Connect with us

LATEST NEWS

ದ.ಕ ಜಿಲ್ಲೆಯಲ್ಲಿ ಮತ್ತೆ ತಲೆಎತ್ತಿದ ಮರಳು ಮಾಫಿಯಾ-ಸುಳ್ಯದ ಮೂರು ಕಡೆಗಳಲ್ಲಿ ಶೇಖರಿಸಿಟ್ಟಿದ್ದ ಮರಳು ಜಫ್ತಿ

Published

on

ಸುಳ್ಯ: ಸುಳ್ಯ ತಾಲೂಕಿನಲ್ಲಿ ಯಾವುದೇ ಪರವಾನಿಗೆಯನ್ನೂ ಪಡೆಯದೇ ಕಡಲಿನಿಂದ ಮರಳನ್ನು ಲೋಡುಗಟ್ಟಲೆ ಸಾಗಿಸತೊಡಗಿದ್ದಾರೆ. ಅಕ್ರಮ ಮರಳುಗಾರಿಕೆ ನಿರಂತರವಾಗಿದ್ದು, ಮರಳು ಅಡ್ಡೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಸುಮಾರು ನೂರಕ್ಕೂ ಹೆಚ್ಚು ಮರಳು ಲೋಡ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಜ್ಜಾವರ ಗ್ರಾಮದ ಮೇನಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಕ್ರಮ ಮರಳು ಮಾಫಿಯಾ ಮತ್ತೆ ನಿರಾತಂಕವಾಗಿ ನಡೆಯತೊಡಗಿದೆ. ಜಿಲ್ಲಾಧಿಕಾರಿ ರವಿಕುಮಾರ್ ಅವರು ಕಾನೂನು ಬದ್ಧವಾಗಿ ಮರಳುಗಾರಿಕೆ ನಡೆಸಲು ಪರವಾನಿಗೆ ನೀಡುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮರಳು ಧಂಧೆಕೋರರು ಮತ್ತೆ ಸಕ್ರಿಯರಾಗಿದ್ದಾರೆ.


ಅಜ್ಜಾವರ ಎಂಬಲ್ಲಿ ಸರ್ವೆ ನಂಬರ್‌ 149ರ ನಾಗೇಶ್‌ ಎಂಬವರ ಜಮೀನಿನಲ್ಲಿ ಸುಮಾರು 80 ಲೋಡು ಮತ್ತು ಮಹಮ್ಮದ್ ಶರೀಫ್‌ ಎಂಬವರ ಜಮೀನಿನಲ್ಲಿ ಸುಮಾರು 10 ಲೋಡು ಮತ್ತು ಪರಂಬೋಕು ಜಮೀನಿನನಲ್ಲಿ 5 ಲೋಡ್ ಮರಳು ದಾಸ್ತಾನು ಇರಿಸಿರುವುದು ಪತ್ತೆಯಾಗಿದೆ.


ಈ ವೇಳೆ ಸುನಿಲ್‌ ಯಾಣೆ ಕಿಟ್ಟಣ್ಣ ರೈ ಮತ್ತು ಶರೀಫ್‌ ಎಂಬವರು ಬಂದಿದ್ದು, ಇದು ನನಗೆ ಸಂಬಂಧಿಸಿದ ಹೊಯ್ಗೆ ಎಂದು ತಿಳಿಸಿದ್ದಾರೆ.


ಅಲ್ಲದೆ ಅಜ್ಜಾವರ ಗ್ರಾಮಕ್ಕೆ ಸಂಬಂಧ ಇಲ್ಲದ ಅನುಮತಿ ಪತ್ರ ಹಾಜರುಪಡಿಸಿದ್ದಾರೆ. ಈ ಬಗ್ಗೆ ಗಣಿ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮದ ಬಗ್ಗೆ ವರದಿ ನೀಡಲಾಗಿದೆ ಎಂದು ಸುಳ್ಯ ಗ್ರಾಮ ಆಡಳಿತ ಅಧಿಕಾರಿ ಸುಳ್ಯ ಹೋಬಳಿ ಕಂದಾಯ ನಿರೀಕ್ಷಕರ ಮೂಲಕ ತಹಶೀಲ್ದಾರರಿಗೆ ವರದಿ ಮಂಡಿಸಿದ್ದಾರೆ.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page