Connect with us

Ancient Mangaluru

ಕಾರ್ಕಳ: ಕಟ್ಟಡವೊಂದರಲ್ಲಿ ಭಾರೀ ಶಬ್ದದೊಂದಿಗೆ ಭೀಕರ ಸ್ಫೋಟ, ಬೆಚ್ಚಿಬಿದ್ದ ಕಾರ್ಕಳ ಜನತೆ.!

Published

on

ಕಾರ್ಕಳ: ಕಾರ್ಕಳ ಬೈಪಾಸ್ ಸಮೀಪದ ಕಟ್ಟಡವೊಂದರಲ್ಲಿ ಭಾರೀ ಶಬ್ದದೊಂದಿಗೆ ಭೀಕರ ಸ್ಫೋಟವೊಂದು ಸಂಭವಿಸಿದ್ದು ರಾತ್ರಿ ಸುಮಾರು 11.25 ರ ವೇಳೆಗೆ ಕಾರ್ಕಳದ ಸುತ್ತಮುತ್ತ 3 ಕಿಲೋಮೀಟರ್ ದೂರದ ವರೆಗೂ ಸ್ಪೋಟದ ಶಬ್ದ ಕೇಳಿಸಿದೆ.

ಮನೆಯ ಬಾಲ್ಕನಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸಿಲಿಂಡರ್ ಸ್ಪೋಟಕ್ಕೆ ನಿಖರ ಕಾರಣ ತಿಳಿದಿಲ್ಲ. ಅಕ್ಕ ಪಕ್ಕದ ನಾಲ್ಕೈದು ಮನೆಗೆ ಹಾನಿಯಾಗಿದ್ದು, ಮನೆಯವರಿಗೆ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ತುರ್ತು ಸೇವೆಯ ಆಂಬುಲೆನ್ಸ್ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು, ಸ್ಪೋಟದ ತೀವ್ರತೆಗೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿರುವುದು ದೃಶ್ಯದಲ್ಲಿ ಕಂಡುಬಂದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

WATCH VIDEO

Ancient Mangaluru

ಅತ್ಯಾ*ಚಾರದ ಕುರಿತು ಜಾಗೃತಿ ಮೂಡಿಸಲು ಹೊರಟ್ಟಿದವರಿಗೆ ಟ್ರಕ್ ಡಿಕ್ಕಿ; ಇಬ್ಬರ ಸಾವು, ಮೂವರಿಗೆ ಗಾಯ

Published

on

By

ಮಂಗಳೂರು: ಸಮಾಜದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅತ್ಯಾಚಾರಗಳನ್ನು ಕಂಡು ಮನನೊಂದ ಮಂಗಳೂರಿನ ಸಮಾಜ ಸೇವಕರ ತಂಡವೊಂದು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ದೇಶದಾದ್ಯಂತ ಜಾಗೃತಿ ಮೂಡಿಸಲು ಮಂಗಳೂರಿನಿಂದ ದಿಲ್ಲಿಗೆ ಜಾಥ ಹಮ್ಮಿಕೊಂಡು ತೆರಳುತ್ತಿದ್ದರು.

ಆದರೆ ವಿಧಿಯಾಟವೆಂಬಂತೆ ತಂಡದ ಸದಸ್ಯರಿಗೆ ಸೂರತ್‌ ಬಳಿ ಟ್ರಕ್ ಡಿ*ಕ್ಕಿ ಹೊಡೆದಿದ್ದು, ಇಬ್ಬರು ಸಾ*ವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಗುಜರಾತ್ ನ ಸೂರತ್ ನ 200 ಕಿ.ಮಿ. ದೂರದಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ: 57 ಗಂಟೆಗಳ ಶ್ರಮ ವ್ಯರ್ಥ: ಕೊಳವೆಬಾವಿಯಲ್ಲಿ ಸಿಲುಕಿದ್ದ 5 ವರ್ಷದ ಬಾಲಕ ಮೃ*ತ್ಯು ! 

ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್, ಪ್ರವೀಣ್ ಸಾವನ್ನಪ್ಪಿದ್ದಾರೆ. ಅತ್ಯಾಚಾರಿಗಳಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಮೂಸಾ ಶರೀಫ್, ನೌಫಲ್ ಅಬ್ಬಾಸ್, ಹಂಝ, ಪ್ರವೀಣ್, ಲಿಂಗೇಗೌಡ ಕಾಲ್ನಡಿಗೆ ಜಾಥಾ ಕೈಗೊಂಡಿದ್ದರು.

ರಸ್ತೆ ಬದಿ ಕಾರಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಟ್ರಕ್ ಡಿ*ಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅ*ಪಘಾತ ನಡೆಸಿ ಚಾಲಕ ಪರಾರಿಯಾಗಿದ್ದಾನೆ.

ಇನ್ನು ಮೃತ ಮೂಸಾ ಶರೀಫ್ ಕೆ ಆರ್‌ಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಸಾಮಾಜಿಕ ಹೋರಾಟಗಾರರಾಗಿದ್ದ ಮೂಸಾ ಶರೀಫ್ ಕರ್ನಾಟಕ ಸಾರಥಿಗಳ ಟ್ರೇಡ್ ಯೂನಿಯನ್ ಮುಖಂಡರಾಗಿದ್ದರು.

 

Continue Reading

Ancient Mangaluru

ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಭೀಕರ ಅಪ*ಘಾತ !

Published

on

By

ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

 

ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಕೆಲ ಪೂಜಾ ಸಾಮಾಗ್ರಿಗಳು ಸೇರಿದಂತೆ ಕುಂಕುಮ ಪ್ರಸಾದಗಳು ಕಂಡುಬಂದಿದೆ.

Continue Reading

Ancient Mangaluru

ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು

Published

on

By

ಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.


ಬೆಳ್ತಂಗಡಿ ತಾಲೂಕಿನ ವೇಣೂರಿನ ಮೂಡಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಮೂಡಬಿದ್ರೆಯ ಲಾರೆನ್ಸ್ 20 ವರ್ಷ, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ 19 ವರ್ಷ, ಹಾಗೂ ಬಂಟ್ವಾಳದ ವಗ್ಗ ಗ್ರಾಮದ ಜೈಸನ್ 19 ವರ್ಷ ಈ ಮೂವರು ಹೋಗಿದ್ದಾರೆ. ಮದ್ಯಾಹ್ನದ ಊಟವನ್ನು ಮುಗಿಸಿದ ಇವರು ಜೊತೆಯಾಗಿ ಬರ್ಕಜೆ ಸಮೀಪದ ಡ್ಯಾಂ ಬಳಿ ನದಿಯಲ್ಲಿ ಈಜಲು ಹೋಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಮೂವರೂ ನೀರುಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ನದಿಗೆ ದುಮಿಕಿದ್ದಾರೆ. ಆದ್ರೆ ಮೂವರನ್ನು ನದಿಯಿಂದ ಮೇಲೆತ್ತುವ ಮೊದಲೇ ಇ*ಹಲೋಕ ತ್ಯಜಿಸಿದ್ದಾರೆ. ಮೂವರೂ ಮಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page