Connect with us

DAKSHINA KANNADA

ಕಡಬ: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ

Published

on

ಕಡಬ : ತುರ್ತು ಸಂದರ್ಭಗಳಲ್ಲಿ ಜನರ ಆರೋಗ್ಯ ಕಾಪಾಡಿ ನೂರಾರು ಜನರಿಗೆ ಆಪತ್ವಾಂಧವನಾಗಿದ್ದ ಕಡಬದ 108 ಆ್ಯಂಬುಲೆನ್ಸ್ ವಾಹನ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾಗಿ ಕಳೆದೊಂದು ತಿಂಗಳಿನಿಂದ ಮೂಲೆಗುಂಪಾಗಿದೆ.

ತುರ್ತು ಸೇವೆಗಳಿಗೆ ಪಕ್ಕದ ಊರುಗಳ ವಾಹನವನ್ನು ಆಶ್ರಯಿಸಬೇಕಾದ ಸಂದಿಗ್ಧತೆಯನ್ನು ಕಡಬದ ಜನತೆ ಅನುಭವಿಸುತ್ತಿದ್ದಾರೆ.

ನಿರಂತರ ಓಡಾಟದಿಂದಾಗಿ ವಾಹನದ ಟಯರ್ ಗಳು ಸಂಪೂರ್ಣವಾಗಿ ಸವೆದಿದ್ದು, ಹೊಸ ಟಯರ್ ಅಳವಡಿಸಬೇಕೆನ್ನುವ ಬೇಡಿಕೆ ಇನ್ನೂ ಈಡೇರಿಲ್ಲ. ಅದರಿಂದಾಗಿ ವಾಹನ ಮೂಲೆ ಸೇರಿದ್ದು ಜನರು ಸೇವೆಯಿಂದ ವಂಚಿತರಾಗಿದ್ದಾರೆ.

ಕಡಬ ತಾಲೂಕನ್ನು ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಈ ಹಿಂದೆಯೂ ಟಯರ್ ಸಮಸ್ಯೆ ಎದುರಾಗಿ ವಾರಗಟ್ಟಲೆ ಮೂಲೆಗೆ ಸರಿದು ನಿಂತಾಗ ಮಾಧ್ಯಮ ವರದಿ ಪ್ರಕಟಿಸಿ ಸಂಬಂಧಪಟ್ಟವರನ್ನು ಎಚ್ಚರಿಸಿದ ಪರಿಣಾಮ ಹೊಸ ಟಯರ್‌ಗಳನ್ನು ಅಳವಡಿಸಲಾಗಿತ್ತು.

2024 ಎಪ್ರಿಲ್‌ನಲ್ಲಿ ಕಡಬಕ್ಕೆ ಅತ್ಯಾಧುನಿಕ ವೆಂಟಿಲೇಟರ್ ಇರುವ ಹೊಸ ಆ್ಯಂಬುಲೆನ್ಸ್‌ ವಾಹನವನ್ನು ನೀಡಲಾಗಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಕಿಲೋಮೀಟರ್ ಓಡಿದ್ದರಿಂದಾಗಿ ಟಯರ್ ಸವೆದಿದೆ. ಟಯರ್ ಬದಲಾವಣೆ ಮಾಡದ ಕಾರಣ 2024 ಡಿಸೆಂಬರ್ 06 ರಿಂದ ಆ್ಯಂಬುಲೆನ್ಸ್ ಅನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ವಠಾರದಲ್ಲಿ ನಿಲ್ಲಿಸಲಾಗಿದೆ.

ಇದನ್ನೂ ಓದಿ: 19 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸೇನಾ ಸಿಬ್ಬಂದಿ..! AI ತಂತ್ರಜ್ಞಾನದಿಂದ ಅಂದರ್..!

ಇದೀಗ ತುರ್ತು ಸಂದರ್ಭದಲ್ಲಿ ಪಕ್ಕದ ಆಲಂಕಾರು, ಬೆಳ್ಳಾರೆ, ಶಿರಾಡಿ, ಸುಬ್ರಹ್ಮಣ್ಯದಿಂದ ಆ್ಯಂಬುಲೆನ್ಸ್ ಬರುವವರೆಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಡಬದಲ್ಲಿ ಈಗಾಗಲೇ ಅತ್ಯಾಧುನಿಕ ಸುಸಜ್ಜಿತ ಸಮುದಾಯ ಆಸ್ಪತ್ರೆ ನಿರ್ಮಿಸಲಾಗಿದ್ದರೂ, ಖಾಯಂ ವೈದ್ಯರ ಕೊರತೆಯಿಂದಾಗಿ ತುರ್ತು ಸಂದರ್ಭದಲ್ಲಿ ಪುತ್ತೂರು ಅಥವಾ ಮಂಗಳೂರಿನ ಆಸ್ಪತ್ರೆಯನ್ನು ಅವಲಂಬಿಸ ಬೇಕಾಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ವಾಹನಕ್ಕೆ ಹೊಸ ಟಯರ್ ಗಳನ್ನು ಅಳವಡಿಸುವ ಮೂಲಕ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲು ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಇಲ್ಲಿನ 108 ವಾಹನದ ಸಿಬ್ಬಂದಿಯನ್ನು ಪಕ್ಕದ ಸುಳ್ಯ, ಬೆಳ್ಳಾರೆ, ಶಿರಾಡಿ, ಆಲಂಕಾರು, ಕೊಕ್ಕಡದ ಆ್ಯಂಬುಲೆನ್ಸ್ ಗಳಿಗೆ ನಿಯೋಜಿಸಲಾಗಿದ್ದು, ಕಳೆದೊಂದು ವಾರದಿಂದ ಸುಳ್ಯದ ಆ್ಯಂಬ್ಯುಲೆನ್ಸ್ ಸಂಚಾರವನ್ನು ಕೂಡಾ ಟಯರ್ ಸವೆದ ಕಾರಣಕ್ಕೆ ಸ್ಥಗಿತಗೊಳಿಸಲಾಗಿದೆ.

 

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

“ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

Published

on

ಮಂಗಳೂರು: ಕರ್ನಾಟಕದ ಜಾದೂ ಕಲಾವಿದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಗೆ ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯು ಭಾರತದ ಅಗ್ರಗಣ್ಯ ಜಾದೂಗಾರ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ-ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ನೀಡಿದೆ. ವಿಶಾಖಪಟ್ಟಣದ ಲೋಕಸಭಾ ಸದಸ್ಯ ಭರತ್ ಮುತ್ತುಕುಮುಲಿ ಅವರು ಕುದ್ರೋಳಿ ಗಣೇಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೋಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ಧಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ಕುದ್ರೋಳಿ ಗಣೇಶ್ ಅವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು, ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ.

Continue Reading

DAKSHINA KANNADA

ಅಕ್ರಮ ಗೋ ಸಾಗಾಟ; ಸ್ಕೂಟರ್ ಬಿಟ್ಟು ಆರೋಪಿ ಪರಾರಿ

Published

on

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್‌ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸ್ಕೂಟ‌ರ್ ಸವಾರ ಗಾಡಿ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page