Connect with us

LATEST NEWS

ಪಳ್ಳಿ “ಫಿಶ್ ಮಿಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ; ತಹಶೀಲ್ದಾರ್ ರಿಂದ ಬೀಗ ಜಡಿಯುವ ಭರವಸೆ!

Published

on

ಕಾರ್ಕಳ: ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮಿಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್‌ ಮುಂಭಾಗ ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಒಂದು ವೇಳೆ ಫಿಷ್ ಮಿಲ್ ಘಟಕವನ್ನು ಸಂಪೂರ್ಣವಾಗಿ ಬಂದ್ ಮಾಡದೇ ಇದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಿಮಲೆ ಪರಿಸರದ ಕಂದಾಯ ಸ.ನಂ 229/1ರ 3.60 ಎಕರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.

ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳ ಭೇಟಿ:
ಅಕ್ರಮ ನಿರ್ಮಾಣದ ವಿರುದ್ಧ ಫೆಬ್ರವರಿ 23ರಂದು ಪಂಚಾಯತ್ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್ ಹಾಗೂ ವಿಎ ಅಭಿಷೇಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿದ ತಹಶೀಲ್ದಾರರು, ಫಿಷ್ ಮಿಲ್ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅಕ್ರಮ ಪತ್ತೆ
ಅಧಿಕಾರಿಗಳ ಸ್ಥಳ ಪರಿಶೀಲನೆಯ ವೇಳೆ ಗಂಭೀರ ನಿಯಮಬಾಹಿರ ಚಟುವಟಿಕೆಗಳು ಕಂಡುಬಂದಿವೆ. ಇಲ್ಲಿ ಯಾವುದೇ ಭೂಪರಿವರ್ತನೆ, ಇ-ಖಾತಾ ಅಥವಾ ಗ್ರಾಮ ಪಂಚಾಯತ್‌ನಿಂದ ಕಟ್ಟಡ ಪರವಾನಗಿ ಪಡೆಯದೆ ಕಾಮಗಾರಿ ಸುತ್ತಿರುವುದು ಕಂಡುಬಂದಿದೆ. ಕೃಷಿ ಉದ್ದೇಶದ ಬಾವಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಈ ಕಟ್ಟಡ ನಿರ್ಮಾಣಕ್ಕೆ ಬಳಸುತ್ತಿರುವುದು ದೃಢಪಟ್ಟಿದೆ. ಅಲ್ಲದೆ ಜಮೀನಿನಲ್ಲಿದ್ದ ಮರಗಳನ್ನು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ತೆರವುಗೊಳಿಸಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ನಿರ್ಮಾಣದ ಉಸ್ತುವಾರಿ ವಹಿಸಿದ್ದವರಿಗೆ ಅಧಿಕೃತ ನೋಟೀಸು ಜಾರಿ ಮಾಡಿದ್ದಾರೆ. ಅಲ್ಲದೆ ನಿಯಮಬಾಹಿರವಾಗಿ ಬಳಸುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಮೆಸ್ಕಾಂ ಬೈಲೂರು ಶಾಖಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಇದನ್ನೂ ಓದಿ: ಅಧಿಕಾರ ಹಂಚಿಕೆ ಸಾರ್ವಜನಿಕ ಚರ್ಚಾ ವಿಷಯವಲ್ಲ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಈ ಸಂದರ್ಭದಲ್ಲಿ ಪಳ್ಳಿ ಪಂಚಾಯತಿನ ಮಾಜಿ ಪ್ರತಿನಿಧಿಗಳು ಉಷಾ ಎ ಅಂಚನ್, ಶ್ರೀಕಾಂತ್ ಪ್ರಭು, ಸಂದೀಪ್ ಅಮೀನ್ , ವಿಜಯ್ ಎಂ. ಶೆಟ್ಟಿ, ಸಂತೋಷ್ ಶೆಟ್ಟಿ ನಿಂಜೂರು ಹಾಗೂ ಕೌಡೂರು ಪಂಚಾಯತಿನ ಮಾಜಿ ಪ್ರತಿನಿಧಿ ವಿಶೇಷ್ ದೇವಾಡಿಗ ಸೇರಿ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

LATEST NEWS

ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

Published

on

ಶಿವಮೊಗ್ಗ: ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.


ಬುರ್ಖಾ ಧರಿಸಿ, ವ್ಯಾನಿಟಿ ಬ್ಯಾಗ್ ಹಿಡಿದು ಗಪ್‌ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನ ವರದಿಯಾಗುತ್ತಿದ್ದು, ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್‌ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.

ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!

ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ 18 ಲಕ್ಷ ರೂ ಮೌಲ್ಯದ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣ ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ.

ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು.

Continue Reading

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading

LATEST NEWS

ಗ್ಯಾಸ್ ಟ್ರಬಲ್: ಚನ್ನಪಟ್ಟಣದ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಕಳವು!

Published

on

ರಾಮನಗರ: ಒಂದೆಡೆ ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದ ಗ್ಯಾಸ್ ಸಿಲಿಂಡರ್ ಅಭಾವ ತಲೆದೂರಿದ್ದರೆ, ಮತ್ತೊಂದೆಡೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರ ಹಾವಳಿ ಮಿತಿಮೀರಿದೆ. ಅಡುಗೆ ಅನಿಲ ಸಿಲಿಂಡರ್ ಕಳ್ಳತನವಾಗಿರುವ ಪ್ರಕರಣ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.


ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದ ಕಳ್ಳ ಕಂಪೌಂಡ್‌ ಒಳಗೆ ಇದ್ದಂತಹ ಸಿಲಿಂಡರ್‌ ಕದ್ದು ಪರಾರಿಯಾಗಿದ್ದಾನೆ. ಫುಲ್‌ ಗ್ಯಾಸ್‌ ಇದ್ದ ಸಿಲಿಂಡರ್‌ನನ್ನು ಕಳ್ಳ ಹೊತ್ತೊಯ್ದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಕೆ ತೋಟಕ್ಕೆ ಬೆಂಕಿ; ಲಕ್ಷಾಂತರ ರೂಪಾಯಿ ಹಾನಿ

ಮೊದಲೇ ಸಿಲಿಂಡ್‌ ಪೂರೈಕೆ ವ್ಯತ್ಯಯದಿಂದ ಆತಂಕಗೊಂಡಿದ್ದ ನಿವಾಸಿಗಳಿಗೆ ಸಿಲಿಂಡರ್‌ ಕಳ್ಳರ ಕಾಟ ಹೊಸ ತಲೆನೋವಾಗಿದೆ ಎನ್ನಲಾಗಿದೆ. ಈ ಕುರಿತು ಚನ್ನಪಟ್ಟಣ ಟೌನ್‌ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page