Connect with us

LATEST NEWS

ನಮ್ಮ ಸಂವಿಧಾನವನ್ನು ಅನುಸರಿಸಲು ಸಾಧ್ಯವಿಲ್ಲದಿದ್ದರೆ ಭಾರತದಿಂದ ನಿರ್ಗಮಿಸಿ; ವಾಟ್ಸಪ್‌ಗೆ ಸುಪ್ರೀಂ ಎಚ್ಚರಿಕೆ

Published

on

ನವದೆಹಲಿ: ನಿಮಗೆ ಆಗಲ್ಲ ಅಂದರೆ ಬಾಗಿಲು ಬಂದ್‌ ಮಾಡಿ ಹೊರಡಿ. ಭಾರತದಲ್ಲಿ ಇರಬೇಕಾದರೆ ಇಲ್ಲಿನ ನಿಯಮ ಪಾಲಿಸಬೇಕು ಎಂದು ಮೆಟಾ ಮಾಲೀಕತ್ವದ ವಾಟ್ಸಪ್‌ ಪ್ಲಾಟ್‌ಫಾರ್ಮ್‌ಗೆ ಸುಪ್ರೀಂ ಕೋರ್ಟ್‌ ಖಡಕ್‌ ವಾರ್ನಿಂಗ್‌ ನೀಡಿದೆ.


ಮೆಟಾ ಒಡೆತನದ ವಾಟ್ಸಪ್‌ ಇಂದು ವಿಶ್ವದ ಜನಪ್ರಿಯ ಮೆಸೆಂಜರ್‌ ಅಪ್ಲಿಕೇಶನ್‌ ಆಗಿದೆ. ಇಂಟರ್ನೆಟ್‌ ಇದ್ದರೆ ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಫೋಟೋ, ವೀಡಿಯೋ ಕಾಲ್‌, ಧ್ವನಿ ಸಂದೇಶ, ಲೈವ್‌ ಲೊಕೇಶನ್‌ಗಳನ್ನ ಹಂಚಿಕೊಳ್ಳುವ ಸಾಧನವನ್ನು ವಾಟ್ಸಾಪ್‌ ಹೊಂದಿದೆ.

ಆದ್ರೆ ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾವನ್ನ ಹಂಚಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆ ಸುಪ್ರೀಂ ಕೋರ್ಟ್‌ ದೇಶ ತೊರೆಯುವಂತೆ ಖಡಕ್ ಎಚ್ಚರಿಕೆ ಕೊಟ್ಟಿದೆ.

ನ್ಯಾಯಾಲಯವು ವಾಟ್ಸಾಪ್‌ನ 2021ರ ಗೌಪ್ಯತೆ ನೀತಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿತ್ತು. ನಿರ್ದಿಷ್ಟವಾಗಿ ಕಂಪನಿ ಕಾನೂನು ನ್ಯಾಯಮಂಡಳಿಯು ಭಾರತದ ಸ್ಪರ್ಧಾ ಆಯೋಗ 213 ಕೋಟಿ ರೂ. ದಂಡ ವಿಧಿಸಿರುವುದನ್ನು ಎತ್ತಿಹಿಡಿದಿದೆ.

ಕೇಂದ್ರ ಸರ್ಕಾರದ ಪರವಾಗಿ ವಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು, ವಾಣಿಜ್ಯ ಉದ್ದೇಶಗಳಿಗಾಗಿ ಬಳಕೆದಾರರ ಡಾಟಾವನ್ನು ಹಂಚಿಕೊಳ್ಳುವ ನೀತಿಯನ್ನು ಕಟುವಾಗಿ ಟೀಕಿಸಿದ್ದು, ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಜೆಐ, ಬಹುರಾಷ್ಟ್ರೀಯ ಕಂಪನಿಯೊಂದರ ವ್ಯವಹಾರ ಹಿತಾಸಕ್ತಿಗಾಗಿ ನಾಗರಿಕರ ಗೌಪ್ಯತೆಯನ್ನ ರಾಜೀ ಮಾಡಿಕೊಳ್ಳಲು ಅನುಮತಿಸುವುದಿಲ್ಲ. ಸುರಕ್ಷತೆಯನ್ನ ಖಚಿತಪಡಿಸಿಕೊಳ್ಳದಿದ್ದರೆ ಅಂತಹ ಡೇಟಾ ಹಂಚಿಕೆಯನ್ನ ನಿಷೇಧಿಸಬಹುದು ಎಂದು ಹೇಳಿದೆ.

ನಮ್ಮ ದೇಶದ ಗೌಪ್ಯತೆಯ ಜೊತೆ ನೀವು ಆಟವಾಡಲು ಸಾಧ್ಯವಿಲ್ಲ. ನಮ್ಮ ಡೇಟಾದ ಒಂದೇ ಒಂದು ಅಂಕಿ-ಅಂಶವನ್ನೂ ಹಂಚಿಕೊಳ್ಳಲು ನಾವು ನಿಮಗೆ ಅವಕಾಶ ಕೊಡೋದಿಲ್ಲ. ದೇಶದ ಕಾನೂನುಗಳನ್ನ ಪಾಲಿಸಲು ವಿಫಲವಾದ್ರೆ ಕಂಪನಿ ಭಾರತವನ್ನ ತೊರೆಯಬಹುದು ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಫ್ರೀ ಮೋಮೋಸ್‌ಗಾಗಿ ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕೊಟ್ಟ ಬಾಲಕ; ಆಮೇಲೇನಾಯ್ತು?

ಬಂದಾಗುತ್ತಾ ವ್ಯಾಟ್ಸಾಪ್?
ಸುಪ್ರೀಂ ಕೋರ್ಟ್ ಯಾವುದೇ ಮುಲಾಜಿಲ್ಲದೆ ಖಡಕ್ ವಾರ್ನಿಂಗ್ ನೀಡಿದೆ. ಭಾರತದ ಪ್ರೈವೈಸಿ ಪಾಲಿಸಿಯನ್ನು ಪಾಲಿಸಲು ಸಾಧ್ಯವಾಗದಿದ್ದರೆ, ಭಾರತದಿಂದ ಹೊರನಡೆಯಬಹುದು ಎಂದು ವ್ಯಾಟ್ಸಾಪ್ ಮಾತೃ ಸಂಸ್ಥೆ ಮೆಟಾಗಾ ವಾರ್ನಿಂಗ್ ನೀಡಿದೆ. ಹೀಗಾಗಿ ವ್ಯಾಟ್ಸಾಪ್ ಭಾರತದ ನಿಯಮ ಪಾಲನೆ ಮಾಡಿದಿದ್ದರೆ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page