Connect with us

bangalore

ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟಾ ಅವರ ಒಂದಿಷ್ಟು ಪರಿಚಯ..!

Published

on

ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ 42 ವರ್ಷದ ಬೃಜೇಶ್ ಚೌಟ ಅವರನ್ನು ಅಭ್ಯರ್ಥಿಯಾಗಿಸಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಅಭ್ಯರ್ಥಿಯನ್ನಾಗಿ ಮಾಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ.

ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?

ಕ್ಯಾಪ್ಟನ್ ಬ್ರಿಜೇಶ್ ಚೌಟಾ ಯಾರು … ಅವರ ಹಿನ್ನೆಲೆ ಏನು..?
ತುಳುನಾಡಿನ ಪ್ರತಿಷ್ಠಿತ ಬಂಟ ಸಮೂದಾಯದ ಗುತ್ತಿನ ಮನೆತನದಲ್ಲಿ ಜನಿಸಿರುವ ಬೃಜೇಶ್ ಚೌಟ ಮಂಗಳೂರಿನ ರಥ ಬೀದಿಯಲ್ಲಿ ವಾಸವಾಗಿದ್ದಾರೆ. ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಸಂಘ ಪರಿವಾರದ ನಂಟು ಹೇಗೆ ..?

ಬಾಲ್ಯದಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸೇವೆ ಆರಂಭಿಸಿದ್ದರು. ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದರು. ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ದೇಶ ಸೇವೆಗೆ ತನ್ನನ್ನು ಮುಡಿಪಾಗಿಟ್ಟುಕೊಂಡ ಚೌಟಾ ಇದೇ ಕಾರಣದಿಂದ ಅವಿವಾಹಿತರಾಗಿ ಉಳಿದುಕೊಂಡಿದ್ದಾರೆ ಅನ್ನೋದೇ ಅವರ ದೇಶ ಪ್ರೇಮಕ್ಕೆ ಸಾಕ್ಷಿ .

ರಾಜಕೀಯಕ್ಕೆ ಕ್ಯಾಪ್ಟನ್ ಎಂಟ್ರಿ…!

2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜೊತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದರು.

ಪಕ್ಷದ ಜೊತೆಗೆ ಸಾಮಾಜಿಕ ಸೇವೆಯಲ್ಲೂ ಕ್ಯಾಪ್ಟನ್‌..!

ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು. ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.

ಕರಾವಳಿಯ ಜಾನಪದ ಕ್ರೀಡೆ ಕಂಬಳದ ಆಯೋಜನೆ

2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಲು ತೀರ್ಮಾನಿಸಿದರು, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜನೆ. ಹೀಗೆ ಎಲ್ಲಾ ಕ್ಷೇತ್ರದಲ್ಲೂ ಮಿಂಚಿರುವ ವಿದ್ಯಾವಂತ, ಅವಿವಾಹಿತ, ಹಾಗೂ ಪ್ರತಿಷ್ಟಿತ ಮನೆತನದ ಬ್ರಿಜೇಶ್ ಚೌಟ ಬಿಜೆಪಿಯ ಸರಿಯಾದ ಆಯ್ಕೆ ಅನ್ನಲೇ ಬೇಕಿದೆ.

bangalore

ರಸ್ತೆ ಮಧ್ಯೆಯೇ ಕಾಲೇಜು ಪ್ರಾಧ್ಯಪಕನ ಮೇಲೆ ಹಲ್ಲೆ; ಮೂವರು ಅರೆಸ್ಟ್

Published

on

ಮಂಗಳೂರು/ಬೆಂಗಳೂರು : ಎಂಥಾ ವಿಚಿತ್ರ ಜನರಿರುತ್ತಾರೆ ಎಂದು ಹೇಳುವುದೂ ಅಸಾಧ್ಯ. ಇದು ಸರಿಯಲ್ಲ ತಪ್ಪು ಎಂದು ಹೇಳುವ ಹಾಗೆಯೂ ಇಲ್ಲ. ಬಿಸಿ ರಕ್ತ ಕುದಿಯುತ್ತೆ. ಹಲ್ಲೆ ಮಾಡಲು ಸಹ ಹಿಂಜರಿಯುವುದಿಲ್ಲ. ಇದೀಗ ಅಂತಹದ್ದೇ ಘಟನೆಯೊಂದು ರಾಜ್ಯ ರಾಜಧಾನಿಯಲ್ಲೂ ನಡೆದಿದೆ. ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಎಂಬವರ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿಂಗ್ ಕಮಾಂಡರ್ ರೋಡ್ ರೇಜ್ ಪ್ರಕರಣ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಅದೇ ಸಂದರ್ಭದಲ್ಲೇ ಈ ಘಟನೆಯೂ ನಡೆದಿತ್ತು.

ಅಷ್ಟಕ್ಕೂ ನಡೆದಿದ್ದೇನು ..?

ಕುಮಾರಸ್ವಾಮಿ ಲೇಔಟ್​ನ  ಜೆಹೆಚ್ ಬಿಸಿ ಲೇಔಟ್​ನಲ್ಲಿ ಖಾಸಗಿ ಕಾಲೇಜು ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಏಪ್ರಿಲ್ 21 ರಂದು ಸಂಜೆ 6 ರಿಂದ 7 ಗಂಟೆಯ ಸಮಯದಲ್ಲಿ  ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಆಟೋದಲ್ಲಿ ತೆರಳುತ್ತಿದ್ದ ಮೂವರು ಯುವಕರು, ತಿಂಡಿ ತಿಂದು ಕಸವನ್ನು ರಸ್ತೆ ಮೇಲೆಯೇ ಬಿಸಾಡಿದ್ದರು. ಆ ವೇಳೆ, ಪ್ರಾಧ್ಯಾಪಕ ಅರಬಿಂದ್ ಗುಪ್ತಾ ಇದನ್ನು ಪ್ರಶ್ನಿಸಿದ್ದರು. ಕಸ ರಸ್ತೆ ಮೇಲೆ ಕಸ ಬಿಸಾಡಬೇಡಿ ಎಂದಿದ್ದರು. ಇದರಿಂದ ಕೋಪಗೊಂಡ ಯುವಕರು ಪ್ರಾಧ್ಯಾಪಕನ ಮೇಲೆ ಹಲ್ಲೆ ನಡೆಸಿದ್ದರು.

ಇದನ್ನೂ ಓದಿ : ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

ಸ್ಥಳೀಯರೊಬ್ಬರು ಈ ಅಮಾನುಷ ಕೃತ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಬಳಿಕ  ಕೆಎಸ್ ಲೇಔಟ್ ಪೊಲೀರು ಈ ಘಟನೆ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳಾದ ಭಾನುಪ್ರಸಾದ್, ಶರತ್, ಅಮೃತ್ ಕುಮಾರ್​​ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಸದ್ಯ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

Continue Reading

bangalore

ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ; ಅಂಕಪಟ್ಟಿಯಲ್ಲಿ ನಂ.1

Published

on

IPL 2025 : ಬಹು ನಿರೀಕ್ಷಿತ ಪಂದ್ಯವಾದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವಿನ ಹೈವೋಲ್ಟೇಜ್ ಕದನವು ನಿನ್ನೆ (ಏ.27) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದಿತ್ತು. ರಜತ್ ಪಡೆ ಡೆಲ್ಲಿ ತಂಡವನ್ನು ಅವರ ನೆಲದಲ್ಲೇ ಮಣಿಸುವ ಯತ್ನದಲ್ಲಿ ರಾಯಲ್ ಚಾಲೆಂಜರ್ಸ್ ತಂಡ ಯಶಸ್ವಿಯಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್​ಗಳಲ್ಲಿ 162 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ (RCB) ಕೇವಲ 4 ವಿಕೆಟ್ ಕಳೆದುಕೊಂಡು ಇನ್ನು 9 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ಈ ಗೆಲುವಿನೊಂದಿಗೆ ಆರ್​ಸಿಬಿ,  ಡೆಲ್ಲಿ ವಿರುದ್ಧ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಂಡಿದಲ್ಲದೆ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿತು. ಆರ್​ಸಿಬಿ ಈಗ 10 ಪಂದ್ಯಗಳಿಂದ 14 ಅಂಕಗಳನ್ನು ಗಳಿಸಿದ್ದು, ಪ್ಲೇಆಫ್ ಅರ್ಹತೆಗೆ ಬಹಳ ಹತ್ತಿರದಲ್ಲಿದೆ.

ಈ ಬಾರಿಯ ಐಪಿಎಲ್ ನಲ್ಲಿ ಪ್ರತಿಯೊಂದು ತಂಡವೂ ತಲಾ 14 ಪಂದ್ಯಗಳನ್ನು ಆಡುತ್ತಿದೆ. ಅದರಲ್ಲಿ ಗುಜರಾತ್ ಜೈಂಟ್ಸ್ 8 ಪಂದ್ಯ ಆಡಿರುವುದನ್ನು ಹೊರತುಪಡಿಸಿದರೆ ಎಲ್ಲಾ ಪಂದ್ಯಗಳು 9 ಪಂದ್ಯಗಳನ್ನು ಆಡಿವೆ. ರಾಯಲ್ ಚಾಲೆಂಡರ್ಸ್ , ಲಖನೌ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ 10 ಪಂದ್ಯಗಳನ್ನು ಪೂರ್ತಿಗೊಳಿಸಿವೆ. ಇವುಗಳಲ್ಲಿ ಪ್ರಸ್ತುತ ಅಂಕಗಳ ಆಧಾರದಲ್ಲಿ ನೋಡುವುದಾದರೆ ನಿನ್ನೆ ನಡೆದ ಪಂದ್ಯದ ಗೆಲುವಿನ ಬಳಿಕ ಆರ್‌ಸಿಬಿ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅನ್ನು 2ನೇ ಸ್ಥಾನಕ್ಕೆ ತಳ್ಳಿ ಅಗ್ರಸ್ಥಾನದಲ್ಲಿದೆ.

ಆರ್ ಸಿಬಿಗೆ ಬಾಕಿ ಇರುವ ಪಂದ್ಯ :

ಮೇ 3ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ, ಮೇ 9ರಂದು ಲಖನೌ ಸೂಪರ್ ಜೈಂಟ್ಸ್, ಮೇ 13ರಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಮೇ 17ರಂದು ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಆರ್ ಸಿಬಿ ಸೆಣೆಸಬೇಕಿದೆ. ಇದರಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಹೊರತುಪಡಿಸಿದರೆ ಉಳಿದ ಮೂರು ಪಂದ್ಯಗಳು ಸಹ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಆರ್ ಸಿಬಿಯ ಪ್ಲಸ್ ಪಾಯಿಂಟ್.

Continue Reading

bangalore

ಇಬ್ಬರು ಮೂವರಾಗಿ ಇಂದಿಗೆ 3 ತಿಂಗಳು; ಮಗನ ಫೊಟೋ ರಿವೀಲ್ ಮಾಡಿದ ವಶಿಷ್ಠ ದಂಪತಿ

Published

on

ಸ್ಯಾಂಡಲ್‌ವುಡ್‌ನ ಕ್ಯೂಟ್ ಹೋಡಿಯಾಗಿ ಗುರುತಿಸಿಕೊಂಡಿರುವ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ದಂಪತಿ ಗಂಡು ಮಗುವಿಗೆ ಜನ್ಮ ನೀಡಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿತ್ತು. ಈಗ ಮಗು ಜನಿಸಿ 3 ತಿಂಗಳು ತುಂಬಿದ ಖುಷಿಯಲ್ಲಿ ಮಗನ ಫೋಟೋವನ್ನು ವಸಿಷ್ಠ ದಂಪತಿ ರಿವೀಲ್ ಮಾಡಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಫುಲ್ ಖುಷ್ ಆಗಿದೆ.
2023ರ ಜನವರಿ 26ರಂದು ವಸಿಷ್ಠ ಮತ್ತು ಹರಿಪ್ರಿಯಾ ಮೈಸೂರಿನಲ್ಲಿ ಮದುವೆಯಾದರು. ಇದೇ ದಿನಾಂಕ ಅಂದರೆ 2025 ರ ಜ.26ರಂದು ಹರಿಪ್ರಿಯಾ ಮುದ್ದಾದ ಗಂಡು ಮಗನಿಗೆ ಜನ್ಮ ನೀಡಿದರು. ಹೀಗಾಗಿ ಸಿನಿಮಾಗೆ ಬ್ರೇಕ್ ಕೊಟ್ಟು ಮಗನ ಆರೈಕೆಯಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಮಗನಿಗೆ 3 ತಿಂಗಳು ತುಂಬಿದ ಖುಷಿಯಲ್ಲಿ ಮೊದಲ ಬಾರಿಗೆ ಹರಿಪ್ರಿಯಾ ದಂಪತಿ ಮಗನ ಫೊಟೋ ರಿವೀಲ್ ಮಾಡಿದ್ದಾರೆ.
ಮಗನೊಂದಿಗಿನ ಬ್ಲ್ಯಾಕ್ & ವೈಟ್ ಫೋಟೋ ಶೇರ್ ಮಾಡಿ, ‘ನಾವಿಬ್ಬರೂ ಮೂವರಾಗಿ ಇಂದಿಗೆ 3 ತಿಂಗಳು’ ವಸಿಷ್ಠ ದಂಪತಿ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಈ ಫೊಟೋ ಫುಲ್ ವೈರಲ್ ಆಘುತ್ತಿದೆ ಹಲವಾರು ಕಾಮೆಂಟ್‌ಗಳನ್ನು ಒಳಗೊಂಡಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page