗಳನ್ನು ಆಯೋಜಿಸಬಹುದು. ಮನೆ ಖರೀದಿಗೆ ಅಗತ್ಯವಾದ ದಾಖಲೆಗಳನ್ನು ಬಹಳ ಎಚ್ಚರಿಕೆಯಿಂದ ಓದಿ. ಹಣಕಾಸಿನ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಹಣವನ್ನು ಬುದ್ಧಿವಂತಿಕೆಯಿಂದ ನಿಭಾಯಿಸಿ.

ಧನು ರಾಶಿ:ಹಣ ಇಂದು ಸುಲಭವಾಗಿ ಕೈಜಾರಿ ಹೋಗುತ್ತದೆ. ಅನಗತ್ಯ ವೆಚ್ಚ ನಿವಾರಿಸಲು ಯತ್ನಿಸಿ. ಇಡೀ ದಿನ ಹಣ ನಿರ್ವಹಣೆಗೆ ಹೋಗುತ್ತದೆ, ಸಂಜೆ ಅದರೊಂದಿಗೆ ಸಾಕಷ್ಟು ಸಕಾರಾತ್ಮಕ ಶಕ್ತಿ ತರುತ್ತದೆ. ನೀವು ಕುಳಿತು ನಿರಾಳರಾಗಲು ಬಯಸುತ್ತೀರಿ.

ಮಕರ ರಾಶಿ :ನಿಮ್ಮ ಕೆಲಸವಾಗಲು ಅತ್ತಿಂದ ಇತ್ತ ಓಡಾಡಿದ ನಂತರ ನೀವು ಕುಳಿತು ಭವಿಷ್ಯದ ಕಾರ್ಯಯೋಜನೆ ರೂಪಿಸಲು ದಿನವನ್ನು ಕಳೆಯುತ್ತೀರಿ. ದಿಢೀರ್ ಮತ್ತು ಅನಿರೀಕ್ಷಿತ ಲಾಭಗಳು ಬರಲಿವೆ, ಆದರೆ ಅದನ್ನು ಎಷ್ಟು ಚೆನ್ನಾಗಿ ಬಳಸಿಕೊಳ್ಳುತ್ತೀರಿ ಎಂದು ತಿಳಿದಿರಬೇಕು.

ಕುಂಭ ರಾಶಿ: ಇಂದು ಹಣವನ್ನು ಬುದ್ಧಿವಂತಿಕೆಯಿಂದ ನಿರ್ವಹಿಸಿ. ಹೊಸ ಹೂಡಿಕೆ ಅವಕಾಶಗಳ ಮೇಲೆ ನಿಗಾ ಇರಿಸಿ. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅದೃಷ್ಟವು ನಿಮ್ಮ ಪರವಿರುತ್ತದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಅಪಾರ ಯಶಸ್ಸನ್ನು ಸಾಧಿಸುವಿರಿ. ವಿದೇಶ ಪ್ರಯಾಣದ ಅವಕಾಶವಿರುತ್ತದೆ. ನಿಮ್ಮ ಕೆಲಸವು ಆಹ್ಲಾದಕರ ಫಲಿತಾಂಶಗಳನ್ನು ನೀಡುತ್ತದೆ. ಹೊಸ ಆಸ್ತಿ ಖರೀದಿಗೆ ಇಂದು ಉತ್ತಮ ದಿನ. ಇಂದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವು ಜಾಗೃತಗೊಳ್ಳುತ್ತದೆ. ನಿಮ್ಮ ಸಂಗಾತಿಯಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವೃತ್ತಿಯಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.

ಮೀನ ರಾಶಿ: ಇಂದು ಹಳೆಯ ಆಸ್ತಿಯನ್ನು ಮಾರಾಟ ಮಾಡುವ ಮೂಲಕ ಅಥವಾ ಬಾಡಿಗೆಗೆ ನೀಡುವ ಮೂಲಕ ಆರ್ಥಿಕ ಲಾಭವಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಅಪಾರ ಯಶಸ್ಸನ್ನು ಪಡೆಯುತ್ತೀರಿ. ವೃತ್ತಿ ಜೀವನದಲ್ಲಿ ಎಲ್ಲವೂ ಚೆನ್ನಾಗಿರುತ್ತದೆ. ದೂರ ಪ್ರಯಾಣದ ಅವಕಾಶವಿರುತ್ತದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ನಿಮ್ಮ ಗುರಿಗಳನ್ನು ಸಾಧಿಸಲು ನೀವು ಪ್ರೇರಿತರಾಗಿ ಕಾಣಿಸಿಕೊಳ್ಳುತ್ತೀರಿ. ನೀವು ಕಚೇರಿಯಲ್ಲಿ ಹಿರಿಯರಿಂದ ಬೆಂಬಲವನ್ನು ಪಡೆಯುತ್ತೀರಿ. ವೃತ್ತಿಯಲ್ಲಿ ಪ್ರಗತಿಯ ಹಾದಿ ಸುಲಭವಾಗುತ್ತದೆ. ಬಹಳ ದಿನಗಳಿಂದ ಬಾಕಿ ಉಳಿದಿರುವ ಹಣ ವಾಪಸ್ ಬರಲಿದೆ.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page