Connect with us

LATEST NEWS

Karkala: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು

Published

on

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯಲ್ಲಿ ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ನಡೆದಿದೆ.

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಜು.9ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ನಡೆದಿದೆ.

ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ರಸ್ತೆಯ ಬದಿಯ ಚರಂಡಿಗೆ ಕಾರು ಉರುಳಿ ಬಿದ್ದಿದೆ.

ಭಾನುವಾರ ತಡರಾತ್ರಿ ನಡೆದ ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಈ ಪ್ರಯಾಣಿಸುತ್ತಿದ್ದ ಕಾರು ಎನ್ನಲಾಗಿದೆ.

ಗಾಯಾಳಗಳನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

 

DAKSHINA KANNADA

ಶೂಟ್ ಮಾಡಿದರೆ ಮಾತ್ರ ಗೋಹತ್ಯೆ ನಿಲ್ಲಿಸಲು ಸಾಧ್ಯ : ಡಾ. ಭರತ್ ಶೆಟ್ಟಿ ವೈ

Published

on

ಮಂಗಳೂರು: “ಗೋವುಗಳನ್ನು ವಧೆ ಮಂಗಳೂರಿನಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಾಗುತ್ತಿದ್ದು, ಸಚಿವ ಮಂಕಾಳ ವೈದ್ಯ ಹೇಳಿದಂತೆ ಆರೋಪಿಗಳ ಮೇಲೆ ಗುಂಡಿಕ್ಕಿ ಕ್ರಮ ಕೈಗೊಂಡರೆ ಗೋ ವಧೆ ನಿಲ್ಲಿಸಲು ಸಾಧ್ಯ. ಪೊಲೀಸರು ಸಚಿವರ ಸಲಹೆ ಪಾಲನೆ ಮಾಡಲು ಮುಂದಾಗಬೇಕು” ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಹೇಳಿದ್ದಾರೆ.

“ಮಂಗಳೂರಿನ ಅಳಕೆಯಲ್ಲಿ ಅಕ್ರಮ ಗೋ ವಧೆ ಕೇಂದ್ರವನ್ನು ಮೇಯರ್ ಮನೋಜ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ಪತ್ತೆ ಮಾಡಿದನ್ನು ಶ್ಲಾಘಿಸುತ್ತೇನೆ. ದರೋಡೆಕೋರರ ವಿರುದ್ಧ ಫೈರಿಂಗ್ ಮಾಡುವ ಪೊಲೀಸರು ಅಕ್ರಮ ಗೋ ಸಾಗಾಟಗಾರರ ವಿರುದ್ಧವು ಇಂಥ ಕ್ರಮ ಕೈಗೊಂಡರೆ ತಾನಾಗಿಯೇ ಕಡಿಮೆ ಆಗುವುದರಲ್ಲಿ ಸಂಶಯವಿಲ್ಲ. ಅಕ್ರಮ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ ಬಿಜೆಪಿ ಸರ್ಕಾರ ಆಸ್ತಿ ಮುಟ್ಟುಗೋಲು ಕ್ರಮ ಜಾರಿಗೆ ತಂದು ಅಕ್ರಮ ಗೋ ವದೆ ಮಾಡುವವರ ವಿರುದ್ಧ ಕ್ರಮ ಕೈಗೊಂಡಿದೆ.” ಎಂದರು.

ಇದನ್ನೂ ಓದಿ : ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ ಮಗ ಆಯ್ಕೆ

“ಇಷ್ಟರವರೆಗೆ ನನ್ನ ಕ್ಷೇತ್ರದಲ್ಲಿಯೇ ಹಲವು ಪ್ರಕರಣ ದಾಖಲಿಸಿ ಆಸ್ತಿ ಮುಟ್ಟುಗೋಲು ಹಾಕಿಸಿದ್ದೇನೆ. ಕಾಂಗ್ರೆಸ್ ಸರ್ಕಾರ ಮಾತ್ರ ಗೋ ವಧೆ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡಿದ್ದು ಮತ್ತೆ ಕಸಾಯಿಖಾನೆಗಳು ತಲೆ ಎತ್ತಿವೆ” ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

Continue Reading

BANTWAL

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾ*ವು

Published

on

ಬಂಟ್ವಾಳ : ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.

ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟವರು. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ತನ್ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆನ್ಲೈನ್ ವಂಚನೆ ; ಕೊನೆಗೂ ಪೊಲೀಸರ ಕೈವಶವಾದ ಖದೀಮ

ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

LATEST NEWS

ದೆಹಲಿ ಮತ ಏಣಿಕೆ ಆರಂಭ; ಗದ್ದುಗೆ ಏರುವವರು ಯಾರು?

Published

on

ಮಂಗಳೂರು/ಹೊಸದಿಲ್ಲಿ: ದೇಶದ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.5ರಂದು ಒಟ್ಟು ಶೇ.60.54ರಷ್ಟು ಮತದಾನವಾಗಿತ್ತು. ಶನಿವಾರ (ಫೆ.08) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಆಪ್, ಕಾಂಗ್ರೆಸ್ ಗೆ ಇದು ಮಹತ್ವದ ಚುನಾವಣೆಯಾಗಿದೆ. ಕಳೆದ ಎರಡು ಚುನಾವಣೆಗಳಲ್ಲಿ ಬಹುಮತ ಸಾಧಿಸಿ ಅಧಿಕಾರ ನಡೆಸಿರುವ ಅರವಿಂದ ಕೇಜಿವಾಲ್ ಅವರ ಆಮ್ ಆದ್ಮಿ ಪಕ್ಷವು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಂದಾಜಿನಲ್ಲಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಎಲ್ಲಾ ಪ್ರಶ್ನೆ, ಕುತೂಹಲಗಳಿಗೆ ಇಂದು ಉತ್ತರ ಸಿಗಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ ಮಗ ಆಯ್ಕೆ

ದಿಲ್ಲಿ ಗೆದ್ದವನು ದೇಶದ ದಿಲ್​ ಗೆದ್ದಂತೆ. ಆಮ್​​ ಆದ್ಮಿ, ಬಿಜೆಪಿ ನಡುವೆ ಟಗ್​ ಆಫ್ ವಾರ್​ ಏರ್ಪಟ್ಟಿದ್ದು, ಕಾಂಗ್ರೆಸ್​​ ಆಟಕ್ಕುಂಟು ಲೆಕ್ಕಕ್ಕಿಲ್ಲದ ಹೋರಾಟಕ್ಕಿಳಿದಿದೆ. ದೆಹಲಿ ವಿಧಾನಸಭಾ ದಂಗಲ್‌ನ ಕ್ಲೈಮ್ಯಾಕ್ಸ್​​ ಹಂತಕ್ಕೆ ಬಂದು ನಿಂತಿದೆ. ಇಂದ್ರಪ್ರಸ್ಥದ ಗದ್ದುಗೆ ಯಾರಿಗೆ ಅನ್ನೋ ಜನಾದೇಶ ಇಂದೇ ಪ್ರಕಟ ಆಗಲಿದೆ. ಮತಗಟ್ಟೆ ಸಮೀಕ್ಷೆಗಳು ಕೇಜ್ರಿ ಕಟ್ಟಿದ್ದ ವಾಲ್​​​​ ನೆಲಸಮವಾಗಲಿದ್ದು, ಹೂವು ಅರಳುವ ಸಮಯ ಅಂತ ಭವಿಷ್ಯ ನುಡಿದಿವೆ.

ಡೆಲ್ಲಿ ದಂಗಲ್ ದೇಶದ ರಾಜಧಾನಿ ಈಗ ಹೊಸ ಚರಿತ್ರೆ ಬರೆಯಲು ಹೊರಟಿದೆ. ಬುಧವಾರ ಮತದಾರ ಬರೆದ ಹಣೆಬರಹ ಇವತ್ತೇ ಪ್ರಕಟವಾಗಲಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page