Connect with us

ಭಾರತ-ಚೀನ ಘರ್ಷಣೆ: ಅಷ್ಟಕ್ಕೂ ಗಲ್ವಾನ್ ವ್ಯಾಲಿಯಲ್ಲಿ ನಡೆದಿದ್ದೇನು.?..

Published

on

ಭಾರತ-ಚೀನಾ ರಣಭೀಕರ ಕಾದಾಟದಲ್ಲಿ ಪರ್ವತದಿಂದ ಕೆಳಗೆ ಬಿದ್ದು ಮಡಿದ ಯೋಧರು…!

ಹೊಸದಿಲ್ಲಿ: ಭಾರತ-ಚೀನ ನಡುವಣ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಹಾದು ಹೋಗುವ ಪೂರ್ವ ಲಡಾಖ್‌ನ ಗಾಲ್ವಾನ್‌ ಪ್ರದೇಶದಲ್ಲಿ ಚೀನದ ಯೋಧರು ಮತ್ತು ಭಾರತೀಯ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ,

ಓರ್ವ ಸೇನಾಧಿಕಾರಿ ಸಹಿತ 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಚೀನದ 43 ಮಂದಿ ಸೈನಿಕರು ಸಾವಿಗೀಡಾಗಿರುವ ಶಂಕೆ ಹೊಂದಲಾಗಿದೆ.

ಲಡಾಖ್‌ನ ಗಾಲ್ವಾನ್‌ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ದೈಹಿಕ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿರುವ ಬಗ್ಗೆ ಮಂಗಳವಾರ (ಜೂನ್ 16) ರಾತ್ರಿ ಭಾರತೀಯ ಸೇನೆ ಅಧಿಕೃತವಾಗಿ ಮಾಹಿತಿ ನೀಡಿದೆ.

ಸೇನಾಧಿಕಾರಿ ಸಹಿತ ಮೂವರು ಸ್ಥಳದಲ್ಲಿಯೇ ಮೃತಪಟ್ಟರೆ 17 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿದರು ಎಂದೂ ಸೇನೆ ತಿಳಿಸಿದೆ.

ಗಲ್ವಾನ್ ವ್ಯಾಲಿಯಲ್ಲಿ ನಡೆದಿದ್ದೇನು.?

ಜೂನ್ 6ರ ಭಾರತ ಚೀನಾ ಮಿಲಿಟರಿ ಲೆಫ್ಟಿನೆಂಟ್ ಜನರಲ್ ಮಟ್ಟದ ಮಾತುಕತೆ ಮೂಲಕ ಎರಡೂ ಸೇನೆಗಳು ತಾವಿರುವ ಪ್ರದೇಶದಿಂದ ಹಿಂದೆ ಸರಿಯುವ ನಿರ್ಧಾರ ‌ಕೈಗೊಂಡಿತ್ತು.

ಆದರೆ ಕಳೆದ ವಾರ ಖಾಲಿಯಾಗಿದ್ದ ಚೀನಾ ಟೆಂಟುಗಳು‌ ಮತ್ತೆ ಗಲಾವನ್ ವ್ಯಾಲಿ ಸಮೀಪದ ಪರ್ವತದಲ್ಲಿ ಕಾಣಿಸಿದ್ದರಿಂದ,

ಬಿಹಾರ ರೆಜಿಮೆಂಟ್ ನ ಕಮಾಂಡಿಂಗ್ ಆಫಿಸರ್ ನೇತೃತ್ವದಲ್ಲಿ ಯಾವುದೇ ಶಸ್ತ್ರಾಸ್ತ್ರ ಇಲ್ಲದೆ ರಾತ್ರಿ ಹೋಗಿದ್ದ ಭಾರತದ ಸೇನೆ (ಮಾತುಕತೆ ಒಪ್ಪಂದ ಪ್ರಕಾರ ಶಸ್ತ್ರಾಸ್ತ್ರ ಬಳಸುವಂತಿಲ್ಲ ) ಚೀನಾ ಟೆಂಟ್ ಗಳನ್ನು ಖಾಲಿ ಮಾಡುವಂತೆ ತಾಕೀತು‌ ಮಾಡಿತು…

ಆದ್ರೆ ಒಮ್ಮೆಲೆ ಕಬ್ಬಿಣದ ರಾಡ್ ಕಲ್ಲುಗಳಿಂದ ‌ದಾಳಿ ಮಾಡಿದ ಚೀನಾ ಸೈನಿಕರು, ಕಮಾಂಡಿಂಗ್ ಆಫಿಸರ್ ಮೇಲೆ ಗಂಭೀರ ಹಲ್ಲೆ ನಡೆಸಿತು..

ತಕ್ಷಣ ಎರಡೂ ಸೇನೆಗಳು ಕಲ್ಲುಗಳು, ಚೂಪಾದ ಮೊಳೆ ತುಂಬಿದ ಕೋಲುಗಳು‌ ಮತ್ತು ಕಬ್ಬಿಣದ ರಾಡ್ ಮೂಲಕ ಹಲ್ಲೆಗಿಳಿದ ಕಾರಣ ಜಗಳ ಗಂಭೀರ ಸ್ವರೂಪ ‌ಪಡೆಯಿತು..

ಪರ್ವತದ ಅಂಚಿನಿಂದ ಬಿದ್ದ ಎರಡೂ ‌ಕಡೆ ಸೈನಿಕರು ಸೊನ್ನೆ ತಾಪಮಾನವುಳ್ಳ ಗಲ್ವಾನ್‌‌‌ ನದಿಗೆ ಬಿದ್ದು ಪ್ರಾಣ ಕಳೆದುಕೊಂಡರು…

ಚೀನಾ ತನ್ನ ಹತ್ತಿರದ‌ ಇನ್ನೊಂದು ‌ಟೆಂಟ್‌ನಿಂದ ಸೈನಿಕರನ್ನು‌ ಕರೆಸಿ ಹಲ್ಲೆ ನಡೆಸಿತ್ತು..

ಗಾಯಗೊಂಡು ನದಿಗೆ‌ ಬಿದ್ದಿದ್ದ ಸೈನಿಕರ ರಕ್ಷಣಾ ಕಾರ್ಯ ರಾತ್ರಿಯಿಂದ ಪ್ರಾರಂಭಗೊಂಡಿತ್ತು..ಬೆಳಗಾಗುತ್ತಲೇ ಸೈನಿಕರ ಸಾವಿನ ಸಂಖ್ಯೆ ‌ಹೆಚ್ಚಾಗಿತ್ತು..

ಗಾಯಗೊಂಡ ‌ಸೈನಿಕರು ಲೇಹ್ ನ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ… ಚೀನಾ ಹೆಲಿಕಾಪ್ಟರ್ ಮೂಲಕ ‌ಚೀನಾ ಸೈನಿಕರ‌ ಮೃತ‌ ದೇಹ ಕೊಂಡೊಯ್ಯಲು ವಾಯುಪ್ರದೇಶದ ಒಪ್ಪಿಗೆ‌ (Air space) ನೀಡಲಾಗಿತ್ತು..

ಹಾಗೇಯೇ ಭಾರತದ ಗಡಿಯೊಳಗೆ ಬಂದ ಚೀನಾ ಹೆಲಿಕಾಪ್ಟರ್ ಗಲ್ವಾನ್ ನದಿಯಲ್ಲಿ ಬಿದ್ದ ಚೀನಾ ಸೈನಿಕರ ಮೃತದೇಹವನ್ನು ತೆಗೆದುಕೊಂಡು ಹೋಗುವ ಕಾರ್ಯ ಮಾಡಿದೆ..

ಇನ್ನು ‘ಭಾರತೀಯ ಯೋಧರು ಚೀನದ ಭೂ ಪ್ರದೇಶದ ಕಡೆ ಹೋಗಿರಲೇ ಇಲ್ಲ. ನಮ್ಮವರ ಎಲ್ಲ ಚಟುವಟಿಕೆಗಳು ಗಡಿಯೊಳಗೇ ಇದ್ದವು’ ಎಂದು ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್‌ ಶ್ರೀವಾಸ್ತವ ಹೇಳಿದ್ದಾರೆ.

ಗಾಲ್ವಾನ್‌ ವ್ಯಾಲಿ ಎಂದೆಂದಿಗೂ ನಮ್ಮದೇ ಎಂದು ತಿಳಿಸಿದ್ದು, ಈ ಕಣಿವೆ ತನ್ನದೆನ್ನುವ ಚೀನಕ್ಕೆ ತೀವ್ರ ತಿರುಗೇಟು ನೀಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page