Connect with us

ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಮಹಾಬಲೇಶ್ವರ್ ಎಂ.ಎಸ್ ಪುನರ್ ಆಯ್ಕೆ

Published

on

ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಮಹಾಬಲೇಶ್ವರ್ ಎಂ.ಎಸ್ ಪುನರ್ ಆಯ್ಕೆ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಪಿ. ಜಯರಾಮ ಭಟ್ ಚೇರ್ಮನ್ ಆಗಿಯೂ ಮಹಾಬಲೇಶ್ವರ ಎಂ.ಎಸ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಭಾರತೀಯ ರಿಸರ್ವ್ ಬ್ಯಾಂಕಿನ ಅನುಮೋದನೆಯಂತೆ ಎರಡನೇ ಅವಧಿಗೆ ಪುನರಾಯ್ಕೆಗೊಂಡಿದ್ದಾರೆ.

ಈ ಆದೇಶದ ಅನ್ವಯ ಪಿ. ಜಯರಾಮ ಭಟ್ ಇವರು 2021ರ ನ.10 ಅವಧಿಯವರೆಗೆ ಚೇರ್ಮೆನ್ ಆಗಿ ಮುಂದುವರೆದರೆ,

ಮಹಾಬಲೇಶ್ವರ ಎಂ.ಎಸ್ ಅವರು 2020ರ ಎ.15ರಿಂದ ಮುಂದಿನ ಮೂರು ವರ್ಷಗಳ ಪರ್ಯಂತ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಬ್ಯಾಂಕನ್ನು ಮುನ್ನಡೆಸಲಿದ್ದಾರೆ.

ತಮ್ಮ ಮರು ಆಯ್ಕೆಯ ಸಂದರ್ಭದಲ್ಲಿ  ಹರ್ಷವನ್ನು ವ್ಯಕ್ತಪಡಿಸಿ ಮಾತನಾಡಿದ ಮಹಾಬಲೇಶ್ವರ ಎಂ.ಎಸ್, ಮೂರು ವರ್ಷಗಳ ಕಾಲ ಬ್ಯಾಂಕಿನ ಚುಕ್ಕಾಣಿಯನ್ನು ಹಿಡಿದು ಮುನ್ನಡೆಸುವ ಅವಕಾಶ ದೊರಕಿದುದು ನನ್ನ ಸೌಭಾಗ್ಯ ಮತ್ತು ಹೆಮ್ಮೆಯ ವಿಷಯ ಎಂದು ಭಾವಿಸುವೆ.

ಯೋಗಾಯೋಗವೋ ಎಂಬಂತೆ ನನ್ನ ಮಾರ್ಗದರ್ಶಕರಾಗಿರುವ ಪಿ.ಜಯರಾಮ ಭಟ್ ಅವರೂ ಕೂಡ ಎರಡನೇ ಅವಧಿಗೆ ಪುನರ್ ಆಯ್ಕೆಗೊಂಡು ಇನ್ನೂ ಒಂದೂವರೆ ವರ್ಷಗಳ ಕಾಲ ನಮಗೆ ಮಾರ್ಗದರ್ಶನ ನೀಡಲಿದ್ದಾರೆ.

ನಾನು ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಆಯ್ಕೆಯಾದಾಗಿನಿಂದಲೂ ಪಿ.ಜಯರಾಮ ಭಟ್ ಹಾಗೂ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ನೀಡಿದ ಸಂಪೂರ್ಣ ಬೆಂಬಲ ಹಾಗೂ ಮಾರ್ಗದರ್ಶನಕ್ಕಾಗಿ ಅವರಿಗೆ ವಿಶೇಷ ಕೃತಜ್ಞತೆಗಳು.

ಒಂದು ಕೋಟಿಗೂ ಮಿಕ್ಕಿದ ಸಂತೃಪ್ತ ಗ್ರಾಹಕರ ಆಶೀರ್ವಾದ. ಸಂಸ್ಥೆಯಲ್ಲಿ  ದುಡಿಯುವ 8500ಕ್ಕೂ ಮಿಕ್ಕಿದ ನನ್ನ ಸಹೋದ್ಯೋಗಿಗಳ ಸಹಕಾರಕ್ಕಾಗಿ ನಾನು ಚಿರಋಣಿ.

ಭಾರತೀಯ ರಿಸರ್ವ್ ಬ್ಯಾಂಕಿನ ಅನನ್ಯ ಬೆಂಬಲ ಹಾಗೂ ಮಾರ್ಗದರ್ಶನಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು.

ವಿಶ್ವವು ಹಿಂದೆಂದೂ ಕಂಡು ಕೇಳರಿಯದ ಕೋವಿಡ್-19 ವೈರಸ್ ಗೆ ಸಿಕ್ಕಿ ನಲುಗುತ್ತಿದ್ದು ಮುಂದೆ ಆರ್ಥಿಕ ಹಿಂಜರಿತಗಳು ವಿಶ್ವದ ಆರ್ಥಿಕತೆಗೆ ದೊಡ್ಡ ಸವಾಲಾಗುವ ಸಂಶಯಗಳು ವ್ಯಕ್ತವಾಗುತ್ತಲಿವೆ.

ಇಂತಹ ಸಂಕಷ್ಟದ ಸ್ಥಿತಿಯನ್ನು ಎದುರಿಸಲು ಕರ್ಣಾಟಕ ಬ್ಯಾಂಕ್ ಸರ್ವಸನ್ನದ್ಧವಾಗಿದೆ.

ಉತ್ತಮ ಆಡಳಿತವನ್ನು ನೀಡುವುದು ಹಾಗೂ ಬ್ಯಾಂಕಿನ ಸರ್ವ ಪಾಲುದಾರರ ಮೌಲ್ಯ ಸಂವರ್ಧನೆಗೆ ಅವಿರತ ಶ್ರಮಿಸುವುದಲ್ಲದೆ ಬ್ಯಾಂಕನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ನಾವು ಕಟಿಬದ್ಧರಾಗಿದ್ದೇವೆ.

ಮುಂಬರುವ ದಿನಗಳು ತುಂಬಾ ಫಲಪ್ರದವಾಗುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಿ, ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಿದ್ದೇವೆ.

ಬ್ಯಾಂಕಿನ ಆದರಣೀಯ ಗ್ರಾಹಕರ ಹಾಗೂ ಅಭಿಮಾನಿಗಳ ಹೃತ್ಪೂರ್ವಕ ಬೆಂಬಲ ಸದಾ ನಮ್ಮೊಂದಿಗಿದೆ ಎಂಬ ತುಂಬು ಭರವಸೆ ನನಗಿದೆ” ಎಂದವರು ಸಂತಸ ವ್ಯಕ್ತಪಡಿಸಿದ್ದಾರೆ.

ವಿಡಿಯೋಗಾಗಿ..

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page