Connect with us

LATEST NEWS

ಕಾಸರಗೋಡು: ತಂದೆಯಿಂದಲೇ ಮಗಳ ಹತ್ಯೆ ಪ್ರಕರಣ; ಮೃತರ ಸಂಖ್ಯೆ 2ಕ್ಕೆ ಏರಿಕೆ

Published

on

ಕಾಸರಗೋಡು: ಮಂಜೇಶ್ವರ ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.

ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶೇಕುಂಞಿ ಅವರ ಪತ್ನಿಯ ಅಕ್ಕನ ಮಗಳು ಜುಮೈಲಾ (17) ಸೋಮವಾರ ಸಂಜೆ ಮೃತ ಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇದೀಗ ಕೊನೆಯುಸಿರೆಳೆದಿದ್ದಾರೆ. ಜುಮೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದು, ಆತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದು, ಕೆಲವೊಂದು ವಿಷಯಗಳ ಬಗ್ಗೆ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಪತ್ನಿಯ ತಂಗಿಯ ಪತಿ ಶೇಕುಂಞಿ ಮಧ್ಯೆ ಈ ಮೊದಲೇ ವೈಮನಸ್ಸು ಇತ್ತು ಎನ್ನಲಾಗಿದೆ.

ಇದನ್ನೂ ಓದಿ: ಕಾಸರಗೋಡು: ತಂದೆಯಿಂದಲೇ ಮುದ್ದಿನ ಮಗಳ ಭೀಕರ ಹ*ತ್ಯೆ

ಇದೇ ವಿಚಾರವಾಗಿ ಸೋಮವಾರ ಸಂಜೆ ಉಮರ್ ಫಾರೂಕ್ ಮತ್ತು ಶೇಕುಂಞಿ ಮಧ್ಯೆ ನಡೆದ ವಾಗ್ವಾದ ತಾರಕ್ಕೇರಿದೆ. ಈ ವೇಳೆ ಶೇಕುಂಞಿ ಅವರ ಮೇಲೆ ಆರೋಪಿ ಉಮರ್ ಫಾರೂಕ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ದಾಳಿಯನ್ನು ತಡೆಯಲೆತ್ನಿಸಿದ ಪುತ್ರಿ ಜುಮೈಲಾರಿಗೂ ಉಮರ್ ಫಾರೂಕ್ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಜುಮೈಲಾ ಸ್ಥಳದಲ್ಲೇ ಮೃತಪಟ್ಟಿದ್ದರು.

ದಾಳಿಯಿಂದ ತೀವ್ರ ಗಾಯಗೊಂಡಿದ್ದ ಶೇಕುಂಞಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತ ಪಟ್ಟಿದ್ದಾರೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page