Connect with us

DAKSHINA KANNADA

‘ಕಾಂತಾರ’ ನಮ್ಮ ನಡೆ-ನುಡಿ, ಸಂಸ್ಕೃತಿಯ ಪ್ರತಿಬಿಂಬ-ಡಾ.ಡಿ ವೀರೇಂದ್ರ ಹೆಗ್ಗಡೆ

Published

on

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ। ಡಿ. ವಿರೇಂದ್ರ ಹೆಗ್ಗಡೆ ಅವರು ನಿನ್ನೆ ಸಂಜೆ ಮಂಗಳೂರಿನ ಸಿನೆಮಾ ಮಂದಿರದಲ್ಲಿ ಕಾಂತಾರ ಕನ್ನಡ ಚಲನಚಿತ್ರವನ್ನು ಕುಟುಂಬ ಸಮೇತ ವೀಕ್ಷಿಸಿದರು.


ಸಿನೆಮಾ ವೀಕ್ಷಿಸಿದ ಬಳಿಕ ಡಾ। ವೀರೇಂದ್ರ ಹೆಗ್ಗಡೆ ಅವರು ಮಾಧ್ಯಮದವರ ಜತೆ ಮಾತನಾಡಿ, ನಾನು ಸಿನೆಮಾ ನೋಡದೆ ಬಹಳ ದಿನಗಳಾಗಿವೆ.

ಕಾಂತಾರ ಸಿನೆಮಾ ಒಂದು ಪ್ರದೇಶದ ನಡೆ-ನುಡಿ, ಸಂಸ್ಕೃತಿ, ಆಚಾರ-ವಿಚಾರಗಳನ್ನೊಳಗೊಂಡು ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರವು ಯುವಕರಿಗೆ ಹೊಸ ಕತೆ ಹಾಗೂ ಹಿಂದಿನ ನಂಬಿಕೆಗಳನ್ನು ನೆನಪಿಸುತ್ತದೆ ಎಂದರು.


ನಟ ಚೇತನ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ದೈವಾರಧನೆಯು ಎರಡೂ ಜಿಲ್ಲೆಯಲ್ಲಿ ವ್ಯಾಪಕವಾಗಿ ಬೆಳೆದಿದೆ. ಇದು ಹಿಂದಿನಿಂದಲೂ ಬಂದ ಸಂಸ್ಕೃತಿ.

ಚೇತನ್ ಅವರು ಹಿಂದೂ ಧರ್ಮದ ಸೂಕ್ಷ್ಮತೆಯನ್ನು ಯಾವ ರೀತಿ ನೋಡಿದ್ದಾರೆ ತಿಳಿದಿಲ್ಲ. ಧರ್ಮದ ಆಚರಣೆಯನ್ನು ವಿಮರ್ಶಿಸುವ ಅಗತ್ಯವಿಲ್ಲ ಎಂದರು.

DAKSHINA KANNADA

ಗಾಂಜಾ ಸೇವನೆ ಆರೋಪ; ನಾಲ್ವರ ಬಂಧನ

Published

on

ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ನಾಲ್ಕು ಮಂದಿಯನ್ನು ಕಂಕನಾಡಿ ನಗರ ಮತ್ತು ಉರ್ವ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. 

ಅಬ್ದುಲ್ ಖಾದರ್ ಸಹರನ್ , ಹರ್ಷಿತ್(22), ಆನಂದ ಗಿರೀಶ್ (27), ಅಶೋಕ್ (22) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಜಪ್ಪಿನಮೊಗರು ಜಂಕ್ಷನ್ ಹತ್ತಿರ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ವೈನು ದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಇದೀಗ ಮೂವರು ಯುವಕರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು : ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Published

on

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ನೀತಿಗಳೇ ಕಾರಣ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆ ನಡೆಯಿತು. ಕೇಂದ್ರ ಸರಕಾರವು ಬಡ ಜನರ ಜೀವನದೊಂದಿಗೆ ಚೆಲ್ಲಾಟ ನಡೆಸುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು.

ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ “ಇಂದು ನಿರುದ್ಯೋಗ ಮತ್ತು ಬೆಲೆ ಏರಿಕೆ ನಮಗೆ ದೊಡ್ಡ ಸಮಸ್ಯೆ. ಬೆಲೆಏರಿಕೆಯನ್ನು ತಡೆ ಗಟ್ಟುವುದಾಗಿ ಹೇಳಿದ ನರೇಂದ್ರ ಮೋದಿ ಆಧಿಕಾರಕ್ಕೆ ಬಂದ ಬಳಿಕ ತಮ್ಮ ಮಾತನ್ನು ಮರೆತಿದ್ದಾರೆ. ಕಚ್ಛಾ ತೈಲದ ಬೆಲೆ ಏರಿಕೆಯಾದ್ದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಆನಿವಾರ್ಯ ಎಂದು ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಒಬ್ಬ ದಡ್ಡ” ಎಂದು ಟೀಕಿಸಿದರು.

ಹರೀಶ್‌ ಕುಮಾರ್ ಮಾತನಾಡಿ “ಕಳೆದ 11 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದರೂ ಭಾರತದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಿಲ್ಲ. ಅದರ ಬದಲು ಏರಿಸಿದೆ” ಎಂದು ಆರೋಪಿಸಿದರು.

Continue Reading

DAKSHINA KANNADA

ಪಹಲ್ಗಾಮ್‌ ದಾಳಿ ಕುರಿತು ಅಭದ್ರತೆ ಹೇಳಿಕೆ ನೀಡಿದ ಸಿದ್ದು ; ಸಿಡಿದೆದ್ದ ಕ್ಯಾ. ಚೌಟ

Published

on

ಮಂಗಳೂರು : ಕಳೆದ ವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ನೀಡಿರುವಂತಹ ಹೇಳಿಕೆಯು ಭಾರಿ ವೈರಲ್ ಆಗಿತ್ತು. ಪಾಕ್‌ ನ್ಯೂಸ್‌ ಚಾನಲ್‌ಗಳಲ್ಲಿಯೂ ಹೆಡ್‌ಲೈನ್ ಆಗಿ ಗುರುತಿಸಿಕೊಂಡಿತ್ತು.

ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ‘ಇಂತಹ ಹೇಳಿಕೆಗಳು ದಾಳಿಯಲ್ಲಿ ಹುತಾತ್ಮರಾದ ನಮ್ಮ ಭದ್ರತಾ ಸಿಬ್ಬಂದಿಯ ಶೌರ್ಯ ಮತ್ತು ಬಲಿದಾನ ಕಡೆಗಣಿಸಿದಂತಾಗುತ್ತದೆ. ಇದನ್ನು ಬಲವಾಗಿ ಖಂಡಿಸಬೇಕು’ ಎಂದು ಸಂಸದ ಕ್ಯಾ. ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನದ ಜೊತೆ ಯುದ್ಧ ಸಾರುವ ಅಗತ್ಯ ಇಲ್ಲ” ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕ್ಯಾ. ಚೌಟ , “ಪಹಲ್ಗಾಮ್‌ ನಲ್ಲಿ ನಡೆದ ಘಟನೆ ನಮ್ಮ ರಾಷ್ಟ್ರದ ಮೇಲೆ ನಡೆದ ಹೇಡಿತನ ದಾಳಿ. ಜವಾಬ್ದಾರಿಯುತ ಸ್ಥಾನದಲ್ಲಿ ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ‘ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ’ ಎಂಬ ರೀತಿಯ ಹೇಳಿಕೆ ನೀಡಿರುವುದು ಅಕ್ಷಮ್ಯ” ಎಂದು ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page