Connect with us

LATEST NEWS

Kapu: ಮಿನಿ ಟೆಂಪೋ ಪಲ್ಟಿ; ಐವರು ಸಾವು, ಹಲವರಿಗೆ ಗಾಯ

Published

on

ಕಾಪು: ಡೆಕೋರೇಷನ್ ಗೆ ಹೋಗುತ್ತಿದ್ದ ಮಿನಿ ಟೆಂಪೋ ಪಲ್ಟಿಯಾಗಿ ಐವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೋತಲಕಟ್ಟೆಯ ಬಳಿ ರವಿವಾರ (ನ.30) ಮಧ್ಯಾಹ್ನ ನಡೆದಿದೆ.

ಕಾಪುವಿನಿಂದ ಮಲ್ಪೆಗೆ ತೆರಳುತ್ತಿದ್ದ ಡೆಕೋರೇಷನ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿಂದ ಸರ್ವಿಸ್ ರಸ್ತೆಗೆ ಬಿದ್ದಿದೆ. ಇದರ ಪರಿಣಾಮ ಟೆಂಪೋದಲ್ಲಿದ್ದ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕೆರೆಗೆ ಹಾ*ರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆ*ತ್ಮಹ*ತ್ಯೆ

ಗಾಯಾಳುಗಳ ಪೈಕಿ ಐವರು ಮೃತಪಟ್ಟಿದ್ದು, ಇನ್ನೂ ಹಲವು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೋದಲ್ಲಿ ಒಟ್ಟು 12 ಮಂದಿ ಸಂಚರಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

LATEST NEWS

ಪತಿಯನ್ನು ನಂಬಿ ಪ್ರಾ*ಣ ಕಳೆದುಕೊಂಡ ಕಬಡ್ಡಿ ಆಟಗಾರ್ತಿ

Published

on

ಮಂಗಳೂರು/ನಾಗ್ಪುರ : ಪ್ರತಿಭಾವಂತ ಕಬಡ್ಡಿ ಆಟಗಾರ್ತಿಯೊಬ್ಬರು ಮನೆಯಲ್ಲೇ ಕೀಟನಾಶಕ ಸೇವಿಸಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಕಿರಣ್ ಸೂರಜ್ ದಾಧೆ (29) ಆ*ತ್ಮಹ*ತ್ಯೆಗೆ ಶರಣಾದ ಆಟಗಾರ್ತಿ.

ಕಿರಣ್ ಕುಟುಂಬದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿಲ್ಲ. ಬಿ.ಎ ಪದವೀಧರೆಯಾದ ಕಿರಣ್, ಸೇನೆ, ಪೊಲೀಸ್, ಹೋಮ್ ಗಾರ್ಡ್ ಮತ್ತು ಇತರ ಸರ್ಕಾರಿ ಉದ್ಯೋಗಗಳಿಗಾಗಿ ನಿರಂತರವಾಗಿ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ.

ಇದೇ ಸಂದರ್ಭ ಸ್ವಪ್ನಿಲ್ ಜಯದೇವ್ ಎಂಬ ಯುವಕನ ಪರಿಚಯವಾಗಿದೆ. ತನ್ನನ್ನು ಮದ್ವೆಯಾದ್ರೆ ಸರ್ಕಾರಿ ಉದ್ಯೋಗ ಕೊಡಿಸೋದಾಗಿ ಹೇಳಿದ್ದ. ಅದನ್ನು ನಂಬಿ ಮದುವೆಯಾದ ಬಳಿಕ ಆತನ ನಿಜರೂಪ ಬಯಲಾಗಿದೆ. ಸ್ವಲ್ಪ ಸಮಯದ ಬಳಿಕ ಆತ ನಿರಂತರ ಕಿರುಕು*ಳ ನೀಡಲು ಆರಂಭಿಸಿದ್ದಾನೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರೂ ಈತನ ಕಿರುಕು*ಳ ಹೆಚ್ಚಾಗುತ್ತಲೇ ಇತ್ತು ಎನ್ನಲಾಗಿದೆ.

ಇದನ್ನೂ ಓದಿ : ಸನ್ನಿ ಲಿಯೋನ್ ಫೋಟೋ ಪೋಸ್ಟ್ ಮಾಡಿದ ಆರ್‌ ಅಶ್ವಿನಿ; ನೆಟ್ಟಿಗರು ಶಾಕ್!

ಗಂಡ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಬೆ*ದರಿಸಿ ಮಾನಸಿಕವಾಗಿ ಹಿಂ*ಸೆ ನೀಡುತ್ತಿದ್ದ. ಇದರಿಂದ ಮನನೊಂದು ಕೀಟನಾಶಕ ಸೇವಿಸಿ ಪ್ರತಿಭಾವಂತ ಆಟಗಾರ್ತಿ ಜೀವಾಂ*ತ್ಯಗೊಳಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page