Connect with us

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭ: ಸುಳಿವು ನೀಡಿದ ಶಿಕ್ಷಣ ಸಚಿವ

Published

on

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭ: ಸುಳಿವು ನೀಡಿದ ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಬಹುತೇಕ ಸಡಿಲ ಆದ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ.

ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ.

ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು ಸೋಮವಾರ ನಮ್ಮ ರಾಜ್ಯದ ಎಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ್ದೇನೆ.

ಸದ್ಯಕ್ಕೆ ದೂರದರ್ಶನದಲ್ಲಿ ವಿದ್ಯಾರ್ಥಿಗಳಿಗೆ ರಿವಿಷನ್ ಕ್ಲಾಸ್ ನಡೆಸಲಾಗುತ್ತಿದೆ ಎಂದರು. ಜೂನ್ ಎರಡನೇ ವಾರ ಅಥವಾ ಮೂರನೇ ವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾಡುವ ಚಿಂತನೆ ಇದೆ.

ಈ ಬಗ್ಗೆ ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದೇವೆ. ಕೊರೊನಾ ಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತಾಗಬೇಕು.

ಆಗಾಗ ಪರೀಕ್ಷೆ ದಿನಾಂಕದ ಬಗ್ಗೆ ಗೊಂದಲ ಹುಟ್ಟಿಸುವ ಪ್ರಯತ್ನ ನಡೆದಿದೆ. ಸೂಕ್ತ ದಿನಾಂಕ ಪ್ರಕಟಿಸಿ ನಾವೇ ಆದೇಶ ಹೊರಡಿಸುತ್ತೇವೆ.

ಯಾವುದೇ ವದಂತಿಗೂ ತಲೆ ಕೆಡಿಸಿಕೊಳ್ಳಬೇಡಿ ಎಂದ ಅವರು ಮುಂದಿನ 15 ದಿನ ಅಥವಾ ತಿಂಗಳಲ್ಲಿ ಮತ್ತೊಮ್ಮೆ ನಿರ್ಧಾರ ತಿಳಿಸುತ್ತೇನೆ.

ಮಕ್ಕಳಲ್ಲಿ ಆತಂಕ ಸೃಷ್ಟಿಸದಂತೆ ಪೋಷಕರಿಗೆ ಸಚಿವರು ಕಿವಿಮಾತು ಹೇಳಿದರು. ಪರೀಕ್ಷಾ ಕೊಠಡಿಯಲ್ಲಿ ಸಾಮಾನ್ಯವಾಗಿ 24 ಜನ ಕೂರಲಿದ್ದಾರೆ.

ಆದರೆ ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಲಿದ್ದೇವೆ. ಪರೀಕ್ಷೆ ಬರೆಯುವಾಗ ಮಾಸ್ಕ್ ಧರಿಸುವುದು ಕಡ್ಡಾಯ.

ಪರೀಕ್ಷೆಗೂ ಮುನ್ನ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ. ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮರ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲಾಗುತ್ತೆ.

ಪರೀಕ್ಷೆ ಮುನ್ನ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ. ಇದಕ್ಕೆ ನಮ್ಮ ಇಲಾಖೆ ಸಿದ್ಧವಾಗುತ್ತಿದೆ.

ಹಾಸ್ಟೆಲ್ನಲ್ಲಿ ಇದ್ದವರು ಊರಿಗೆ ಹೋಗಿದ್ರೆ ಅಂತಹ ವಿದ್ಯಾರ್ಥಿಗಳಿಗೆ ಅವರ ಊರಿನ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತೆ.

ಪರೀಕ್ಷಾ ಕೇಂದ್ರಗಳ ಬದಲಾಗಿ ಊರಿನ ಬಳಿ ಇರೋ ಶಾಲೆಗಳಲ್ಲಿಯೇ ಪರೀಕ್ಷೆ ಬರೆಯಬಹುದಾ ಎಂದು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಖಾವಿ ವೇಷದಲ್ಲಿ ಮನೆಗೆ ಬರ್ತಾರೆ, ಭಸ್ಮ ಹಾಕ್ತಾರೆ-ಇಂಥವರನ್ನು ಕಂಡ್ರೆ ಹುಷಾರಾಗಿರಿ..!

Published

on

ಕಾರ್ಕಳ: ಸ್ವಾಮೀಜಿಗಳ ವೇಷದಲ್ಲಿ ಕೆಲವರು ವಾಹನವೊಂದರಲ್ಲಿ ಮನೆ ಮನೆಗೆ ತೆರಳುತ್ತಿರುವ ಕುರಿತಂತೆ ಫೋಟೊ ಮತ್ತು ಎಚ್ಚರಿಕೆಯ ಸಂದೇಶ ನೀಡುವ ಆಡಿಯೋವೊಂದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಈ  ಸ್ವಾಮೀಜಿ ವೇಷಧಾರಿಗಳು ಕಾರ್ಕಳದ ಮಿಯ್ಯಾರ್ ಪರಿಸರದಲ್ಲಿ ರಿಕ್ಷಾ ಟೆಂಪೊ ಮಾದರಿಯ ವಾಹನದಲ್ಲಿ ಪ್ರಯಾಣಿಸುತ್ತಾ ಮನೆ ಮನೆಗೆ ತೆರಳುತ್ತಿದ್ದಾರೆ.

ಮನೆಯೊಂದಕ್ಕೆ ತೆರಳಿ ಅಲ್ಲಿದ್ದ ಮಹಿಳೆಗೆ ಭಸ್ಮ ಹಾಕಿರುವುದು ಮತ್ತು ಪರಿಸರದ ಜನರು ಬಂದು ಈ ವೇಷಧಾರಿಗಳನ್ನು ಅಲ್ಲಿಂದ ಓಡಿಸಿದ್ದಾರೆ ಎಂದು ವ್ಯಕ್ತಿ ಮಾಹಿತಿ ನೀಡಿದ್ದಾರೆ. ಅಲ್ಲದೆ ಇಂತಹ ಕಪಟ  ಸ್ವಾಮೀಜಿ ವೇಷಧಾರಿಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಬೇಕೆಂಬ ಎಚ್ಚರಿಕೆಯ ಸಂದೇಶವನ್ನು ಆಡಿಯೋದಲ್ಲಿ ಉಲ್ಲೇಖಿಸಲಾಗಿದೆ.

ಇವರು ಎಂಎಚ್‌ ರಿಜಿಸ್ಟ್ರೇಷನ್‌ ಹೊಂದಿರುವ ವಾಹನದಲ್ಲಿ  ಆಗಮಿಸಿದ್ದು ಉತ್ತರ ಭಾರತದಿಂದ ಬಂದ ಕಪಟರಾಗಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಇಂತಹ ಸ್ವಾಮೀಜಿಗಳ ಬಗ್ಗೆ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ.

 

Continue Reading

DAKSHINA KANNADA

ಡಿ.6ರಂದು ಸಹಕಾರ ರತ್ನ ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ

Published

on

ಮಂಗಳೂರು: ಕರ್ನಾಟಕ ಸರಕಾರದ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ ಡಿಸೆಂಬರ್ 6 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಭಾಸ್ಕರಾಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾಸ್ಕರ್ ಎಸ್. ಕೋಟ್ಯಾನ್‌ ಅವರು ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಈ ವರ್ಷ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳೆಲ್ಲ ಸೇರಿ ಸಾರ್ವಜನಿಕವಾಗಿ ಅವರನ್ನು ಅಭಿನಂದಿಸಲು ತೀರ್ಮಾನಿಸಿದ್ದಾರೆ ಎಂದು ಭಾಸ್ಕರಾಭಿನಂದನಾ ಸಮಿತಿಯ ಸಂಚಾಲಕ ಚಿತ್ತರಂಜನ್ ಬೋಳಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಭವನದಲ್ಲಿ ಡಿಸೆಂಬರ್ 6 ರಂದು ಅಪರಾಹ್ನ 3 ಗಂಟೆಗೆ ಚಿತ್ರನಟ ಮಂಜು ರೈ ಮೂಳೂರು ಅವರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ಸಿಗಲಿದೆ. 3.45 ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ.

 

ಸೋಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ  ಸಂಸದ ಬ್ರಿಜೇಶ್ ಚೌಟ ದೀಪ ಬೆಳಗಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಸ್ಕರಾಭಿನಂದನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಭಾಸ್ಕರಾಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಸಂಚಾಲಕ ಕೆ.ಟಿ. ಸುವರ್ಣ ಮತ್ತಿತರರು ಇದ್ದರು.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page