Connect with us

LATEST NEWS

ರೈಲ್ವೆ ಬ್ರಿಡ್ಜ್ ಮೇಲೆ ರೀಲ್ಸ್ ಮಾಡಲು ಹೋಗಿ ಇಬ್ಬರು ಬಾಲಕರು ಸಾವು- ಮತ್ತೋರ್ವ ಗಂಭೀರ..!

Published

on

ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.

ಪಾಟ್ನಾ :  ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ. ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.


ರೀಲ್ಸ್ ಮಾಡಲು ಹೋಗಿ ರೈಲಿಗೆ ಸಿಲುಕಿ ಬಾಲಕರಿಬ್ಬರು ಮೃತಪಟ್ಟ ಘಟನೆ ಬಿಹಾರದ ಖಗರಿಯಾದಲ್ಲಿ ನಡೆದಿದೆ.

ಮೃತ ಬಾಲಕರು ಸೇರಿದಂತೆ ಒಟ್ಟು ಮೂರು ಜನ ರೈಲು ಹಳಿ ಮೇಲೆ ನಿಂತುಕೊಂಡು ರೀಲ್ಸ್ ಮಾಡುತ್ತಿದ್ದರು.

ಈ ವೇಳೆ ರೈಲು ಬಂದಿದ್ದು, ಓರ್ವ ಬಾಲಕ ರೈಲ್ವೆ ಬ್ರಿಡ್ಜ್‌ನಿಂದ ಕೆಳಗೆ ಹಾರಿದ್ದರೆ, ಮತ್ತಿಬ್ಬರು ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ. ಸಾವಿಗೂ 15 ನಿಮಿಷ ಮೊದಲು ಇವರು ಇನ್ಸ್ಟಾಗೆ ರೀಲ್ಸ್ ಅಪ್‌ಲೋಡ್ ಮಾಡಿದ್ದರು.

ಬಿಹಾರದ ಖಗರಿಯಾದಲ್ಲಿರುವ ರೈಲ್ವೆ ಬ್ರಿಡ್ಜ್‌ ಮೇಲೆ ನಿಂತುಕೊಂಡು ಬಾಲಕರಿಬ್ಬರು ರೀಲ್ಸ್ ಮಾಡುತ್ತಿದ್ದರು.

ಈ ವೇಳೆ ರೈಲು ಬಂದಿದ್ದು, ಇಬ್ಬರು ಬಾಲಕರು ರೈಲಡಿಗೆ ಬಿದ್ದು ಪ್ರಾಣ ಬಿಟ್ಟರೆ ಮತ್ತೊಬ್ಬ ಬ್ರಿಡ್ಜ್‌ನಿಂದ ನರಿ ತೀರಕ್ಕೆ ಹಾರಿದ್ದು, ಆತನ ಪ್ರಾಣ ಉಳಿದಿದೆ ಆದ್ರೂ ಗಂಭೀರ ಗಾಯಗಳಾಗಿವೆ.

ಮೃತ ಬಾಲಕರನ್ನು ಸೋನು ಹಾಗೂ ನಿತೀಶ್ ಎಂದು ಗುರುತಿಸಲಾಗಿದೆ. ಈ ಅನಾಹುತದಲ್ಲಿ ಪ್ರಾಣ ಉಳಿಸಿಕೊಂಡಿರುವ ಬಾಲಕ ಅಮನ್ ಘಟನೆ ಬಗ್ಗೆ ವಿವರಿಸಿದ್ದಾನೆ.

ನಾನು, ಸೋನು ಹಾಗೂ ನಿತೀಶ್ ಮೂವರು ಹೊಸ ವರ್ಷದ ಅಂಗವಾಗಿ ಧಮರಾ ಘಾಟ್ ಸ್ಟೇಷನ್ ( ಬಳಿ ಇರುವ ಮಾ ಕ್ಯಾತ್ಯಾಯಿನಿ ದೇಗುಲಕ್ಕೆ ಹೋಗುತ್ತಿದ್ದೆವು.

ಈ ವೇಳೆ ಪ್ರಮುಖ ರಸ್ತೆಯಲ್ಲಿ ಭಾರಿ ಜನಸಂದಣಿ ಇದ್ದಿದ್ದರಿಂದ ನಾವು ರೈಲ್ವೆ ಬ್ರಿಡ್ಜ್ ಮೇಲೆ ಹೋಗಲು ನಿರ್ಧರಿಸಿದೆವು.

ಈ ನಡುವೆ ರೈಲ್ವೆ ಬ್ರಿಡ್ಜ್‌ನಲ್ಲೇ ಸೋನು ಹಾಗೂ ನಿತೀಶ್ ರೀಲ್ಸ್ ಮಾಡಲು ಮುಂದಾಗಿದ್ದಾರೆ ಎಂದು ಆತ ಹೇಳಿದ್ದಾನೆ.

ಇದರ ಹೊರತಾಗಿ ಮೂರು ರೀಲ್ಸ್‌ಗಳನ್ನು ಸಾಂಗ್‌ ಜತೆ ಸೇರಿಸಿ ಈ ತರುಣರು ಇನ್ಸ್ಟಾಗ್ರಾಮ್‌ಗೆ ಅಪ್‌ಲೋಡ್ ಮಾಡಿದ್ದಾರೆ.

ಆ ರೀಲ್ಸ್‌ಗಳಲ್ಲಿ 2022ರ ರ ಸ್ಟೇಟಸ್ ತೋರಿಸಿ 2023ರಲ್ಲಿ ಬದುಕಿರುವುದಾಗಿ ಹೇಳುತ್ತಾರೆ.

ಅದಾಗಿ 15 ನಿಮಿಷದಲ್ಲಿ ಮತ್ತೆ ರೀಲ್ಸ್ ಮಾಡಲು ಮುಂದಾಗಿದ್ದಾರೆ.

ಇದಾದ ಬಳಿಕ ಇನ್ನೊಂದು ಸೈಡ್‌ನಿಂದ ಅದೇ ಟ್ರ್ಯಾಕ್‌ನಲ್ಲಿ ರೈಲು ಬಂದಿದ್ದು, ದಟ್ಟ ಮಂಜಿನ ಕಾರಣದಿಂದ ಇವರಿಗೆ ರೈಲು ಬರುವುದು ಕಾಣಿಸಿಲ್ಲ.

ಪರಿಣಾಮ ಸೋನು ಹಾಗೂ ನಿತೀಶ್  ರೈಲಡಿಗೆ ಬಿದ್ದಿದ್ದು, ನಾನು ರೈಲು ನೋಡಿ ಸೇತುವೆಯಿಂದ  ಕೆಳಗೆ ಹಾರಿದೆ ಎಂದು ಈ ಅನಾಹುತದಲ್ಲಿ ಬದುಕುಳಿದ ಅಮನ್ ಹೇಳಿದ್ದಾನೆ.

ಮಗನ ಸಾವಿನ ಸುದ್ದಿ ಕೇಳಿದ ಸೋನು ತಾಯಿ ಚಂದನಾ ದೇವಿ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ಬಾಲಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮನ್ಸಿ ಪೊಲೀಸ್ ಸ್ಟೇಷನ್ ಮುಖ್ಯಸ್ಥ ನಿಲೇಶ್ ಕುಮಾರ್ ಹೇಳಿದ್ದಾರೆ.

ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಕಾಮೆಂಟ್ ಹಿಂದೆ ಬಿದ್ದಿರುವ ಯುವ ಸಮೂಹ ಇದಕ್ಕಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಸಾಹಸ ಮಾಡಲು ಹೋಗುತ್ತಿದ್ದಾರೆ. ಇದರಿಂದ ಮಕ್ಕಳನ್ನು ಕಳೆದುಕೊಂಡು ಪೋಷಕರು ಅಳುವಂತಾಗಿದೆ.

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

 

Continue Reading

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page