Connect with us

LATEST NEWS

ರವೀಂದ್ರ ಕಲಾ ಭವನದ ಮೆಟ್ಟಿಲಿನಲ್ಲಿ ಕುಳಿತು ಅಧಿಕಾರ ಸ್ವೀಕರಿಸಿದ ಸಚಿವ ಸುನಿಲ್‌ ಕುಮಾರ್‌

Published

on

ಬೆಂಗಳೂರು: ತನ್ನ ಭಿನ್ನ ನಡವಳಿಕೆ, ಮಾತಿನ ಮೂಲಕ ಸುದ್ದಿಯಾಗುತ್ತಿದ್ದ ಕಾರ್ಕಳ ಶಾಸಕ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿ ರವೀಂದ್ರ ಕಲಾಕ್ಷೇತ್ರದ ಮುಂಭಾಗದ‌ ಮೆಟ್ಟಿಲು ‌ಮೇಲೆ‌ ಕುಳಿತು ಸಹಿ ಹಾಕುವ‌ ಮೂಲಕ ಸರಳವಾಗಿ ಅಧಿಕಾರ ಸ್ವೀಕಾರ ಮಾಡಿದರು.


ಕಾರ್ಯಕ್ರಮದಲ್ಲಿ ನಟಿ ಮಾಳವಿಕಾ, ನಟಿ ತಾರಾ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಭಾಗಿಯಾಗಿದ್ದರು. ಅಧಿಕಾರ ಸ್ವೀಕಾರ ಬಳಿಕ ಪುಸ್ತಕ ಮಳಿಗೆಗೆ ಭೇಟಿ ನೀಡಿದ ಸಚಿವ ಸುನೀಲ್ ಕುಮಾರ್ ಅವರು, ಕನಕದಾಸರ‌ ಕವಿತೆಗಳು, ಸಾಹಿತ್ಯ ಶ್ರೇಣಿ ಶಿವರಾಂ ಕಾರಂತ ನಾಟಕ, ಡಿವಿಜಿ ನೆನಪಿನ ಚಿತ್ರಗಳು ಎಂಬ ಮೂರು ಪುಸ್ತಕಗಳನ್ನು ಖರೀದಿ ಮಾಡಿದರು.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುನೀಲ್​ ಕುಮಾರ್, ಕನ್ನಡ ಭಾಷೆ ಸಂಸ್ಕೃತಿ ಬಗ್ಗೆ ವಹಿಸಿದ ನನ್ನ ನಡುವಳಿಕೆ ನೋಡಿ ಇಂದು ಸಿಎಂ‌ ಕನ್ನಡ ಸಂಸ್ಕೃತಿ ನನ್ನ ಕೈಯಲ್ಲಿ ‌ಕೊಟ್ಟಿದ್ದಾರೆ. ಈ‌ ಇಲಾಖೆ‌ಯನ್ನು ಇನ್ನಷ್ಟು ಶ್ರೀಮಂತ‌ಗೊಳಿಸುವ ಕೆಲಸ ಮಾಡುತ್ತೇನೆ. ಕನ್ನಡ ಸಂಸ್ಕೃತಿ ಮತ್ತು ಇಂಧನ ನನ್ನ ಕೈಯಲ್ಲಿದೆ. ಕನ್ನಡ ಸಂಸ್ಕೃತಿ ಇಲಾಖೆಯಲ್ಲಿ ಪವರ್ ಬರಬೇಕು, ಇಂಧನ ಇಲಾಖೆಯಲ್ಲಿ ಸಂಸ್ಕೃತಿ ತರಬೇಕು.


ಪುಸ್ತಕ ಕೊಂಡುಕೊಳ್ಳುವ ಮೂಲಕ ಅಧಿಕೃತ ಅಧಿಕಾರ ಸ್ವೀಕಾರ ಮಾಡಿದ್ದೇನೆ. ಪ್ರತಿಯೊಬ್ಬರೂ ತಿಂಗಳಿಗೊಂದು ಪುಸ್ತಕ ಖರೀದಿಸಿ, ಜನರು ಪ್ರತಿದಿನವೂ ಕನ್ನಡ ಪತ್ರಿಕೆ‌ ಓದಬೇಕು. ಕನ್ನಡ‌ ಸಿನಿಮಾ‌ ನೋಡಬೇಕು ಎಂದು ಕರೆ ನೀಡಿದರು.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

ಭೀ*ಕರ ರಸ್ತೆ ಅಪ*ಘಾತ; ಇಬ್ಬರು ಡ್ಯಾನ್ಸರ್ಸ್​ ಸ್ಥಳದಲ್ಲೇ ಸಾ*ವು

Published

on

ಮಂಗಳೂರು/ನೆಲಮಂಗಲ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾ*ವನ್ನಪ್ಪಿರುವ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್‌ನಲ್ಲಿ ನಡೆದಿದೆ.


ಮೃ*ತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್ (22) ಮತ್ತು ಕುರುಬರಹಳ್ಳಿ ನಿವಾಸಿ ಸಹನಾ(21) ಎಂದು ಗುರುತಿಸಲಾಗಿದೆ.

ಪ್ರಜ್ವಲ್ ಕೆಲವು ಸಿನಿಮಾ ಮತ್ತು ಇವೆಂಟ್​ಗಳಲ್ಲಿ ನೃತ್ಯ ಮಾಡಿದ್ದಾರೆ. ಸಹನಾ ಕೂಡ ಡ್ಯಾನ್ಸರ್​​ ಆಗಿದ್ದಾರೆ. ಇಬ್ಬರು ಮದುವೆ ಇವೆಂಟ್​​ ಒಂದನ್ನು ಮುಗಿಸಿಕೊಂಡು ಕುಣಿಗಲ್​ನಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಬೈಕ್​ಗೆ ಡಿ*ಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ.

READ IN ENGLISH :https://www.nammakudlaenglish.com/horrific-road-accident-two-dancers-die-on-the-spot/

ಇದನ್ನೂ ಓದಿ: ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

ಅಪ*ಘಾತದ ಬೆನ್ನಲ್ಲೇ ಲಾರಿ ಸಮೇತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page