Connect with us

ಬೆಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರಿಗೆ ಸಂಪೂರ್ಣ ಉಚಿತ ಪ್ರಯಾಣ

Published

on

ಬೆಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರಿಗೆ ಸಂಪೂರ್ಣ ಉಚಿತ ಪ್ರಯಾಣ..

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಊಟಕ್ಕೂ ಪರದಾಡುವ ಸ್ಥಿತಿಗೆ ತಲುಪಿದ್ದ ವಲಸೆ ಕಾರ್ಮಿಕರಿಗೆ ರಾಜ್ಯ ಸರಕಾರ ತಮ್ಮ ಊರುಗಳಿಗೆ ತೆರಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿತ್ತು.

ಆದರೆ ರಾಜ್ಯ ಸಾರಿಗೆ ಬಸ್ ನಲ್ಲಿ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿತ್ತು ಎಂಬ ಆರೋಪ ಬಂದ ಹಿನ್ನಲೆ ರಾಜ್ಯ ಸರಕಾರ ತಮ್ಮ ಊರಿಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರಿಗೆ ಈಗ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಎಂ ಕಳಸದ್,

ಸಾರಿಗೆ ನಿಗಮದಿಂದ ಕಾರ್ಮಿಕರಿಗೆ ಇಂದಿನಿಂದ 3 ದಿನಗಳ ಕಾಲ ಅಂದರೆ ಮಂಗಳವಾರದವರೆಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‍ಭಾಸ್ಕರ್ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬಸ್‍ ಗಳಲ್ಲಿ ಸಂಚರಿಸುವ ಎಲ್ಲರೂ ಕಾರ್ಮಿಕರೆಂದು ನಾವು ಭಾವಿಸಿದ್ದೇವೆ. ಉಚಿತ ಪ್ರಯಾಣ ನೀಡಿರುವುದು ಸಿಹಿ ಸುದ್ದಿಯಾಗಿದೆ.

ಕಾರ್ಮಿಕರು ಯಾವುದೇ ಆತಂಕವಿಲ್ಲದೆ ಸುಖಕರವಾಗಿ ಪ್ರಯಾಣಿಸಬಹುದು. ಈಗಾಗಲೇ ಹಣ ಪಾವತಿಸಿ ಪ್ರಯಾಣಿಸುತ್ತಿರುವ ಕಾರ್ಮಿಕರಿಗೆ ಹಣ ಮರುಪಾವತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತಂತೆ ಪ್ರತಿಕಾ ಪ್ರಕಟಣೆ ಹೊರಡಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಕಾರ್ಮಿಕರು ಮತ್ತು ಬಡ ಕೂಲಿ ಕಾರ್ಮಿಕರ ಪರಿಸ್ಥಿತಿಯನ್ನು ಗಮನಿಸಿ,

ಇಂದಿನಿಂದ 3 ದಿನಗಳವರೆಗೆ ಜಿಲ್ಲಾ ಕೇಂದ್ರಗಳಿಂದ ಮತ್ತು ರಾಜಧಾನಿ ಬೆಂಗಳೂರಿನಿಂದ ಕರ್ನಾಟಕದಲ್ಲಿನ ತಮ್ಮ ತಮ್ಮ ಊರುಗಳಿಗೆ ಹೋಗುವ ಎಲ್ಲರಿಗೂ ಉಚಿತವಾಗಿ ಕೆ.ಎಸ್‌.ಆರ್‌.ಟಿ.ಸಿ ಬಸ್‍ ಗಳಲ್ಲಿ ತೆರಳಲು ಅನುವು ಮಾಡಿಕೊಡಲಾಗಿದೆ.

ಇದರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ನನ್ನ ಕಳಕಳಿಯ ಮನವಿ ಯಾವುದೇ ಬಸ್ ನಿಲ್ದಾಣಗಳಲ್ಲಿ ಯಾರು ನೂಕುನುಗ್ಗಲು ಮಾಡಬಾರದು.

ಜನರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page