Connect with us

FILM

‘ಆ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ’: ಬರ್ತ್‌ಡೇ ಪಾರ್ಟಿ ಬಗ್ಗೆ ಮಂಗ್ಲಿ ಸ್ಪಷ್ಟನೆ

Published

on

ಮಂಗಳೂರು/ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ ಅವರ ಬರ್ತ್‌ಡೇ ಪಾರ್ಟಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಇದರ ಬಗ್ಗೆ ಮಂಗ್ಲಿ ಕೊನೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.


ಹೈದರಾಬಾದ್‌ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಜೂನ್ 10ರಂದು ಗಾಯಕಿ ಮಂಗ್ಲಿಯ ಬರ್ತಡೇ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಹಲವರು ಭಾಗಿಯಾಗಿದ್ದರು. ಮ್ಯೂಸಿಕ್, ಡ್ರಿಂಕ್ಸ್ ಒಳಗೊಂಡಂತೆ ಬಲು ಜೋರಾಗಿ ಪಾರ್ಟಿಯನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: Watch video: ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಪ್ರಕರಣ; ಪೊಲೀಸರಿಗೆ ಗಾಯಕಿ ಅವಾಜ್

ಇದೇ ಸಂದರ್ಭದಲ್ಲಿ ತಡರಾತ್ರಿ ಪೊಲೀಸರು ಮಂಗ್ಲಿ ಅವರ ಪಾರ್ಟಿಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಮಾದಕ ವಸ್ತುಗಳು ಪತ್ತೆಯಾಗಿದೆ. ಇದಲ್ಲದೆ ಸ್ಥಳದಲ್ಲಿ ವಿದೇಶಿ ಮದ್ಯ ಕೂಡ ಪತ್ತೆಯಾಗಿದೆ. ವಿದೇಶಿ ಮದ್ಯವನ್ನು ವಶಕ್ಕೆ ಪಡೆದ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದರು. ಆದರೆ ಈ ಬಗ್ಗೆ ಮಂಗ್ಲಿ ಕೊನೆಗೂ ಸ್ಪಷ್ಟನೆ ಕೊಟ್ಟಿದ್ದಾರೆ.

 

ಈ ಬಗ್ಗೆ ಮಾತನಾಡಿರುವ ಅವರು ‘ಆಲ್ಕೋಹಾಲ್ ನೀಡುವ ವಿಚಾರದಲ್ಲಿ ಒಪ್ಪಿಗೆ ಪಡೆಯಬೇಕು ಎನ್ನುವ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ. ನಾನು ಹಾಗೆ ಮಾಡಲಿಲ್ಲ ಎಂಬ ಕೊರಗು ಇದೆ. ಯಾರಾದರೂ ನನಗೆ ಮಾರ್ಗದರ್ಶನ ನೀಡಿದ್ದರೆ, ನಾನು ಹಾಗೆ ಮಾಡುತ್ತಿದ್ದೆ. ಪಾರ್ಟಿಯಲ್ಲಿ ಯಾವುದೇ ವಿದೇಶಿ ಮದ್ಯ ಇರಲಿಲ್ಲ. ಲಭ್ಯವಿದ್ದದ್ದು ಸ್ಥಳೀಯ ಮದ್ಯ ಮಾತ್ರ. ಪೊಲೀಸರು ಸಹ ಇದನ್ನೇ ದೃಢಪಡಿಸಿದ್ದಾರೆ. ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ ಎಂದು ಕೂಡ ಹೇಳಿದ್ದಾರೆ’ ಎಂದು ಮಂಗ್ಲಿ ಹೇಳಿದ್ದಾರೆ.

FILM

ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯ ‘ಜೈ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

Published

on

ಮಂಗಳೂರು: ನಟ, ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಬಹುನಿರೀಕ್ಷಿತ ಸಿನಿಮಾ ‘ಜೈ’. ಗಿರಿಗಿಟ್, ಗಮ್ಜಾಲ್, ಸರ್ಕಸ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ರೂಪೇಶ್ ಶೆಟ್ಟಿ ಇದೀಗ ‘ಜೈ’ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಬಿಗ್ ಬಜೆಟ್ ಸಿನಿಮಾವಾಗಿರುವ ‘ಜೈ’ ಚಿತ್ರ ಯಾವಾಗ ತೆರೆಗೆ ಬರುತ್ತೋ ಎಂದು ಕಾದವರಿಗೆ ಸಿಹಿ ಸುದ್ದಿ ಕೊಟ್ಟಿದೆ ಚಿತ್ರತಂಡ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ನವೆಂಬರ್ 14 ರಂದು ಚಿತ್ರ ತುಳು ಹಾಗೂ ಕನ್ನಡ ಎರಡೂ ಭಾಷೆಗಳಲ್ಲೂ ತೆರೆಗೆ ಅಪ್ಪಳಿಸಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟನಾಗಿದ್ದು, ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದು, ಅದ್ವಿತಿ ಶೆಟ್ಟಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಈ ಚಿತ್ರದ ಮೂಲಕ ಕೋಸ್ಟಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದು ಸುದ್ದಿಯಾಗಿತ್ತು. ಇವರೊಂದಿಗೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರ್ ಮೊದಲಾದವರು ಪಾತ್ರವಾಗಿದ್ದಾರೆ.

ಕತೆ, ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದು, ವಿನುತ್ ಕೆ. ಕ್ಯಾಮರಾ ವರ್ಕ್, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತ ಚಿತ್ರಕ್ಕಿದೆ. ಆರ್. ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಡಿ ಚಿತ್ರ ನಿರ್ಮಾಣವಾಗಿದೆ.

Continue Reading

FILM

ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ

Published

on

ಕುಂದಾಪುರ: ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ-1 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಅವರು, ಸದ್ಯ ಕುಂದಾಪುರದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲಿಯೇ ಅವರು ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಂಡಿದ್ದಾರೆ. ಪ್ರೀತಿಯ ಮಡದಿ ಪ್ರಗತಿ ಶೆಟ್ಟಿ ಅವರು ಪತಿ ರಿಷಬ್ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಅವರಿಗೆ ದುರ್ಗಾಸ್ತಮಾನ ಮತ್ತು ಸೀತಾ ಪುಸ್ತಕಗಳನ್ನು ಗಿಫ್ಟ್ ನೀಡಲಾಯಿತು.

ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಪೊಲೀಸ್ ಪೇದೆ ಹಣದಾಸೆಗೆ ಬಲಿಯಾದ್ಲು ಪತ್ನಿ?

ನಟ ರಿಷಬ್ ಶೆಟ್ಟಿ ಬರ್ತ್ ಡೇಯಲ್ಲಿ ವಿಜಯ್ ಕಿರಗಂದೂರು, ಚೆಲುವೇಗೌಡ ಸೇರಿದಂತೆ ಟೀಮ್ ಸದಸ್ಯರು ಭಾಗಿಯಾಗಿದ್ದಾರೆ. ಅಲ್ಲದೇ ನಟ ರಿಷಬ್ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆಯು ಕಾಂತಾರ ಚಾಪ್ಟರ್ 1 ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟಿದ್ದಾರೆ.

Continue Reading

FILM

ಡಿವೈನ್ ಸ್ಟಾರ್ ಹುಟ್ಟುಹಬ್ಬಕ್ಕೆ ‘ಕಾಂತರ-1’ ಚಿತ್ರ ತಂಡದಿಂದ ಹೊರಬಿತ್ತು ಬಿಗ್ ಅಪ್‌ಡೇಟ್

Published

on

ಡಿವೈನ್ ಸ್ಟರ್ ರಿಷಭ್ ಶೆಟ್ಟಿ ಅವರ ಜನ್ಮದಿನದಂದೇ ‘ಕಾಂತರ: ಚಾಪ್ಟರ್1’ ಕಡೆಯಿಂದ ದೊಡ್ಡ ಅಪ್‌ಡೇಟ್ ಒಂದು ಬಂದಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ.


ರಿಷಭ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಹಾಗೂ ಸ್ನೇಹಿತರು ಅವರಿಗೆ ಬರ್ತ್‌ಡೇ ವಿಶ್ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ‘ಕಾಂತಾರ-1’ ಕಡೆಯಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ನಟ ರಿಷಬ್​ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1​ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಕಲರಿಯಪಟ್ಟು ಲುಕ್​ನಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಆಗಿದೆ.

ಇದನ್ನೂ ಓದಿ: ನಟ ದರ್ಶನ್ ಬಳಿ ಕ್ಷಮೆ ಕೇಳಿದ ಮಡೆನೂರು ಮನು

ಸಾಲು ಸಾಲು ಸರಣಿ ಅವಘಡಗಳಿಂದ ಸಿನಿಮಾ ರಿಲಿಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಈ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಬ್ಬಿದ್ದವು. ಆದರೆ ಸಿನಿಮಾ ತಂಡ ಇದನ್ನು ಅಲ್ಲಗಳೆದಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ‘ಕಾಂತಾರ-1’ ಅದ್ದೂರಿಯಾಗಿ ಅಕ್ಟೋಬರ್-2ರಂದು ರಿಲೀಸ್ ಆಗಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page