Connect with us

DAKSHINA KANNADA

ಕಾರ್ಕಳ: ಖಾಸಗಿ ಬಸ್ ಮತ್ತು ಆಟೋ ಢಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ

Published

on

ಕಾರ್ಕಳ: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಓರ್ವ ಪ್ರಯಾಣಿಕ ಮೃತ ಪಟ್ಟು ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ- ಪಡುಬಿದ್ರೆ ರಾಜ್ಯ ಹೆದ್ದಾರಿಯ ಅಡ್ವೆ ಗಣಪತಿ ದೇವಸ್ಥಾನದ ಬಳಿ ಇಂದು ಸಂಭವಿಸಿದೆ.

ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್‌ ಮೃತ ಪಟ್ಟವರು. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಖಾಸಗಿ ಬಸ್ಸು ಕಾರ್ಕಳದಿಂದ ಮಂಗಳೂರಿನ ಕಡೆಗೆ ಸಂಚರಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋ ರಿಕ್ಷಾವೊಂದು ಇದ್ದಕ್ಕಿದ್ದಂತೆ ಮುಖ್ಯ ರಸ್ತೆಯ ಕಡೆಗೆ ಬಂದಿದೆ. ಪರಿಣಾಮ ಬಸ್ಸು ಆಟೋ ರಿಕ್ಷಾಗೆ ಢಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ.

ಅದೃಷ್ಟವಶಾತ್, ಬಸ್ ರಸ್ತೆ ಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ಪಾರಾದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ. ಆಟೋ ರಿಕ್ಷಾದಲ್ಲಿ ಉತ್ತರ ಭಾರತದ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಪ್ರವೇಶ ದ್ವಾರ ಕುಸಿದು ಮೂವರು ಸಾವು

ಅವರನ್ನು ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಪಡುಬಿದ್ರೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರವನ್ನು ನಿರೀಕ್ಷಿಸಲಾಗಿದೆ.

DAKSHINA KANNADA

ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

Published

on

ಸುಳ್ಯ: ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ಬಳಿಕ ವಿದ್ಯುತ್ ಶಾಕ್ ಆಗಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ.

ಕಲ್ಲಪಣೆಯ ದಿವಾಕರ ಆಚಾರ್ಯ (45) ಮೃತಪಟ್ಟವರು ಎಂದು ತಿಳಿದುಬಂದಿದೆ. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಅನ್ನು ತುಳಿದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಹಸು ಮೇಯಿಸುವಾಗ ಜಮೀನಿನಲ್ಲಿ ಹೃದಯಾಘಾತವಾಗಿ ಯುವಕ ಸಾವು

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

Continue Reading

DAKSHINA KANNADA

ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

Published

on

ಸುಳ್ಯ: ಅರಂತೋಡು ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ಘಟಕಕ್ಕೆ ನಿನ್ನೆ (ಜು. 9) ಸಂಜೆಯ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಘಟಕ ಹೊತ್ತಿ ಉರಿದಿದೆ.

ಘನತ್ಯಾಜ್ಯ ಘಟಕದಲ್ಲಿ ಪೂರ್ತಿಯಾಗಿ ತ್ಯಾಜ್ಯ ಬೇರ್ಪಡಿಸಿ ತುಂಬಿಡಲಾಗಿತ್ತು. ಹೀಗಾಗಿ ಆಕಸ್ಮಿಕವಾಗಿ ಬೆಂಕಿ ತಗುಲಿ ಘಟಕವು ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಕಟ್ಟಡ ಮತ್ತಿತರ ಸೇರಿ ಅಪಾರ ಹಾನಿ ಸಂಭವಿಸಿದೆ.

ಇದನ್ನೂ ಓದಿ: ಹೃದಯಾ*ಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾ*ವು

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದರು. ಅಲ್ಲದೇ ಘನತ್ಯಾಜ್ಯ ವಿಲೇವಾರಿ ಮಾಡುವ ನಾಲ್ಕು ಲಕ್ಷ ಮೌಲ್ಯದ ಯಂತ್ರ ಸೇರಿ ಇತರ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ.

Continue Reading

DAKSHINA KANNADA

ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

Published

on

ಮಂಗಳೂರು: ಮಂಗಳೂರಿನ ವೆನ್ಲಾಕ್ ಅಸ್ಪತ್ರೆಗೆ ಎಂ.ಆರ್.ಪಿ.ಎಲ್ ಸಂಸ್ಥೆ ಸಾಕಷ್ಠು ಕೊಡುಗೆ ನೀಡಿದೆ, ಕೊರೋನಾ ಸಂದರ್ಭ ಆಕ್ಸಿಜನ್ ಕೊರತೆ ಇದ್ದಾಗ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಸಂಸ್ಥೆ ಮಾಡಿದೆ ಎಂದು ಎಂ.ಆರ್.ಪಿ.ಎಲ್ ನ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು.

ಮಂಗಳೂರಿನ ವೆನ್ಲಾಕ್ ಸರಕಾರಿ ಅಸ್ಪತ್ರೆಯಲ್ಲಿ ತಲೆ ಸಿಮಿಯಾ ರೋಗದಿಂದ ದಾಖಲಾದ ರೋಗಿಗಳಿಗೆ ಎಂ.ಆರ್.ಪಿ.ಎಲ್ ವತಿಯಿಂದ ನ್ಯೂಟ್ರಿಶಿಯನ್ ಬಾರ್ ನೀಡಿ ಮಾತನಾಡಿದ ಎಂ.ಆರ್.ಪಿ.ಎಲ್ ನ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಅವರು, ಅರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು ಎಂಬ ದೃಷಿಯಿಂದ ಪ್ರತೀ ವರ್ಷ ಸಂಸ್ಥೆ ವತಿಯಿಂದ ಸಹಕಾರ ನೀಡುತ್ತಿದೇವೆ ಎಂದರು.

ಇದನ್ನೂ ಓದಿ: ಪುತ್ತೂರು: ಉದ್ಘಾಟನೆಗೆ ಸಿದ್ಧಗೊಂಡ ಹೊಸ ನ್ಯಾಯಾಲಯ ಸಂಕೀರ್ಣ 

ಈ ಸಂದರ್ಭ ಸುಮಾರು 100 ರೋಗಿಗಳಿಗೆ ನ್ಯೂಟ್ರಿಶಿಯನ್ ಬಾರ್ ನೀಡಲಾಯಿತು.

ಎಂ.ಆರ್.ಪಿ.ಎಲ್ ನ ಕೇಶವ ಪಾಟಾಳಿ, ವೆನ್ಲಾಕ್ ಅಸ್ಪತ್ರೆಯ ದ.ಕ ಜಿಲ್ಲಾ ಸರ್ಜನ್ ಸುಪರಿಡೆಂಟ್ ಶಿವ ಪ್ರಕಾಶ್, ಆರ್.ಎಂ.ಒ ಡಾ ಸುಧಾಕರ್, ಸಂಯೋಜಕ ಡಾ ಶರತ್ ಕುಮಾರ್ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page