Connect with us

LATEST NEWS

ಬೇಕಿದ್ರೆ ಆಡಿ, ಇಲ್ಲಾಂದ್ರೆ ಹೊರ ನಡೀರಿ…‌ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿಗೆ ಗಡುವು ನೀಡಿದ ಐಸಿಸಿ!

Published

on

ನವದೆಹಲಿ: ಭಾರತದಿಂದ ತನ್ನ ಪಂದ್ಯಗಳನ್ನು ಬೇರೆ ಕಡೆಗೆ ಶಿಫ್ಟ್‌ ಮಾಡುವ ಬಾಂಗ್ಲಾದೇಶ ಬೇಡಿಕೆ ಈಗ ಅಂತಿಮ ಹಂತಕ್ಕೆ ಬಂದು ತಲುಪಿದಂತೆ ಕಾಣುತ್ತಿದೆ. ವಿಶ್ವಕಪ್‌ನಲ್ಲಿ ಭಾಗವಹಿಸುವಿಕೆಯ ಬಗ್ಗೆ ಅಂತಿಮ ನಿರ್ಧಾರವನ್ನು ತಿಳಿಸಲು ಬಾಂಗ್ಲಾದೇಶ್‌ ಕ್ರಿಕೆಟ್‌ ಬೋರ್ಡ್‌ಗೆ ಐಸಿಸಿ ಗಡುವು ನೀಡಿದೆ.


ಶನಿವಾರ (ಜ.17) ದಂದು ನಡೆದ ಸಭೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಬಿಸಿಬಿಗೆ ಗಡುವು ನೀಡಿದೆ. ಐಸಿಸಿ ಹಾಗೂ ಬಿಸಿಬಿ ನಡುವೆ ಒಂದು ವಾರದಲ್ಲಿ ನಡೆದ ಇದು ಎರಡನೇ ಸಭೆ ಆಗಿತ್ತು. ಭದ್ರತಾ ಕಾರಣಗಳನ್ನು ನೀಡಿ ಬಿಸಿಬಿ ಟಿ20 ವಿಶ್ವಕಪ್‌ನ ಪಂದ್ಯಗಳನ್ನು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಭಾರತದಲ್ಲಿ ಆಡಿದರೆ ತಂಡದ ಸುರಕ್ಷತೆಯ ಬಗ್ಗೆ ತನಗೆ ಕಳವಳವಿದೆ ಎಂದು ಬಿಸಿಬಿ ಹೇಳಿದೆ. ಅಲ್ಲದೆ ಭಾರತದ ಜೊತೆಗೆ ಜಂಟಿಯಾಗಿ ಟಿ20 ವಿಶ್ವಕಪ್‌ ಆತಿಥ್ಯವನ್ನು ವಹಿಸಲಿರುವ ಶ್ರೀಲಂಕಾದಲ್ಲಿ ಪಂದ್ಯ ನಡೆಸಬೇಕೆಂದು ಬಿಸಿಬಿ ಕೇಳಿಕೊಂಡಿತ್ತು.

ಐಸಿಸಿ ಈಗಾಗಲೇ ಟಿ20 ವಿಶ್ವಕಪ್‌ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿದ್ದು, ಈ ವೇಳಾಪಟ್ಟಿಗೆ ಬದ್ಧವಾಗಿದೆ. ಇನ್ನು ವೇಳಾಪಟ್ಟಿಯಲ್ಲಿ ಬದಲಾಯಿಸಲಾಗುವುದಿಲ್ಲ. ಬಾಂಗ್ಲಾ ಗ್ರೂಪ್‌ ಸಿ ನಲ್ಲಿ ಆಡಬೇಕು ಎಂದು ಐಸಿಸಿ ಸ್ಪಷ್ಟವಾಗಿ ಹೇಳಿದೆ.

ಇಷ್ಟು ಮಾತ್ರವಲ್ಲದೆ ಟಿ20 ವಿಶ್ವಕಪ್‌ನಲ್ಲಿ ಆಡಬೇಕೆ ಬೇಡವೇ ಎಂಬುದನ್ನು ಮಾತ್ರವಲ್ಲದೆ, ಟೂರ್ನಮೆಂಟ್‌ಗಾಗಿ ಭಾರತಕ್ಕೆ ಪ್ರಯಾಣಿಸಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲು ಬಾಂಗ್ಲಾದೇಶಕ್ಕೆ ಜನವರಿ 21 ರವರೆಗೆ ಸಮಯಾವಕಾಶ ನೀಡಲಾಗಿದೆ.

ಇದನ್ನೂ ಓದಿ: ಡಬ್ಲ್ಯೂಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ; ಆಸ್ಟ್ರೇಲಿಯಾ ಸರಣಿಗೆ ಆರ್‌ಸಿಬಿ ಸ್ಟಾರ್‌ ಆಲ್‌ರೌಂಡರ್‌ ಆಯ್ಕೆ!

ಸ್ಕಾಟ್ಲೆಂಡ್‌ ತಂಡಕ್ಕೆ ವಿಶ್ವಕಪ್‌ ಚಾನ್ಸ್?‌
ಬಾಂಗ್ಲಾದೇಶ ಪಂದ್ಯ ಆಡಲು ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದರೆ, ಐಸಿಸಿ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಲಿದೆ. ನಂತರ ಐಸಿಸಿ ಬಾಂಗ್ಲಾದೇಶಕ್ಕೆ ಬದಲಿಯಾಗಿ ಮತ್ತೊಂದು ದೇಶವನ್ನು ಘೋಷಿಸಲಿದೆ. ಇತ್ತೀಚಿನ ಟಿ20 ಶ್ರೇಯಾಂಕಗಳ ಆಧಾರದ ಮೇಲೆ, ಸ್ಕಾಟ್ಲೆಂಡ್‌ ತಂಡಕ್ಕೆ ವಿಶ್ವಕಪ್‌ ಆಡುವ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page