Connect with us

LATEST NEWS

ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಷ್ಟಿಸಬೇಡಿ : ಸಚಿವ ಸುನಿಲ್ ಕುಮಾರ್

Published

on

ಮಂಗಳೂರು : ಗಣರಾಜ್ಯೋತ್ಸವ ಪೆರೇಡ್ ಬಗ್ಗೆ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಸೃಸ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ ಸಚಿವರಾದ ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು  ಪ್ರತೀ ವರ್ಷ ಜನವರಿ 26 ರ ಗಣರಾಜ್ಯೋತ್ಸವದಂದು ಘನವೆತ್ತ ಭಾರತ ಸರ್ಕಾರದಿಂದ ಪ್ರತೀ ವರ್ಷ ಗಣರಾಜ್ಯೋತ್ಸವ ಪೆರೇಡ್ ಆರಂಭದಿಂದ ಈವರೆಗೆ ತನ್ನದೇ ಆದಂತಹ ನಿಲುವನ್ನು ಇಟ್ಟುಕೊಂಡು ಪೆರೇಡ್ ನಡೆಯುತ್ತ ಬಂದಿರುವುದು ಎಲ್ಲರಿಗೂ ತಿಳಿದ ವಿಚಾರ.
ಒಟ್ಟು ಈವರೆಗೆ ನಡೆದುಬಂದ ಪದ್ಧತಿಯಂತೆ ದೇಶದಲ್ಲಿರುವ ಒಟ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ 36 ರಾಜ್ಯಗಳೆಂದು ಪರಿಗಣಿಸಿ ಪ್ರತಿ ರಾಜ್ಯವು ಗಣರಾಜ್ಯೋತ್ಸವ ನಿಮಿತ್ತ ಸ್ತಬ್ಧಚಿತ್ರಗಳನ್ನು ಗಣರಾಜ್ಯೋತ್ಸವ ಪೆರೇಡ್ ಗೆ ಕಳುಹಿಸುವುದು ಪದ್ಧತಿ.
ಆದರೆ ಪ್ರತಿ ವರ್ಷ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ 12 ರಾಜ್ಯಗಳ ಸ್ತಬ್ಧ ಚಿತ್ರಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಅಂದರೆ 3 ವರ್ಷಕ್ಕೊಮ್ಮೆ ಪ್ರತಿ ರಾಜ್ಯಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ.
36 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಇರುವ ನಮ್ಮ ದೇಶದಲ್ಲಿ ಪ್ರತಿ ರಾಜ್ಯವೂ ಪ್ರತಿವರ್ಷ ಪೆರೇಡ್ ನಲ್ಲಿ ಭಾಗವಹಿಸುವ ಅವಕಾಶವಿರುವುದಿಲ್ಲ. ಇದು ನಮ್ಮ ದೇಶದಲ್ಲಿ ಗಣರಾಜ್ಯೋತ್ಸವ ಆರಂಭವಾದಾಗಿನಿಂದ ನಡೆದುಬಂದ ಸತ್ಸಂಪ್ರದಾಯ ಮತ್ತು ನಿಯಾಮವಳಿ ಆಗಿರುತ್ತದೆ. ಈ ಸಂಪ್ರದಾಯದಂತೆ 2018 ಮತ್ತು 2021ರಲ್ಲಿ ಕೇರಳ ರಾಜ್ಯವು ತನ್ನ ಶಬ್ದ ಚಿತ್ರಗಳೊಂದಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿತ್ತು.
ಈ ಪುನರಾವರ್ತಿತ ನಿಯಮದಂತೆ ಕಳೆದ ವರ್ಷಗಳಲ್ಲಿ ಭಾಗವಹಿಸಿದ ರಾಜ್ಯಗಳನ್ನು ಬಿಟ್ಟು ಉಳಿದ 12 ರಾಜ್ಯಗಳಲ್ಲಿ ಈ ವರ್ಷ ಭಾಗವಹಿಸುವ ಅವಕಾಶವಿರುತ್ತದೆ ವಿನಹ ಕಳೆದ ವರ್ಷ ಅಂದರೆ 2021ರಲ್ಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿರುವ ಕೇರಳ ರಾಜ್ಯಕ್ಕೆ ಈ ವರ್ಷ ನಿಯಾಮವಳಿಯಂತೆ ಅವಕಾಶವಿರುವುದಿಲ್ಲ. ಆದರೆ ಈ ನಿಯಮಾವಳಿ ತಿಳಿದಿದ್ದರೂ ಕೂಡ ಕೇರಳ ರಾಜ್ಯವು ನಾರಾಯಣ ಗುರುಗಳ ವಿಚಾರವನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದವನ್ನು ಹುಟ್ಟು ಹಾಕುತ್ತಿದೆ.
2021ರಲ್ಲಿ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಿದ್ದ ಕೇರಳ ರಾಜ್ಯಕ್ಕೆ ಇನ್ನೂ ಮೂರು ವರ್ಷ ಬಿಟ್ಟು ಅಂದರೆ 2004ರಲ್ಲಿ ನಿಯಮಾವಳಿ ಪ್ರಕಾರ ಮತ್ತೊಮ್ಮೆ ಅವಕಾಶ ಎಂಬುದಾಗಿ ತಿಳಿದಿದ್ದರೂ ಕೂಡ ಕೇರಳ ಸರ್ಕಾರ ಈ ವರ್ಷವು ಭಾಗವಹಿಸುವ ಅವಕಾಶ ಕೋರಿದ್ದು ನಡೆದು ಬಂದ ಸಂಪ್ರದಾಯ ನಿಯಮಾವಳಿಯಂತೆ ಕೇಂದ್ರ ಸರ್ಕಾರ ಈ ವರ್ಷ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ.
ಈ ಎಲ್ಲಾ ನಿಯಮಾವಳಿಗಳು ಗೊತ್ತಿರುವ ಕೇರಳ ರಾಜ್ಯವು ಶ್ರೀ ನಾರಾಯಣ ಗುರುಗಳ ವಿಚಾರವನ್ನು ಎಳೆದು ತಂದು ವಿವಾದವನ್ನು ಹುಟ್ಟು ಹಾಕುತ್ತಿರುವುದು ಶೋಭೆ ತರುವಂತದ್ದಲ್ಲ. ಕಮ್ಯುನಿಸ್ಟ್ ನಿಲುವು ಹೊಂದಿರುವ ಕೇರಳ ಸರಕಾರವು ಈ ಹಿಂದೆ ಹಿಂದೂ ದೇವಾಲಯಗಳ ಬಗ್ಗೆ ತೋರಿರುವ ನಿಲುವು ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಗಳು ಇಂತಹ ಹಲವಾರು ಹಿಂದೂ ವಿರೋಧಿ ನೀತಿಗಳಿಂದ ಕುಖ್ಯಾತಿ ಹೊಂದಿರುವ ಕಮ್ಯುನಿಸ್ಟರಿಂದ ಶ್ರೀ ನಾರಾಯಣ ಗುರುಗಳ ತತ್ವಾದರ್ಶವನ್ನು ನಾವು ಕಲಿಯಬೇಕಾಗಿಲ್ಲ. ನಾರಾಯಣ ಗುರುಗಳು ಎಲ್ಲರಿಗೂ ಪ್ರಾತಃ ಸ್ಮರಣೀಯರು ಹಾಗೂ ಪೂಜ್ಯಾನೀಯರು.
ಆರಂಭದಿಂದಲೂ ನಡೆದು ಬಂದಿರುವ ಸಂಪ್ರದಾಯ ಮತ್ತು ನಿಯಾಮವಳಿಯನ್ನು ತಿಳಿದುಕೊಂಡು ಕೇರಳ ಸರ್ಕಾರವು ವಿವಾದ ಮಾಡದೇ ನಮ್ಮ ದೇಶದ ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕೆಂದು ಈ ಮೂಲಕ ಕೇರಳ ಸರಕಾರವನ್ನು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

 

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page