Connect with us

ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ನಲ್ಲಿ PIL ಸಲ್ಲಿಕೆ

Published

on

ಪತ್ರಕರ್ತರಿಗೆ ಯಾಕೆ ಜೀವ ವಿಮೆ ಘೋಷಿಸಿಲ್ಲ?: ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ನಲ್ಲಿ PIL ಸಲ್ಲಿಕೆ

ಬೆಂಗಳೂರು: ಮಾಧ್ಯಮದವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರೇ 50 ಲಕ್ಷ ಜೀವ ವಿಮೆ ಘೋಷಿಸಬೇಕು.

ಹಾಗೂ ಮೃತ ಪ್ರತಿನಿಧಿಯ ಕುಟುಂಬಕ್ಕೆ ಕಂಪನಿಯಿಂದ 50 ಲಕ್ಷ ವಿಮೆ ನೀಡಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮಾರಕ ಕೊರೊನಾ ವೈರಸ್​​ ವಿರುದ್ಧ ಹೋರಾಡುತ್ತಿರುವ ವೈದ್ಯರು, ಪೊಲೀಸರು ಮತ್ತು ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಪೌರ ಕಾರ್ಮಿಕರಿಗೆ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಘೋಷಿಸಿದೆ.

ಈ ಮೂಲಕ ಕೊರೊನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ವಾರಿಯರ್ಸ್​ಗೆ 30 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಲಾಗಿದೆ.

ಆದರೀಗ, ವೈದ್ಯರು, ಪೊಲೀಸರು, ಪೌರ ಕಾರ್ಮಿಕರು ಮತ್ತು ಅಂಗನವಾಡಿ ಕಾರ್ಯಕರ್ತರಂತೆಯೇ ತಮ್ಮ ಪ್ರಾಣವನ್ನು ಲೆಕ್ಕಿಸದೇ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಅಂದರೆ ಪತ್ರಕರ್ತರಿಗೆ ಯಾಕೇ ಸರ್ಕಾರ ವಿಮೆ ಘೋಷಿಸಿಲ್ಲ ಎಂಬುದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಪಿಐಎಲ್​​​ ಸಲ್ಲಿಕೆಯಾಗಿದೆ.

ಕೋರಮಂಗಲ ನಿವಾಸಿ ಜಾಕಬ್ ಜಾರ್ಜ್ ಎಂಬ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಚ್. ಸುನೀಲ್ ಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ರಾಜ್ಯ & ಕೇಂದ್ರ ಸರ್ಕಾರಗಳು ಈಗಾಗಲೇ ವೈದ್ಯಕೀಯ ವಿಮೆ ಘೋಷಿಸಿವೆ. ಆರೋಗ್ಯ ಇಲಾಖೆ ವೈದ್ಯರು, ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿಗಳು, ಪೊಲೀಸರು, ಪ್ಯಾರಾ ಮಿಲಿಟರಿಯವರಿಗೆ ವಿಮೆ ಘೋಷಿಸಿದೆ.

ಆದರೆ, ಇಷ್ಟು ಇಲಾಖೆಯ ಸಿಬ್ಬಂದಿಯನ್ನ ಕೊರೊನಾ ವಾರಿಯರ್ಸ್ ಎನ್ನುವ ಸರ್ಕಾರ ಯಾಕೇ ಮಾಧ್ಯಮದವರಿಗೆ ವಿಮೆ ಘೋಷಿಸಿಲ್ಲ ಎಂದು ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ.

ಪತ್ರಕರ್ತರು ಹಗಲು ರಾತ್ರಿಯೆನ್ನದೇ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮದ ಮೂಲಕ ಜನರಿಗೆ ಕೊರೊನಾ ಅರಿವು ಮೂಡಿಸುತ್ತಿದ್ದಾರೆ.

ಸಾರ್ವಜನಿಕರಿಗೆ ಕೊರೊನಾದಿಂದ ಜಾಗರೂಕರಾಗಿರಲು ತಿಳಿಸುತ್ತಿದ್ದಾರೆ. ಇಂತವರಿಗೆ ಯಾವುದೇ ಆರೋಗ್ಯ ಭಧ್ರತೆ ಇಲ್ಲ.

ಸದ್ಯ ಫೀಲ್ಡ್​ನಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ರಕ್ಷಣಾ ಕಿಟ್​ಗಳು ಸಹ ಇಲ್ಲ. ಈಗಾಗಲೇ ಕೆಲ ರಾಜ್ಯದಲ್ಲಿ ಅನೇಕ ಮಾಧ್ಯಮ ಪ್ರತಿನಿಧಿಗಳಿಗೆ ಸೋಂಕು ತಗುಲಿದೆ.

ಹೀಗಾಗಿ ಇವರಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ 50 ಲಕ್ಷ ರೂ. ಜೀವ ವಿಮೆ ಘೋಷಿಸಬೇಕು ಎಂದಿದ್ಧಾರೆ.

ಮಾಧ್ಯಮದವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದರೆ 50 ಲಕ್ಷ ಜೀವ ವಿಮೆ ಘೋಷಿಸಬೇಕು.

ಹಾಗೂ ಮೃತ ಪ್ರತಿನಿಧಿಯ ಕುಟುಂಬಕ್ಕೆ ಕಂಪನಿಯಿಂದ 50 ಲಕ್ಷ ವಿಮೆ ನೀಡಬೇಕು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page