Connect with us

ವಿದ್ಯಾರ್ಥಿಗಳೇ ಪರೀಕ್ಷೆ ಬರೆಯಲು ಸಿದ್ಧರಾಗಿ: ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ಡೇಟ್ ಫಿಕ್ಸ್

Published

on

ವಿದ್ಯಾರ್ಥಿಗಳೇ ಪರೀಕ್ಷೆ ಬರೆಯಲು ಸಿದ್ಧರಾಗಿ: ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ಡೇಟ್ ಫಿಕ್ಸ್

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ ಮಾರ್ಚ್‌ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು.

ಅಲ್ಲದೇ‌ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನೂ ಸಹ ರದ್ದುಗೊಳಿಸಿತ್ತು.

ಇದೀಗ ನಾಲ್ಕನೇ ಹಂತದ ಲಾಕ್‌ ಡೌನ್‌ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ನೀಡಿರುವುದರಿಂದ ಇಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹತ್ತನೇ ಹಾಗೂ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದಾರೆ.

ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ.

ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಿದೆ.

ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಎಸ್.ಎಸ್.‌ಎಲ್.ಸಿ. ಪರೀಕ್ಷೆಗೆ ಒಟ್ಟು 43720 ಕೊಠಡಿಗಳನ್ನು ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಈ ಬಾರಿ ರಾಜ್ಯದಲ್ಲಿ 8 ಲಕ್ಷದ 48 ಸಾವಿರದ 196 ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ.

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ.

ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದರು.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು.

ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದರು.

ಇತ್ತ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್​ಇ) ಕೂಡ ಬಾಕಿ ಉಳಿದಿದ್ದ 10ನೇ ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್​ ಪೋಖ್ರಿಯಾಲ್​ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಂತೆ ಜುಲೈ 1ರಿಂದ 15ರವರೆಗೆ ವಿವಿಧ ವಿಷಯಗಳ ಪರೀಕ್ಷೆ ನಡೆಯಲಿವೆ.

ಜುಲೈ 1 ರಂದು ಹೋಮ್​ ಸೈನ್ಸ್​, 2ರಂದು ಹಿಂದಿ ಎಲೆಕ್ಟಿವ್​ , ಹಿಂದಿ ಕೋರ್​, 7-ಕಂಪ್ಯೂಟರ್​ ಸೈನ್ಸ್​, ಇನ್​ಫಾರ್ಮೇಶನ್​ ಟೆಕ್​, 9- ಬಿಜಿನೆಸ್​ ಸ್ಟಡೀಸ್​, 10- ಬಯೋಟೆಕ್ನಾಲಜಿ, 11-ಭೂಗೋಳಶಾಸ್ತ್ರ, 13- ಸೋಷಿಯಾಲಜಿ ಪರೀಕ್ಷೆಗಳು ನಡೆಯಲಿವೆ.

ಇನ್ನುಳಿದ ದಿನಗಳಂದು 10ನೇ ತರಗತಿ ಪರೀಕ್ಷೆ ನಡೆಯಲಿದ್ದು, ಅವುಗಳು ಈಶಾನ್ಯ ದೆಹಲಿ ಶಾಲೆಗಳಿಗೆ ಸೀಮಿತವಾಗಿರಲಿವೆ ಎಂದು ಮಂಡಳಿ ಹೇಳಿದೆ.

ಎಲ್ಲ ವಿದ್ಯಾರ್ಥಿಗಳು ಸ್ಯಾನಿಟೈಸರ್​ನ್ನು ಕೊಂಡೊಯ್ಯಬೇಕು. ಮಾಸ್ಕ್​ ಧರಿಸಿರಬೇಕು. ಕೊರೊನಾ ವ್ಯಾಪಿಸುವುದನ್ನು ತಡೆಯುವ ಕ್ರಮಗಳ ಬಗ್ಗೆ ಪಾಲಕರು ಮಕ್ಕಳಿಗೆ ತಿಳಿಸಿರಬೇಕು.

ಪ್ರವೇಶ ಪತ್ರದಲ್ಲಿ ನೀಡಲಾಗುವ ಎಲ್ಲ ಸೂಚನೆಗಳನ್ನು ಪಾಲಿಸಬೇಕೆಂದು ಸೂಚಿಸಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇವನೆಂಥಾ ಸೈಕೋ ಕಾಮಿ..! ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!

Published

on

ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವೀಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು.

ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Continue Reading

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವೀಡಿಯೊ ನೋಡಿ:

 

Continue Reading
Advertisement

Trending

Copyright © 2025 Namma Kudla News

You cannot copy content of this page