Connect with us

ಕರ್ನಾಟಕದಲ್ಲಿ ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ: ಸಚಿವ ಸುರೇಶ್ ಕುಮಾರ್

Published

on

ಕರ್ನಾಟಕದಲ್ಲಿ ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ: ಸಚಿವ ಸುರೇಶ್ ಕುಮಾರ್

ಚಾಮರಾಜನಗರ: ದೇಶದಲ್ಲಿ ಕೊರೊನಾ ಗ್ರೋತ್ ರೇಟ್ ಸರಾಸರಿ ಶೇಕಡಾ 19 ರಷ್ಟಿದ್ದರೆ, ಕರ್ನಾಟಕದಲ್ಲಿ ಕೇವಲ ಶೇಕಡಾ 6 ರಷ್ಟಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಚಾಮರಾಜ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಗ್ರೋತ್ ರೇಟ್ ನಲ್ಲಿ ಕರ್ನಾಟಕ 19ನೇ ಸ್ಥಾನದಲ್ಲಿದೆ.

ಹಾಗೆಯೇ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಈ ಹಿಂದೆ 3ನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ  11ನೇ ಸ್ಥಾನದಲ್ಲಿದೆ.

ಕರ್ನಾಟಕದಲ್ಲಿ ಕೊರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸದ್ಯಕ್ಕೆ ರಾಜ್ಯದಲ್ಲಿ ಚಾಮರಾಜನಗರವೂ ಸೇರಿದಂತೆ 9 ಜಿಲ್ಲೆಗಳು ಕೊರೊನಾ ಮುಕ್ತವಾಗಿವೆ.

ಕೊರೊನಾ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದವರು ಹೇಳಿದರು.

ದೇಶದ ಬಹುತೇಕ ಎಲ್ಲಾ ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೊರೊನಾ ವಿಷಯದಲ್ಲಿ ಒಂದೇ ಬಾರಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಾಗುವುದಿಲ್ಲ.

ಆಯಾ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನಮ್ಮ ದೇಶದಲ್ಲಿ ಸರಿಯಾದ ಸಮಯದಲ್ಲಿ ಲಾಕ್ಡೌನ್ ನಿರ್ಧಾರ ಕೈಗೊಂಡಿದ್ದಾರೆ.

ಇಲ್ಲದಿದ್ದರೆ ಇಷ್ಟೊತ್ತಿಗೆ 8.2 ಲಕ್ಷ ಜನರಿಗೆ ಕೊರೊನಾ ಹರಡುತ್ತಿತ್ತು ಎಂಬುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಒಂದು ವೇಳೆ ಲಾಕ್ ಡೌನ್ ಸಡಿಲಗೊಂಡರೂ ಏಪ್ರಿಲ್ 30ರ ವರೆಗೂ ಅಂತರರಾಜ್ಯ ಹಾಗು ಅಂತರಜಿಲ್ಲಾ ಸಂಚಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶವಿರುವುದಿಲ್ಲ ಎಂದವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಏಪ್ರಿಲ್ 30ರ ವರೆಗೆ ಕೊರೊನಾ ಯಾವ ರೀತಿ ತಹಬದಿಗೆ ಬರುತ್ತದೆ ಎಂಬದನ್ನು ನೋಡಿಕೊಂಡು ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎಂದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page