Connect with us

ಪವರ್ ಸ್ಟಾರ್ ಬರ್ತ್ ಡೇ ಸೆಲೆಬ್ರೇಶನ್ ಗೂ ತಟ್ಟಿದ ಪವರ್ ಫುಲ್ ಕೊರೊನಾ ವೈರಸ್…

Published

on

ಕೊರೊನಾ ವೈರಸ್ ಭೀತಿ: ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ ನಟ ಪುನೀತ್ ರಾಜ್ ಕುಮಾರ್

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮಾರ್ಚ್ 17 ರಂದು ಹುಟ್ಟುಹಬ್ಬದ ಸಂಭ್ರಮ.

ಆದರೆ ಈ ಬಾರಿ ಕೊರೋನಾ ವೈರಸ್ ಎಲ್ಲೆಡೆ ತಾಂಡವವಾಡುತ್ತಿರುವ ಹಿನ್ನಲೆಯಲ್ಲಿ ಇದನ್ನು ನಿಯಂತ್ರಿಸಲು ಸರ್ಕಾರ ಸರ್ಕಸ್ ಮಾಡುತ್ತಿದೆ.

ಅಲ್ಲದೇ ವೈರಸ್ ನಿಯಂತ್ರಿಸುವ ಸಲುವಾಗಿ ಸರ್ಕಾರಕ್ಕೆ ಕೈಜೋಡಿಸುವ ನಿಟ್ಟಿನಲ್ಲಿ ಸ್ಟಾರ್ ನಟ ಪುನೀತ್ ರಾಜ್ ಕುಮಾರ್ ತಮ್ಮ 45ನೇ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

“ನೀವು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರುವುದೇ ನನಗೆ ಕೊಡುವ ಒಂದು ದೊಡ್ಡ ಉಡುಗೊರೆ’.

‘ನಾನು ಈ ವರ್ಷ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಅಭಿಮಾನಿಗಳ್ಯಾರೂ ದೂರದೂರುಗಳಿಂದ ಬರುವ ಪ್ರಯತ್ನ ಮಾಡದಿರಿ. ನಾನು ಬೆಂಗಳೂರಿನಲ್ಲಿ ಇರುವುದಿಲ್ಲ’.

‘ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಜನರು ಒಂದೆಡೆ ಸೇರದಂತೆ ಸರ್ಕಾರ ಕೂಡ ಸೂಚಿಸಿದೆ. ನಾವೆಲ್ಲರೂ ಅದನ್ನು ಅನುಸರಿಸೋಣ’.

‘ಅಭಿಮಾನಿಗಳು ಸುರಕ್ಷಿತವಾಗಿದ್ದರೆ ಅದೇ ನನಗೆ ದೊಡ್ಡ ಉಡುಗೊರೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ” ಎಂದು ಪುನೀತ್ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಇನ್ನು ಕೊರೋನಾ ವೈರಸ್ ಭೀತಿಯಿಂದಾಗಿ ಸಭೆ-ಸಮಾರಂಭ, ಮದುವೆ-ಮುಂಜಿ, ನಾಮಕರಣ, ಹುಟ್ಟುಹಬ್ಬದಂತಹ ಕಾರ್ಯಕ್ರಮಗಳನ್ನು ಒಂದು ವಾರಗಳ ಕಾಲ ಮಾಡುವಂತಿಲ್ಲ.

ಕೇವಲ 100 ಜನರನ್ನು ಮಾತ್ರ ಸೇರಿಸಿ ಮದುವೆ ಮಾಡಿಸಿ ಎಂದು ಸರ್ಕಾರ ಈಗಾಗಲೇ ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ನಟ ಪುನೀತ್​ ರಾಜ್​ಕುಮಾರ್​ ಕೂಡ ಇದೇ ಸೂಚನೆಯನ್ನು ಅನುಸರಿಸಿದ್ದು, ಮಾರ್ಚ್ 17ರಂದು ತಮ್ಮ ಅಭಿಮಾನಿಗಳ ಸುರಕ್ಷತೆಗಾಗಿ ಹಾಗೂ ಎಲ್ಲರ ಒಳಿತಿಗಾಗಿ ಹುಟ್ಟುಹಬ್ಬದ ಆಚರಣೆಯನ್ನು ಮಾಡಿಕೊಳ್ಳುತ್ತಿಲ್ಲ.

ವಿಡಿಯೋ ನೋಡಿ…

Advertisement
Click to comment

Leave a Reply

Your email address will not be published. Required fields are marked *

kerala

ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ

Published

on

ತಿರುವನಂತಪುರ: 2024ರಲ್ಲಿ ನಡೆದಿದ್ದ ಮಹಾಕುಂಭಮೇಳದಲ್ಲಿ  ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಹವಾ ಸೃಷ್ಟಿಸಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ತಂದೆ ತೋರಿಸಿದ ಹುಡುಗನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮೊನಾಲಿಸಾ ತನ್ನ ಗೆಳೆಯನ ಜೊತೆ ಬಂದು ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಆದ ಬಳಿಕ ಮೊನಾಲಿಸಾ ಅವರ ಬದುಕೇ ಬದಲಾಗಿದೆ. ಸಾಲು ಸಾಲು ಸಿನಿಮಾ ಆಫರ್ ಗಳು ಬರುತ್ತಿದೆ. ಪ್ರಸ್ತುತ ಶೂಟಿಂಗ್ ಗಾಗಿ ತಿರುವನಂತಪುರಕ್ಕೆ ಬಂದಿದ್ದ ಮೊನಾಲಿಸಾ ಇದೀಗ ಗೆಳೆಯನ ಜೊತೆ ಬಮದು ದೂರನ್ನು ನೀಡಿದ್ದಾರೆ.

Continue Reading

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page