Connect with us

bangalore

ಪಾಕ್ ಪರ ಘೋಷಣೆ ಆರೋಪ: ವಿಧಾನ ಸಭೆಯಲ್ಲಿ ವಾಕ್ಸಮರ

Published

on

ಬೆಂಗಳೂರು : ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಬಿಜೆಪಿಗರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಬುಧವಾರ ವಿಧಾನಸಭೆಯ ಕಲಾಪದಲ್ಲೂ ಈ ವಿಚಾರ ಕೋಲಾಹಲ ಸೃಷ್ಟಿಸಿತು. ಕಲಾಪ ಆರಂಭಕ್ಕೂ ಮೊದಲು ಬಿಜೆಪಿ ನಾಯಕರು ರಾಷ್ಟ್ರಧ್ವಜ ಹಿಡಿದು ವಿಧಾನಸಭೆಗೆ ಪ್ರವೇಶಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಯು.ಟಿ.ಖಾದರ್, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತು. ರಾಜ್ಯದ ಏಳು ಕೋಟಿ ಜನರ ಆತ್ಮ ವಿಧಾನಸೌಧದಲ್ಲಿದೆ. ಇಂತಹ ಸ್ಥಳದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅಂಥವರಿಗೆಲ್ಲ ಇಲ್ಲಿಗೆ ಬರಲು ಅವಕಾಶ ಮಾಡಿಕೊಟ್ಟವರು ಯಾರು? ಇದರಿಂದ ರಾಜ್ಯದ ಜನತೆ ಆತಂಕ್ಕೊಳಗಾಗುವಂತಾಗಿದೆ. ಅವರಿಗೆ ರೆಡ್ ಕಾರ್ಪೆಟ್ ಹಾಸಿ ಇಲ್ಲಿಗೆ ಕರೆಸಿಕೊಂಡಿದ್ದಲ್ಲದೆ, ಅವರನ್ನು ಕಳುಹಿಸಿಕೊಟ್ಟವರು ಯಾರು? ಅವರಿಗೆ ಬಿರಿಯಾನಿ ತಿನ್ನಿಸಿ ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದೆ.

ಈ ವೇಳೆ ಮಾತನಾಡಿದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಪಾರ್ಲಿಮೆಂಟ್‍ನಲ್ಲಿ ನುಗ್ಗಿದ್ದರಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರ್. ಅಶೋಕ್ ಅವರು, ಸಂಸತ್‍ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು. ನೀವೇನಾದರೂ ಅವರಿಗೆ ಹೊಡೆದಿರಾ? ಎಂದು ವ್ಯಂಗ್ಯವಾಡಿದರು.

ಸರ್ಕಾರ ಏನೂ ಆಗಿಲ್ಲ ಎಂಬಂತಿದೆ :
ಆ ರೀತಿ ಘೋಷಣೆ ಕೂಗಿದವರನ್ನು ವಿಧಾನಸೌಧಕ್ಕೆ ಯಾರು ಕರೆತಂದರು? 500 ಪೊಲೀಸರು, ಐಪಿಎಸ್, ಐಎಎಸ್ ಅಧಿಕಾರಿಗಳು ಇರುವ ಈ ಸ್ಥಳದಲ್ಲಿ ಆ ರೀತಿ ಘೋಷಣೆ ಕೂಗಲು ಎಷ್ಟು ಧೈರ್ಯವಿರಬೇಕು? ದೇಶದ ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ಗಡಿ ಹಾಗೂ ದೇಶ ರಕ್ಷಣೆ ಮಾಡುತ್ತಿದ್ದಾರೆ. ಅವರಿಗೆ ನಾವು ಯಾವ ಉತ್ತರ ಕೊಡಬೇಕು? ಅಲ್ಲಿ ಈ ರೀತಿ ಘೋಷಣೆ ಕೂಗಿದರೆ ಅವರನ್ನು ಗುಂಡಿಟ್ಟು ಕೊಲ್ಲುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಘೋಷಣೆ ಕೂಗಿದವರು ವಿಧಾನಸೌಧದಿಂದ ಹೊರಹೋಗಲು ವಾಹನ ಮಾಡಿಕೊಟ್ಟವರು ಯಾರು? ಇಷ್ಟೆಲ್ಲಾ ನಡೆದಿದ್ದರೂ ಸರ್ಕಾರ ಏನೂ ಆಗಿಲ್ಲ ಎಂಬಂತಿದೆ. ಒಂದು ಸಣ್ಣ ಕೇಸೂ ಕೂಡ ದಾಖಲಿಸಿಲ್ಲ. ಕಾಂಗ್ರೆಸ್‍ನ ಮತ್ತೊಬ್ಬ ಅಭ್ಯರ್ಥಿ ಜಿ‌.ಸಿ‌. ಚಂದ್ರಶೇಖರ್ ಗೆದ್ದಾಗ ಈ ರೀತಿ ಘೋಷಣೆ ಕೂಗಿಲ್ಲ. ಬಿಜೆಪಿ ಅಭ್ಯರ್ಥಿ ಗೆದ್ದಾಗ ನಮ್ಮ ಪಕ್ಷದವರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಿದ್ದೇವೆ. ಆದರೆ ಸಯ್ಯದ್ ನಾಸಿರ್ ಹುಸೇನ್ ಗೆದ್ದ ಸಂದರ್ಭದಲ್ಲಿ ಯಾಕೆ ಈ ರೀತಿ ಘೋಷಣೆ? ಎಲ್ಲಿದೆ ಸುರಕ್ಷತೆ, ಯಾವ ಸೇಫ್ಟಿ ಇದೆ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಕ್ಷೇಪಿಸಲು ಮುಂದಾಗುತ್ತಿದ್ದಂತೆ, ಸ್ಪೀಕರ್ ಯು.ಟಿ. ಖಾದರ್ ಮಧ್ಯ ಪ್ರವೇಶಿಸಿ ಗಂಭೀರವಾದ ವಿಚಾರ ಚರ್ಚೆ ಮಾಡುವಾಗ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ರಾಜಕೀಯವನ್ನು ಬಿಡಬೇಕು. ರಾಷ್ಟ್ರ, ರಾಜ್ಯದ ಹಿತದ ಬಗ್ಗೆ ಮಾತನಾಡುವಾಗ ಗಂಭೀರವಾಗಿ ಆಲಿಸಬೇಕು, ಗಂಭೀರವಾದ ವಿಚಾರ ಪ್ರಸ್ತಾಪವಾಗುತ್ತಿದೆ, ಸರ್ಕಾರ ಉತ್ತರ ಕೊಡಲಿದೆ ಎಂದು ಸಲಹೆ ನೀಡಿದರು.
ಕಳೆದ ಬಾರಿ ಬಜೆಟ್ ಮಂಡಿಸುವಾಗ ಕಿವಿಯ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಆದರೆ ನಿನ್ನೆ ಘೋಷಣೆ ಕೂಗಿದ ವಿಚಾರ ನೋಡಿಲ್ಲ, ಕೇಳಿಲ್ಲ ಎನ್ನುತ್ತಾರೆ. ಮಾಧ್ಯಮಗಳಲ್ಲಿ ಅದನ್ನು ತೋರಿಸಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ ಇರಬೇಕು. ಬೇರೆಯವರು ಆ ರೀತಿ ಘೋಷಣೆ ಕೂಗುವುದಿಲ್ಲ. ಏಕೆಂದರೆ ಭಾರತ ಮಾತೆ ಅನ್ನ ತಿಂದವರು, ನೀರು ಕುಡಿದವರು ಆ ರೀತಿ ಕೂಗುವುದಿಲ್ಲ, ಇನ್ನೆಷ್ಟು ಜನ ಬಂದಿದ್ದಾರೋ ಗೊತ್ತಿಲ್ಲ, ಇದು ನಾಡಿನ ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಒಂದು ವೇಳೆ ಮಾಧ್ಯಮದ ವರದಿ ಸುಳ್ಳಾಗಿದ್ದರೆ ಅವರನ್ನು ಜೈಲಿಗೆ ಹಾಕಿ, ನನ್ನ ಮೇಲೂ ಕೇಸು ಹಾಕಿ. ಈ ಘಟನೆ ಬಗ್ಗೆ ಸಣ್ಣ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಬೇಕಿತ್ತು ಎಂದರು.

ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾದಾಗ ಸ್ಪೀಕರ್ ಸದನದ ಕಾರ್ಯಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.

 

ಕಲಾಪ ಮುಂದೂಡಿಕೆ :

ಸದನದ ಬಾವಿಗಿಳಿದು ವಿಪಕ್ಷ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿರುವ ಘಟನೆ ನಡೆಯಿತು. ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಸ್ಪೀಕರ್ ಯುಟಿ ಖಾದರ್ ಮುಂದೂಡಿದರು. ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ ಆಯಿತು. ನಿಗದಿಯಂತೆ ಇಂದು ವಿಧಾನಸಭೆ ಕಲಾಪ ಮುಕ್ತಾಯವಾಗಬೇಕಿತ್ತು.

bangalore

ಈ ದಿನ ನೆನಪಿಟ್ಟುಕೊಳ್ಳಿ ..! ನಮ್ಮ ನೆರಳು ಜೊತೆಗಿರದ ದಿನವಿದು ..! ಯಾವಾಗ ಗೊತ್ತಾ ..?

Published

on

ಭೂಮಿ ಮೇಲೆ ಹಲವಾರು ಅದ್ಭುತಗಳು, ವಿಸ್ಮಯಕಾರಿ ಘಟನೆಗಳು ನಡೆಯುತ್ತಲೇ ಇರುತ್ತದೆ. ಅದರಲ್ಲಿ ಕೆಲವೊಂದು ನಮ್ಮ ಊಹೆಗೂ ಮೀಸಿದ್ದಾಗಿರುತ್ತದೆ. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆಯಲಿದೆ. ಇದನ್ನು ಸಾಮಾನ್ಯವಾಗಿ ನಮಗೆ ನಂಬಲು ಆಗುವುದಿಲ್ಲ. ಆದರೆ ಇದು ಅಪರೂಪದಲ್ಲಿ ಅಪರೂಪದ ಘಟನೆಯಾಗಿದೆ. ಏನದು ಗೊತ್ತಾ ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ವಾಸ್ತವವಾಗಿ, ಆಸ್ಟ್ರೋನಾಮಿಕಲ್ ಸೊಸೈಟಿ ಆಫ್ ಇಂಡಿಯಾ ( ಪ್ರಕಾರ, +23.5 ಮತ್ತು -23.5 ಡಿಗ್ರಿ ಅಕ್ಷಾಂಶದ ನಡುವಿನ ಎಲ್ಲಾ ಸ್ಥಳಗಳಿಗೆ ವರ್ಷಕ್ಕೆ ಎರಡು ಬಾರಿ ‘ಶೂನ್ಯ ನೆರಳು ದಿನ’ ಸಂಭವಿಸುತ್ತದೆ. ಈ ದಿನ ಬೆಂಗಳೂರಿಗೆ ಮಾತ್ರ ವಿಶಿಷ್ಟವಲ್ಲ. ಇದು ಚೆನ್ನೈ ಮತ್ತು ಕರಾವಳಿ ಭಾಗಗಳನ್ನೂ ಒಳಗೊಂಡಂತೆ ಸಮಭಾಜಕ ವೃತ್ತ ಮತ್ತು ಕರ್ಕಾಟಕ ವೃತ್ತದ ನಡುವೆ ಇರುವ ಎಲ್ಲಾ ನಗರಗಳಲ್ಲಿ ಈ ಅದ್ಭುತ ಘಟನೆ ನಡೆಯುತ್ತದೆ. ಬೆಂಗಳೂರಿನಲ್ಲಿ, ಈ ವಿದ್ಯಮಾನವು ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.

ಈ ಬಾರಿ ಅಂದರೆ ಏಪ್ರಿಲ್ 24 ರಂದು ಮಧ್ಯಾಹ್ನ 12.17ಕ್ಕೆ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ ಎಂದು ಕರೆಯಲ್ಪಡುವ ಆಕರ್ಷಕ ಘಟನೆ ನಡೆಯಲಿದೆ. ಈ ಅಪರೂಪದ ಕ್ಷಣದಲ್ಲಿ ಸೂರ್ಯನು ನೇರವಾಗಿ ತಲೆಯ ಮೇಲೆ ಇರುತ್ತಾನೆ, ಇದರಿಂದಾಗಿ ನಿಮ್ಮ ನೆರಳು ನಿಮಗೆ ಕಾಣಲ್ಲ ಎಂದು ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆಯ ವಿಜ್ಞಾನಿಗಳು ದೃಢಪಡಿಸಿದ್ದಾರೆ. IIA ನಲ್ಲಿ ವಿಜ್ಞಾನ ಸಂವಹನ, ಸಾರ್ವಜನಿಕ ಸಂಪರ್ಕ ಮತ್ತು ಶಿಕ್ಷಣ  ವಿಭಾಗದ ನೇತೃತ್ವ ವಹಿಸಿರುವ ಡಾ. ನಿರುಜ್ ಮೋಹನ್ ರಾಮಾನುಜಂ, “ಸೂರ್ಯನು ಆಕಾಶದಲ್ಲಿ ತನ್ನ ಅತ್ಯುನ್ನತ ಬಿಂದುವನ್ನು ತಲುಪಿದಾಗ ಈ ವಿದ್ಯಮಾನ ಸಂಭವಿಸುತ್ತದೆ. ಪರಿಣಾಮವಾಗಿ, ನೆರಳುಗಳು ನೇರವಾಗಿ ವಸ್ತುಗಳ ಕೆಳಗೆ ಬೀಳುತ್ತವೆ ಮತ್ತು ಮಾನವ ಕಣ್ಣಿಗೆ ಅಗೋಚರವಾಗಿರುತ್ತವೆ” ಎಂದು ವಿವರಿಸಿದ್ದಾರೆ.

Continue Reading

bangalore

ಶಾಲಾ ಶುಲ್ಕ ಆಯ್ತು.. ಈಗ ಪಠ್ಯ ಪುಸ್ತಕ ದರ ಹೆಚ್ಚಳ ..?

Published

on

ಬೆಂಗಳೂರು : ಈಗಾಗಲೇ ಪ್ರತಿನಿತ್ಯ ಬಳಸುವಂತಹ ಸಾದಾರಣ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ. ಈ ನಡೆವೆ ಮಕ್ಕಳ ಶಾಲೆಯ ಸ್ಕೂಲ್ ಫೀಸ್ ಏರಿಕೆಯಾಗಿತ್ತು. ಈ ರೀತಿ ಬೆಲೆ ಏರಿಕೆಗಳಿಗೆ ಹೋಲಿಸಿದರೆ ಒಂದು ಕಡೆ ಬರುವ ಸಂಬಳವೂ ಕೂಡ ಕಡಿಮೆಯಾಗಿದೆ. ಇದರ ಬೆನ್ನಲ್ಲೇ ಪೋಷಕರಿಗೆ, ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್ ನೀಡಿದೆ. ಅದೇನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಹೊತ್ತು ಉತ್ತಮ, ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಮಾಡಿಸುತ್ತಾರೆ. ಆದರೆ ಸರ್ಕಾರವು ಕೆಲ ದಿನಗಳ ಹಿಂದೆ ಶಾಲಾ ಶುಲ್ಕ ಏರಿಕೆ ಮಾಡಿದ್ದು ಫೀಸ್ ಕಟ್ಟಲು ಪೋಷಕರು ಒದ್ದಾಡುತ್ತಿದ್ದಾರೆ. ಅಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ರಾಜ್ಯ ಪಠ್ಯ ಪುಸ್ತಕ ಸಂಘವು 2025-2026 ನೇ ಸಾಲಿನ ಪಠ್ಯ ಪುಸ್ತಕ ದರವನ್ನು ಶೇ 10 ರಷ್ಟು ಏರಿಕೆ ಮಾಡಿದೆ. ಈಗಾಗಲೇ ಕೆಲವು ಪಠ್ಯ ಪುಸ್ತಕಗಳ ಬೆಲೆ ಶೇ.100 ರಷ್ಟು ಹೆಚ್ಚಾಗಿದ್ದು, ಈ ವರ್ಷವೂ ಕರ್ನಾಟಕ ಪಠ್ಯ ಪುಸ್ತಕ ಸಂಘ ಪಠ್ಯ ಪುಸ್ತಕಗಳ ದರ ಏರಿಕೆ ಮಾಡಿದೆ.

ಪಠ್ಯ ಪುಸ್ತಕ ಸಂಘದಿಂದ ದರ ಹೆಚ್ಚಳ :

ಡಿಸೆಂಬರ್ ತಿಂಗಳಲ್ಲಿ ಖಾಸಗಿ ಶಾಲೆಗಳಿಂದ ಇಂಡೆಂಟ್ ಪಡೆದಿದ್ದ ಪಠ್ಯ ಪುಸ್ತಕ ಸಂಘ, ಮುಂಗಡ ಶೇ 10ರಷ್ಟು ಹಣವನ್ನು ಆನ್ ಲೈನ್ ಮೂಲಕ ಪಾವತಿಸಿಕೊಂಡಿತ್ತು. ಈಗ ಖಾಸಗಿ ಶಾಲೆಗೆ ಇಂಡೆಂಟ್ ಪಡೆದಿದ್ದಕ್ಕಿಂತ ಶೇ 10 ರಷ್ಟು ಹೆಚ್ಚು ಕೇಳುತ್ತಿದೆ. ಇದರ ನೇರ ಪರಿಣಾಮ ಪೋಷಕರಿಗೆ ತಟ್ಟಲಿದೆ. ಖಾಸಗಿ ಶಾಲೆಗಳು ಈ ಬೆಲೆ ಏರಿಕೆಯ ಹೊರೆಯನ್ನು ಪೋಷಕರ ಮೇಲೆ ಹಾಕಲು ಮುಂದಾಗಿವೆ. “ಎಲ್ಲದರ ಬೆಲೆ ಏರಿಕೆಯಾಗಿರುವುದರಿಂದ ಜನರಿಗೆ ತೊಂದರೆ ಆಗುತ್ತಿದೆ ಎಂದು ಸಾಕಷ್ಟು ಬಾರಿ ನಾವು ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪಠ್ಯ ಪುಸ್ತಕ ದರವನ್ನು ಅನಿವಾರ್ಯವಾಗಿ ಏರಿಕೆ ಮಾಡಬೇಕಿದೆ. ಈ ಏರಿಕೆಯ ಹೊರೆಯನ್ನು ನಾವು ಪೋಷಕರ ಮೇಲೆ ಹಾಕಬೇಕಿದೆ” ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ. ಆದರೆ ರಾಜ್ಯ ಸರ್ಕಾರ ಹಾಗೂ ಪಠ್ಯ ಪುಸ್ತಕ ಸಂಘ ಮಾತ್ರ ಈ ಬಗ್ಗೆ ಯಾವುದೇ ಸ್ಪಷ್ಟವಾದ ಉತ್ತರ ನೀಡುತ್ತಿಲ್ಲ. ಅಗತ್ಯ ವಸ್ತುಗಳ  ಸತತವಾಗಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.

Continue Reading

bangalore

ಜನಿವಾರಕ್ಕೆ ಕತ್ತರಿ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು : ಸಿಎಂ ಸಿದ್ಧರಾಮಯ್ಯ

Published

on

ಬೆಂಗಳೂರು : ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಮಾತನಾಡಿದ್ದಾರೆ. “ಸಿಇಟಿ ಪರೀಕ್ಷೆ ವೇಳೆ ಬೀದರ್, ಶಿವಮೊಗ್ಗ, ಸಾಗರ, ಧಾರವಾಡಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಜನಿವಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು :

“ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಜನಿವಾರವನ್ನು ಕೇವಲ ಬ್ರಾಹ್ಮಣ ಸಮಾಜದವರಷ್ಟೇ ಹಾಕುವುದಿಲ್ಲ. ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಧರಿಸುತ್ತಿದ್ದಾರೆ. ಆ ಎಲ್ಲ ಸಮುದಾಯಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಜನಿವಾರ ಪ್ರಕರಣಕ್ಕೆ ಶಾಶ್ವತ ಪರಿಹಾರ :

ಸಿಇಟಿಯಲ್ಲಿ ನಡೆದ ಜನಿವಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸರಕಾರ, ಈ ಸಂಬಂಧ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ. ಇಂಥ ಘಟನೆ ಪುನರಾವರ್ತನೆ ಆಗದಿರಲು ಶಾಶ್ವತ ಪರಿಹಾರ ಕಂಡು ಕೊಳ್ಳಲು ಈಗ ಸರಕಾರ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಉದ್ದೇಶಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page