Connect with us

BANTWAL

ವಿಟ್ಲದ ಖಾಸಗಿ ಕಾಲೇಜಿನಲ್ಲಿ ಪ್ರೇಮ ಪುರಾಣ-18 ವಿದ್ಯಾರ್ಥಿಗಳು ಡಿಬಾರ್…!

Published

on

ವಿಟ್ಲ: ಹಿಂದು ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಡುವಿನ ಪ್ರೇಮ ಪ್ರಕರಣದ ವಿಚಾರದಲ್ಲಿ ವಿವಾದ ಉಂಟಾಗಿ ಒಟ್ಟು 18 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ ಘಟನೆ ವಿಟ್ಲದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.


ವಾರ್ಷಿಕ ಪರೀಕ್ಷೆಯವರೆಗೆ ಈ 18 ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಕಾಲೇಜಿನ ಪ್ರಾಂಶುಪಾಲರು ಸುತ್ತೋಲೆ ಹೊರಡಿಸಿದ್ದಾರೆ.

ಈ ಪ್ರೇಮಪ್ರಕರಣ ವಿವಾದ ಇನ್ನೂ ಕಾಲೇಜಿನಲ್ಲಿ ಗಲಭೆಗೆ ಕಾರಣವಾಗದಂತೆ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡುವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

ಕೆಲವು ಸಮಯದಿಂದ ಹಿಂದು ಸಮುದಾಯದ ವಿದ್ಯಾರ್ಥಿನಿ ಹಾಗೂ ಮುಸ್ಲಿಮ್ ವಿದ್ಯಾರ್ಥಿ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೋಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು.

ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದ ಕಾಲೇಜು, ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ.

ಈ ಸಂದರ್ಭ ಹಿಂದು ಸಮುದಾಯದ ವಿದ್ಯಾರ್ಥಿನಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ವಿದ್ಯಾರ್ಥಿ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

ಇನ್ನು ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಒಂದು ವರ್ಗದ ವಿದ್ಯಾರ್ಥಿಗಳು ಹೋಗಿ ಆತನಲ್ಲಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆಗ ಕೂಡಾ ಗಲಾಟೆ ಆರಂಭವಾಗಿದೆ.

ಕೊನೆಗೆ ಕಾಲೇಜಿನ ಆಡಳಿತ ಮಂಡಳಿ ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6 ಮಂದಿ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಹಾಗೂ ಪ್ರಶ್ನಿಸಲು ಹೋದ ಹಿಂದು ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ.

ಒಟ್ಟಿನಲ್ಲಿ ಎರಡೂ ಕಡೆಯ ಒಟ್ಟು 18 ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಮಾತ್ರ ಅವಕಾಶ ನೀಡುವ ನಿರ್ಧಾರವನ್ನು ಕಾಲೇಜಿನ ಆಡಳಿತ ಮಂಡಳಿ ತೆಗೆದುಕೊಂಡಿದೆ’ ಎಂದು ಮೂಲಗಳು ತಿಳಿಸಿವೆ.

BANTWAL

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ

Published

on

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.


ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಆಗಬಾರದೆಂಬ ನಿಟ್ಟಿನಲ್ಲಿ ಮತ್ತು ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: ಜೂನ್.16 ರಿಂದ 20ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಪಾಣೆಮಂಗಳೂರಿನ ಉಕ್ಕಿನ ಸೇತುವೆ 111 ವರ್ಷವನ್ನು ಪೂರೈಸಿದ್ದು, ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಸೇತುವೆ ಎನ್ನುವ ಹೆಗ್ಗಳಿಕೆಯೂ ಈ ಸೇತುವೆಗಿದೆ. ಇನ್ನು ಪಾಣೆಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು ಸ್ಥಳೀಯರಿಗೆ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

 

 

 

 

Continue Reading

BANTWAL

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ರೈತರಿಗೆ ಪಂಗನಾಮ; 10 ಕೋಟಿ ವಂಚಿಸಿ ಪರಾರಿ

Published

on

ಬಂಟ್ವಾಳ: ಅಡಿಕೆ ವ್ಯಾಪಾರಿಯೊಬ್ಬರು ಕೃಷಿಕರಿಂದ ಅಡಿಕೆ ಖರೀದಿಸಿ ಹಣ ಬಾಕಿ ಇರಿಸಿ ವಂಚಿಸಿ ನಂಬಿಕೆ ದ್ರೋಹ ಎಸಗಿದ ಆರೋಪದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್‌ ಮಹಮ್ಮದ್‌ ಈ ಪ್ರಕರಣದ ಆರೋಪಿಯಾಗಿದ್ದು, ಇದೀಗ ಆತ ಗ್ರಾಹಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಆರೋಪಿಸಲಾಗಿದೆ. ಆತ ಸುಮಾರು 94 ಲಕ್ಷ ರೂಪಾಯಿಗೂ ಆಧಿಕ ಮೊತ್ತದ ಹಣ ಬಾಕಿ ಇರಿಸಿ ವಂಚನೆ ಎಸಗಿರುವುದಾಗಿ ಆಪಾದಿಸಲಾಗಿದೆ. ನಾವೂರು ಗ್ರಾಮದ ನಿವಾಸಿ ಪ್ರವೀಣ್‌ ಡಿ’ ಸೋಜಾ ಎಂಬವರು ನೀಡಿದ ದೂರಿನಂತೆ ಎಫ್.ಐ.ಆರ್. ದಾಖಲಾಗಿದೆ.

ಅಡಿಕೆ ಮಾರಾಟ ಮಾಡುವ ವೇಳೆ ನೌಫಲ್ ಮಾರಾಟಗಾರರಿಗೆ ಸ್ವಲ್ಪ ಹಣವನ್ನು ಕೊಡುತ್ತಿದ್ದು, ಬಳಿಕ ಕೆಲವು ದಿನಗಳ ಬಳಿಕ ಹಣವನ್ನು ಕೊಡುತ್ತಿರುವ ಪ್ರಕ್ರಿಯೆ ನಡೆಯುತ್ತಿತ್ತು. ಮಾರ್ಚ್ 8 ರಂದು ಬೆಳಗ್ಗೆ ಪ್ರವೀಣ್ ಅವರು ನೌಫಲ್‌ ಮಹಮ್ಮದ್‌ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್‌ ಅಡಿಕೆಯನ್ನು ಮಾರಾಟ ಮಾಡಿದ ಬಗ್ಗೆ ಅಂದಾಜು 3,50,000 ರೂ ಹಣವನ್ನು ನೀಡಿರಲಿಲ್ಲ. ಜೂನ್ 9ರಂದು ರಾತ್ರಿ ಪ್ರವೀಣ್ ಗೆ ನೌಫಲ್ ಕರೆ ಮಾಡಿ, ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್‌ ಕಳುಹಿಸಿದ್ದಾಗಿ ದೂರಲಾಗಿದೆ.

ಇದನ್ನೂ ಓದಿ: ಕಾಶಿ ವಿಶ್ವನಾಥ ಮಂದಿರದಲ್ಲಿ 21 ನಕಲಿ ಅರ್ಚಕರು ಅರೆಸ್ಟ್

ಇದರಿಂದ ಗಾಬರಿಗೊಂಡ ಪ್ರವೀಣ್, ಜೂನ್ 10ರಂದು ಬೆಳಿಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಲಾಗಿತ್ತು. ಆರೋಪಿಯ ಮೊಬೈಲ್ ಸ್ವಿಚ್ಡ್‌ ಆಫ್‌ ಆಗಿದ್ದು, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಕೂಡಾ ಸ್ಥಳದಲ್ಲಿದ್ದರು. ಆರೋಪಿಯು ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು 94,77,810 ರೂಪಾಯಿ ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Continue Reading

BANTWAL

ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ ನಿಧನ

Published

on

ಬಂಟ್ವಾಳ: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯಗಾರ ಸಿದ್ಧಕಟ್ಟೆ ಪದ್ಮನಾಭ ಶೆಟ್ಟಿಗಾರ್ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಪದ್ಮನಾಭ ಶೆಟ್ಟಿಗಾರ್ ಕುಂಡಾವು, ಸುಬ್ರಹ್ಮಣ್ಯ, ಕೊಲ್ಲೂರು, ಸುಂಕದ ಕಟ್ಟೆ, ಸುರತ್ಕಲ್ ಮತ್ತು ದೀರ್ಘಕಾಲ ಕಟೀಲು ಮೇಳ ಹೀಗೆ ಒಟ್ಟೂ ಸುಮಾರು ಐದು ದಶಕ ಯಕ್ಷಗಾನ ತಿರುಗಾಟ ಮಾಡಿದ್ದರು.

ಇದನ್ನೂ ಓದಿ: ತೆಂಕುತಿಟ್ಟಿನ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ

ಮೂಕಾಸುರ, ವಿಜಯ, ದಾರುಕ, ಪಾಪಣ್ಣ, ಬಾಹುಕ ಮೊದಲಾದ ಪೌರಾಣಿಕ ಪಾತ್ರಗಳ ಮೂಲಕ ಯಕ್ಷಗಾನ ಪ್ರಿಯರ ಮನಸೂರೆಗೊಳಿಸಿದ್ದರು. ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪಡೆದಿದ್ದ ಅವರು, ಒಂದು ವಾರದ ಹಿಂದೆಯಷ್ಟೇ ಯಕ್ಷನಿಧಿ ಸಂಸ್ಥೆಯು ರೂ.50,000 ನಿಧಿಯೊಂದಿಗೆ ನೀಡಿದ ‘ಸುವರ್ಣ ಪುರಸ್ಕಾರ’ಕ್ಕೂ ಭಾಜನರಾಗಿದ್ದರು. ಇವರು ಪತ್ನಿ ಮತ್ತು ಇಬ್ಬರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page