Connect with us

bangalore

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಇನ್ನಿಲ್ಲ

Published

on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.


ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು.

ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
‘ನಮ್ಮ ತಂದೆ ಶಿವರಾಮ್​ರವರು ಇನ್ನು ನಮ್ಮ ಜತೆ ಇಲ್ಲ. ಶಿವರಾಮ್​ರವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಮ್​ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಅವರ ಮಗ ಲಕ್ಷ್ಮೀಶ್​ ಹೇಳಿದ್ದಾರೆ.

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು.

bangalore

ಚಲಿಸುತ್ತಿದ್ದ ಕಾರು ಅಗ್ನಿಗಾಹುತಿ; ಪ್ರಾಣಾಪಾಯದಿಂದ ಪಾರಾದ ಚಾಲಕ

Published

on

ಬೆಂಗಳೂರು: ಚಲಿಸುತ್ತಿದ್ದ ಕಾರಿಗೆ ರಸ್ತೆಮಧ್ಯೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಯಶವಂತಪುರ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ನಡೆದಿದೆ.


ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌, ಚಾಲಕ ತಕ್ಷಣ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ- ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಕಾರಿಗೆ ಬೆಂಕಿ ಹೊತ್ತಿಕೊಂಡ ಕಾರಣ ತಿಳಿದುಬಂದಿಲ್ಲ.

Continue Reading

bangalore

ಕೆಎಸ್ಆರ್‌ಟಿಸಿ ಬಸ್‌-ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕನ ಜೀವ ಉಳಿದಿದ್ದೇ ಒಂದು ಪವಾಡ

Published

on

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ಪಿಕ್‌-ಅಪ್‌ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್‌ ಬಳಿ ಬುಧವಾರ(ಜ.14) ನಡೆದಿದೆ.


ಅದೃಷ್ಟವಶಾತ್‌, ಬೊಲೆರೋ ಪಿಕ್‌-ಅಪ್‌ ಚಾಲಕ ಪವಾಡ ಎಂಬಂತೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ ಪಿಕ್‌-ಅಪ್‌ನ ಮುಂಬಾಗ ಹಾನಿಗೊಳಗಾಗಿದೆ. ಎರಡು ದಿನದ ಹಿಂದೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಭೀಕರ ಅಪ*ಘಾತಕ್ಕೆ ಮೂವರು ವಿದ್ಯಾರ್ಥಿಗಳು ಬ*ಲಿ

ಈ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯಲ್ಲಿ ನಡೆದಿದೆ.

Continue Reading

bangalore

ಅಪಘಾತವೆಂದು ಬಿಂಬಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ರಹಸ್ಯ ಬಯಲು

Published

on

ಬೆಂಗಳೂರು: ಸಿನಿಮೀಯಾ ಶೈಲಿಯಲ್ಲಿ ಸೃಷ್ಟಿಸಲಾದ ಅಪಘಾತದ ಹಿಂದಿನ ರಹಸ್ಯ ಬಯಲಾಗಿದೆ. ಅಪಘಾತದ ನೆಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲಾನ್‌ ಹಾಕಿದ್ದ ತಂಡವೊಂದು, ಟೆಂಪೋದಿಂದ ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಆತನ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಸೈಯದ್‌ ಯಾಸೀನ್‌ ಹಲ್ಲೆಗೊಳಗಾದ ವ್ಯಕ್ತಿ. ಜನವರಿ 7ರಂದು ಸಂಜೆ ಯಾಸೀನ್‌ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಉದ್ದೇಶ ಪೂರ್ವಕವಾಗಿ ಹಿಂಬದಿಯಿಂದ ಬಂದ ಟೆಂಪೋ ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತವನ್ನು ಸಂಚಾರಿ ನಿಯಮ ಉಲ್ಲಂಘನೆ ಎಂದು ಭಾವಿಸಿ ಚಿಕ್ಕಜಾಲ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆದರೆ, ಇದೀಗ ಯಾಸೀನ್‌ನ ವೈದ್ಯಕೀಯ ರಿಪೋರ್ಟ್‌ ಪೊಲೀಸರ ತನಿಖೆಯ ದಿಕ್ಕನ್ನೇ ತಿರುಗಿಸಿದೆ. ದೇಹದ ಮೇಲಿನ ಅಪಘಾತದ ಗಾಯಗಳನ್ನು ಹೊರತು ಪಡಿಸಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಗಂಭೀರ ಗುರುತುಗಳು ಪತ್ತೆಯಾಗಿವೆ. ಕಾಲಿನ ಮೂಳೆ ಮುರಿತದ ಜತೆಗೆ ಹೊಟ್ಟೆ ಮತ್ತು ಕುತ್ತಿಗೆಯ ಭಾಗದಲ್ಲಿ ತೀವ್ರವಾದ ಗಾಯಗಳಿದ್ದವು. ಡಿಕ್ಕಿ ಹೊಡೆದ ಬಳಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವುದಾಗಿ ಖಚಿತವಾಗಿದೆ.

ಇದನ್ನೂ ಓದಿ: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ 3 ಮೊಬೈಲ್‌ ಸಹಿತ ಸಿಮ್‌, ಚಾರ್ಜರ್‌ ಪತ್ತೆ

ಯಾಸೀನ್‌ನ ತಂದೆ ನೀಡಿದ ದೂರಿನ ಅನುಸಾರ, ಪೊಲೀಸರು ಕೆಹಕಶನ್ ಖಾಲಿದ್, ಫರ್ಹಾನ್ ಖಾಲಿದ್, ಉಸ್ಮಾನ್, ಹಾಶಿಮ್ ಮತ್ತು ಸೈಯದ್ ರಾಹಬೆರ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದುವೆಯಾದ ಬಳಿಕ ಉಂಟಾದ ವೈಯಕ್ತಿಕ ದ್ವೇಷವೇ ಈ ಕೊಲೆಯ ಸಂಚಿಗೆ ಮೂಲ ಕಾರಣ ಎಂದು ಆರೋಪಿಸಲಾಗಿದೆ. ಚಿಕ್ಕಜಾಲ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page