Connect with us

LATEST NEWS

ಬ್ರಹ್ಮಾವರದಲ್ಲಿ ಭೀ*ಕರ ರಸ್ತೆ ಅಪಘಾತ; ಅಟೋಗೆ ಲಾರಿ ಡಿಕ್ಕಿಯಾಗಿ ನಾಲ್ವರಿಗೆ ಗಂ*ಭೀರ ಗಾಯ

Published

on

ಉಡುಪಿ: ಬ್ರಹ್ಮಾವರದ ಖಾಸಗಿ ಆಸ್ಪತ್ರೆಯ ಸಮೀಪ ಮತ್ತೊಂದು ಭೀ*ಕರ ಅಪಘಾತ ಸಂಭವಿಸಿ ನಾಲ್ವರು ಗಂ*ಭೀರ ಗಾಯಗೊಂಡಿದ್ದಾರೆ.

ವಾರದ ಹಿಂದೆಯಷ್ಟೇ ಇದೇ ಜಾಗದಲ್ಲಿ ಶಾಲಾ ಬಾಲಕನೊಬ್ಬ ರಸ್ತೆ ಅಪಘಾತದಲ್ಲಿ ಬ*ಲಿಯಾಗಿದ್ದು, ಈ ಹಿಂದೆಯೂ ಇಲ್ಲಿ ಸಣ್ಣಪುಟ್ಟ ಅಪಘಾತಗಳು ನಡೆದಿದೆ.

ಇಂದು ಅಟೋ ಒಂದು ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಅಟೋಗೆ ಡಿ*ಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಟೋದಲ್ಲಿದ್ದ ನಾಲ್ವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಭಾಗದಲ್ಲಿ ಹೆದ್ದಾರಿ ನಿರ್ಮಾಣದ ವೇಳೆಯಲ್ಲೇ ಜನರು ಫ್ಲೈ ಓವರ್ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರಾದ್ರೂ ಅದು ಈಡೇರಿರಲಿಲ್ಲ. ಹೆದ್ದಾರಿ ನಿರ್ಮಾಣವಾದ ಬಳಿಕ ರಸ್ತೆ ದಾಟುವ ಸಂದರ್ಭದಲ್ಲಿ ಹಲವಾರು ಅಪಘಾತಗಳು ಸಂಭವಿಸಿದ್ರೂ ಇದಕ್ಕೊಂದು ಸೂಕ್ತ ಪರಿಹಾರ ಕೂಡಾ ಕಲ್ಪಿಸಲಾಗಿಲ್ಲ.

ಹೀಗಾಗಿ ಇಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿದ್ದು, ಜನರು ಜೀವ ಭಯದಲ್ಲೇ ರಸ್ತೆ ದಾಟಬೇಕಾದ ಪರಿಸ್ಥಿತಿ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅದೃಷ್ಟವಶಾತ್ ಇಂದು ನಡೆದ ಭೀ*ಕರ ಅಪಘಾತದಲ್ಲಿ ಯಾವುದೇ ಜೀವ ಹಾನಿ ಆಗಿಲ್ಲವಾದ್ರೂ ಹೆದ್ದಾರಿ ಇಲಾಖೆ ಇನ್ನಾದ್ರೂ ಇಲ್ಲಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.

LATEST NEWS

ಕಾರಿಗೆ ಲಾರಿ ಡಿಕ್ಕಿ ಹೊಡೆದು ಐವರ ಸಾವು

Published

on

ಬೆಂಗಳೂರು: ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋಟಪಲ್ಲಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

Continue Reading

LATEST NEWS

ಪರೀಕ್ಷಾರ್ಥಿಗಳಿಗೆ ಜನಿವಾರ, ಮಂಗಳಸೂತ್ರ ನಿಷೇಧ; ಆದೇಶ ಹಿಂಪಡೆದುಕೊಂಡ ರೈಲ್ವೇ ಇಲಾಖೆ

Published

on

ಮಂಗಳೂರು/ಬೆಂಗಳೂರು : ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗಲು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕೆಂದು ಸೂಚಿಸಿದ ವಿಚಾರ  ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಈ ವಿಚಾರವಾಗಿ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.

ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ರೈಲ್ವೆ ಸಚಿವ ವಿ.ಸೋಮಣ್ಣ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ಎಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ.

ಇದನ್ನೂ ಓದಿ : ರಾಜ್ಯಪಾಲರ ಭೇಟಿಯಾದ ಬಿಜೆಪಿ; 18 ಶಾಸಕರ ಅಮಾನತು ರದ್ದುಗೊಳಿಸಲು ಮನವಿ

ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ಇಂದು ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ  ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಎಂದು ಬರೆದುಕೊಂಡಿದ್ದಾರೆ.



Continue Reading

LATEST NEWS

ರಾಜ್ಯಪಾಲರ ಭೇಟಿಯಾದ ಬಿಜೆಪಿ; 18 ಶಾಸಕರ ಅಮಾನತು ರದ್ದುಗೊಳಿಸಲು ಮನವಿ

Published

on

ಮಂಗಳೂರು/ಬೆಂಗಳೂರು : ವಿಪಕ್ಷ ಬಿಜೆಪಿ ಸೋಮವಾರ(ಎ.28) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿದೆ. ವಿಧಾನಸಭೆಯಿಂದ ತನ್ನ 18 ಶಾಸಕರ ಅಮಾನತು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದೆ.

ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಅಮಾನತು ವಿಚಾರವಾಗಿ ಮಧ್ಯ ಪ್ರವೇಶಿಸಲು ಮನವಿ ಮಾಡಿದ್ದಾರೆ.

ಶಾಸಕರ ಅಮಾನತು ಮರುಪರಿಶೀಲಿಸುವಂತೆ ಮತ್ತು ಜನಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ಮತ್ತೆ ವಹಿಸಿಕೊಳ್ಳಲು ಅನುವು ಮಾಡಿಕೊಡುವಂತೆ ಸ್ಪೀಕರ್ ಯು.ಟಿ.ಖಾದರ್‌ಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ.

ಈ ಅಮಾನತು ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಖಾದರ್‌ಗೆ ನಿರ್ದೇಶನ ನೀಡಲು ಮನವಿಯಲ್ಲಿ ಹೇಳಲಾಗಿದೆ. ಅಮಾನತು ಆದೇಶ ರದ್ದು ಮಾಡುವಂತೆ ಈ ಹಿಂದೆ ಬಿಜೆಪಿ ಶಾಸಕರು ಪತ್ರದ ಮೂಲಕ, ಅಲ್ಲದೇ ಭೇಟಿಯಾಗಿಯೂ ಮನವಿ ಸಲ್ಲಿಸಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲವಾದ್ದರಿಂದ ರಾಜ್ಯಪಾಲರನ್ನು ಬಿಜೆಪಿ ನಾಯಕರು ಭೇಟಿ ಮಾಡಿದ್ದಾರೆ.

ಮಾರ್ಚ್ 21 ರಂದು ಕಲಾಪದ ವೇಳೆ ಭಾರೀ ಕೋಲಾಹಲವೇ ಸೃಷ್ಟಿಯಾಗಿತ್ತು. ಹನಿಟ್ರ್ಯಾಪ್ ಪ್ರಕರಣವನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸದನದ ಬಾವಿಗಿಳಿದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ : ತಮಿಳುನಾಡು ಸರ್ಕಾರದ ಇಬ್ಬರು ಸಚಿವರ ರಾಜೀನಾಮೆಗೆ ಕಾರಣ ಏನು ಗೊತ್ತಾ..!?

ಸ್ಫೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಾಗೂ ಮಸೂದೆಯನ್ನು ಹರಿದು ಪ್ರತಿಗಳನ್ನು ಸ್ಪೀಕರ್ ಮೇಲೆಸೆದ ಆರೋಪದ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ 6 ತಿಂಗಳ ಕಾಲ ಅಮಾನತುಗೊಳಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page