Connect with us

DAKSHINA KANNADA

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ; ಕಲಾವಿದ ಉಮೇಶ್ ಮಿಜಾರ್‌ಗೆ ಕಲಾಭೂಷಣ ಪ್ರಶಸ್ತಿ

Published

on

ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ.


ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿವಂಗತ ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜನವರಿ 23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ಜನವರಿ 23ರಂದು ರಾತ್ರಿ7 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ಮಹಿಳಾ ಯಕ್ಷಗಾನ, ನಮ್ಮ ಬೆದ್ರ ತಂಡದವರಿಂದ ತುಳು ನಾಟಕ ನಡೆಯಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ರಂಗಭೂಮಿ ಕಲಾವಿದರಿಗೆ ನೀಡಲಾಗುವ ಕುಂದೇಶ್ವರ ಕಲಾಭೂಣ ಭೂಷಣ ಪ್ರಶಸ್ತಿಗೆ ಈ ಬಾರಿ ಉಮೇಶ್ ಮಿಜಾರು ಆಯ್ಕೆಗೊಂಡಿದ್ದಾರೆ ಎಂದು ತಿಳಿಸಿದರು. ಸಮಾರಂಭದ ಬಳಿಕ ನಮ್ಮ ಬೆದ್ರ ಕಲಾವಿದರಿಂದ ವೈರಲ್ ವೈಶಾಲಿ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಯಕ್ಷ ಕೋಗಿಲೆ: ಕಾವ್ಯಶ್ರೀ ಅಜೇರು
ತಮ್ಮ 9ನೇ ವಯಸ್ಸಿನಲ್ಲೇ ಯಕ್ಷಗಾನ ಭಾಗವತಿಕೆಯನ್ನು ಕಲಿಯಲು ಆರಂಭಿಸಿದ ಕಾವ್ಯಶ್ರೀ, ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಂತಹ ದಿಗ್ಗಜರಿಂದ ಮಾರ್ಗದರ್ಶನ ಪಡೆದಿದ್ದಾರೆ.

21 ವರ್ಷಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತೊಡಗಿಸಿಕೊಂಡಿರುವ ಕಾವ್ಯಶ್ರೀ ಅವರು, ತೆಂಕುತಿಟ್ಟು ಯಕ್ಷಗಾನ ರಂಗದ ಅಗ್ರಮಾನ್ಯ ಮಹಿಳಾ ಭಾಗವತರಾಗಿ ಗುರುತಿಸಿಕೊಂಡಿದ್ದಾರೆ. ಮಂಗಳೂರು ಆಕಾಶವಾಣಿಯ ‘ಬಿ’ ಗ್ರೇಡ್ ಕಲಾವಿದೆಯಾಗಿರುವ ಇವರು ದೂರದರ್ಶನ ಹಾಗೂ ಚಂದನ ವಾಹಿನಿಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ತೆಂಕು ಮತ್ತು ಬಡಗು ಉಭಯ ತಿಟ್ಟುಗಳಲ್ಲೂ ಪ್ರೌಢಿಮೆ ಹೊಂದಿರುವ ಇವರು, ಎರಡೂ ಶೈಲಿಗಳ ಪ್ರಸಿದ್ಧ ಭಾಗವತರೊಂದಿಗೆ ಜುಗಲ್ಬಂದಿ ನಡೆಸಿ ಸೈ ಎನಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲಾ ಮಟ್ಟದ ಯಕ್ಷಗಾನ ತಾಳಮದ್ದಳೆ ಸ್ಪರ್ಧೆಗಳಲ್ಲಿ ಸತತವಾಗಿ ಬಹುಮಾನಗಳನ್ನು ಪಡೆಯುವ ಮೂಲಕ ತಮ್ಮ ಗಾಯನದ ಮಾಧುರ್ಯವನ್ನು ಸಾಬೀತುಪಡಿಸಿದ್ದಾರೆ.

ಕಾವ್ಯಶ್ರೀ ಅವರು ಕೇವಲ ಹವ್ಯಾಸಿ ಕಲಾವಿದೆಯಾಗಿ ಉಳಿಯದೆ, ಕಟೀಲು ಮೇಳ, ಬಪ್ಪನಾಡು ಮೇಳ, ಹೊಸನಗರ ಮೇಳ ಸೇರಿದಂತೆ ಕರಾವಳಿಯ ಪ್ರಸಿದ್ಧ ಯಕ್ಷಗಾನ ಮೇಳಗಳಲ್ಲಿ ಅತಿಥಿ ಕಲಾವಿದೆಯಾಗಿ ಭಾಗವಹಿಸಿ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದಾರೆ. ಮುಂಬೈ, ಪುಣೆ, ದೆಹಲಿ, ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕಲಾ ಸೇವೆ ಸಲ್ಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಜೇರು ಶ್ರೀಪತಿ ನಾಯಕ್ ಮತ್ತು ಉಮಾ ದಂಪತಿಗಳ ಪುತ್ರಿಯಾಗಿ 1994ರಲ್ಲಿ ಜನಿಸಿದ ಕಾವ್ಯಶ್ರೀ ಅವರು ವಿದ್ಯಾಭ್ಯಾಸದಲ್ಲಿ ಅತ್ಯಂತ ಚುರುಕಾಗಿದ್ದವರು. ಬಿ.ಇಡಿ ಹಾಗೂ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಶಾಸ್ತ್ರೀಯ ಸಂಗೀತದಲ್ಲಿ ಜೂನಿಯರ್ ಶ್ರೇಣಿ.

ಇದನ್ನೂ ಓದಿ: ಮಂಗಳೂರು ಐಸ್ ಕ್ರೀಮ್ ಪರ್ಬ-2026; ಈ ಬಾರಿ 17 ಐಸ್‌ಕ್ರೀಂ ಬ್ರ್ಯಾಂಡ್‌ಗಳು ಭಾಗಿ

ಕಲಾಭೂಷಣ ಉಮೇಶ್ ಮಿಜಾರ್:
ಮಂಗಳೂರಿನ ಮಿಜಾರಿನ ಯಕ್ಷಗಾನ ಕಲಾವಿದ ದಂಪತಿ ಪುತ್ರರಾದ ಉಮೇಶ್ ಮಿಜಾರ್, ಬಡತನದ ಕಾರಣ 9ನೇ ತರಗತಿಗೆ ಶಿಕ್ಷಣ ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ವಲಸೆ ಹೋದರು. ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಲೇ ರಂಗಭೂಮಿಯತ್ತ ಆಕರ್ಷಿತರಾದ ಇವರು, ಮುಂಬೈನಲ್ಲಿ ಮಹಿಳಾ ಪಾತ್ರದ ಮೂಲಕ ಮೊದಲ ಬಾರಿ ಬಣ್ಣ ಹಚ್ಚಿದರು.

ನಂತರ ನಾಟಕ ರಚನೆ ಹಾಗೂ ಹಾಸ್ಯ ನಟನೆಯಲ್ಲಿ ತೊಡಗಿಸಿಕೊಂಡ ಇವರು, 1996ರಲ್ಲಿ ‘ನಮ್ಮ ಕಲಾವಿದೆರ್ ಬೆಳ್ಳಿ’ ತಂಡವನ್ನು ಕಟ್ಟಿ ಯಶಸ್ವಿ ಸಂಘಟಕರಾದರು. ಅನೇಕ ತುಳು ನಾಟಕಗಳನ್ನು ರಚಿಸಿ ನಿರ್ದೇಶಿಸಿರುವ ಇವರ ಖ್ಯಾತಿ ರಂಗಭೂಮಿಯಿಂದ ಬೆಳ್ಳಿಪರೆದೆಗೂ ವಿಸ್ತರಿಸಿತು.

35 ವರ್ಷಗಳ ಕಲಾ ಬದುಕಿನಲ್ಲಿ 80 ತುಳು ಸಿನಿಮಾಗಳಲ್ಲಿ, 6 ಕನ್ನಡ ಸಿನಿಮಾ, 6 ಧಾರಾವಾಹಿಗಳಲ್ಲಿ ನಟಿಸಿರುವ ಉಮೇಶ್ ಮಿಜಾರ್ ಅವರು ಅಭಿನಯಿಸಿರುವ ತುಳು ನಾಟಕಗಳು ಅನೇಕ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

DAKSHINA KANNADA

ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

Published

on

ಬೆಳ್ತಂಗಡಿ : ಅಜ್ಜಿಯ ತಿಥಿಗೆ ಆಮೆಯನ್ನು ಸಾರು ಮಾಡಿ ಬಡಿಸಲು ನದಿಯಲ್ಲಿ ಅ*ಕ್ರಮವಾಗಿ ಆಮೆಗಳನ್ನು ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು  ಆಮೆಗಳ ಸಹಿತ ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರ್ಡಾಲ ನೀರ್ಚಾಲಿನ ನಿವಾಸಿ ಮಣಿಕಂಠ(42), ಮಂಗಳೂರು ಮೂಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35)  ಬಂಧಿತರು.

ದಾ*ಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ : ಕೋಟ : ಗೂಗಲ್ ಮ್ಯಾಪ್ ಎಡವಟ್ಟು; ಕೊಲ್ಲೂರಿಗೆ ಹೊರಟವರು ತಲುಪಿದ್ದೆಲ್ಲಿಗೆ ಗೊತ್ತಾ?

ಫೆ.13 ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ, ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಆಗಮಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Continue Reading

DAKSHINA KANNADA

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ಸಾ*ವು

Published

on

ಪುತ್ತೂರು : ಹೃದಯಾ*ಘಾತಕ್ಕೆ ವ್ಯಕ್ತಿ ಬ*ಲಿಯಾಗಿರುವ ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. 48 ವರ್ಷದ ರವಿ ಕುಮಾರ್ ಕಲ್ಕಾರ್ ಮೃ*ತ ವ್ಯಕ್ತಿ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ  ರವಿ  ಕುಸಿದು ಬಿ*ದ್ದಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯು*ಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ : ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ರವಿ ಕಲ್ಕಾರ್  ವಿದೇಶದಲ್ಲಿ ಹಲವಾರು ವರ್ಷ ದುಡಿದು ಬಳಿಕ ಶಾಂತಿಗೋಡು ಕಲ್ಕಾರ್ ಎಂಬಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಹೀಗೆ ಹಲವು ಸಂಘಟನೆಗಳಲ್ಲಿ ರವಿ ಕಲ್ಕಾರ್  ಗುರುತಿಸಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page