Connect with us

LATEST NEWS

ಕನ್ನಡದ ಬಿಗ್ ಬಾಸ್ ಗೆ ಕೊರೊನಾ ಸೋಂಕಿನ ಬಿಸಿ: ಬಿಗ್ ಬಾಸ್ ಶೋ ಸ್ಥಗಿತ ಕ್ಲಸ್ಟರ್ ಹೆಡ್ ಪರಮೇಶ್ವರ್ ಗುಂಡ್ಕಲ್ ಮಾಹಿತಿ..!

Published

on

ಬೆಂಗಳೂರು:ಕೊರೊನಾ ಲಾಕ್ ಡೌನ್ ಬಿಸಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಗೂ ತಟ್ಟಿದೆ. ಮೇ 10 ರಿಂದ ರಾಜ್ಯ ಸರಕಾರ ಫುಲ್ ಲಾಕ್ಡೌನ್ ಘೋಷಣೆ ಮಾಡಿರುವುದರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬರುತ್ತಿದ್ದ ಬಿಗ್ ಬಾಸ್ ಶೋವನ್ನು ಅರ್ಧಕ್ಕೆ ನಿಲ್ಲಿಸಲು ನಿರ್ಧರಿಸಲಾಗಿದೆ.

ಹೀಗಾಗಿ ಭಾನುವಾರದಿಂದ ಬಿಗ್ ಬಾಸ್ ಶೋ ಬಹುತೇಕ ಪ್ರಸಾರ ಆಗುವುದಿಲ್ಲ.ಕೊರೊನಾ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ರಾಜ್ಯ ಸರಕಾರ ಮೇ 10ರಿಂದ 14 ದಿನಗಳ ಕಾಲ ಪೂರ್ತಿ ಲಾಕ್ಡೌನ್ ಘೋಷಣೆ ಮಾಡಿದೆ.ಈ ವೇಳೆ, ಟಿವಿ ಕಾರ್ಯಕ್ರಮ, ಸಿನಿಮಾ ಚಿತ್ರೀಕರಣ ಸೇರಿದಂತೆ ಎಲ್ಲ ರೀತಿಯ ಚಟುವಟಿಕೆ ನಿಷೇಧಿಸಲಾಗಿದೆ.ಈ ಹಿನ್ನೆಲೆಯಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ – ಸೀಸನ್ 8 ರ ಕಾರ್ಯಕ್ರಮವನ್ನು ಅನಿವಾರ್ಯ ಕಾರಣದಿಂದ ಸ್ಥಗಿತಗೊಳಿಸುತ್ತಿದ್ದೇವೆ ಎಂದು ಕಲರ್ಸ್ ಕನ್ನಡ ವಾಹಿನಿಯ ಕ್ಲಸ್ಟರ್ ಹೆಡ್ ಪರಮೇಶ್ವರ್ ಗುಂಡ್ಕಲ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ಬುಕ್ ಪೇಜಿನಲ್ಲಿ ಬರೆದುಕೊಂಡಿರುವ ಗುಂಡ್ಕಲ್, ಬಿಗ್ ಬಾಸ್ ಕನ್ನಡ ಸೀಸನ್ ಎಂಟರ ಕಾರ್ಯಕ್ರಮ ಆರಂಭಗೊಂಡು ಇಂದಿಗೆ 71ನೇ ದಿನ. 11 ಸ್ಪರ್ಧಿಗಳು ಉಳಿದುಕೊಂಡಿದ್ದು, ಹೊರಗಿನ ಜಗತ್ತಿನಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ತಮ್ಮ ಪಾಡಿಗಿದ್ದರು.

ಅವರು ಒಳಗೇ ಇದ್ದುದರಿಂದ ಸೇಫ್ ಆಗಿಯೇ ಇದ್ದರು. ಆದರೆ, ಈಗ ಆಗಿರುವ ಪರಿಸ್ಥಿತಿಯನ್ನು ಒಳಗಿದ್ದವರಿಗೆ ಮನವರಿಕೆ ಮಾಡಿದ್ದು ಎಲ್ಲರನ್ನೂ ಹೊರಗೆ ಕರೆತಂದು ಅವರ ಮನೆಗಳಿಗೆ ಸುರಕ್ಷಿತವಾಗಿ ಬಿಡುವ ಕೆಲಸ ಆಗುತ್ತಿದೆ.

ನೂರಾರು ಮಂದಿಯ ಕನಸು ಮತ್ತು ಶ್ರಮವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದೇವೆ ಎಂಬ ನೋವಿದೆ. ಇಂಥ ನಿರ್ಧಾರಕ್ಕೆ ಬರುವುದು ತುಂಬದ ಕಷ್ಟದ ಸನ್ನಿವೇಶ ಆದರೂ, ಭಾರ ಹೃದಯದಿಂದ ವಾಸ್ತವ ಒಪ್ಪಿಕೊಳ್ಳುತ್ತಿದ್ದೇವೆ.

ಆದರೆ ಬೇಸರ ಆಗ್ತಿರೋದು ಶೋವನ್ನು ನಿಲ್ಲಿಸುವುದಕ್ಕಲ್ಲ. ಕಣ್ಣಿಗೆ ಕಾಣದ ವೈರಸ್ ಇಷ್ಟೆಲ್ಲಾ ದುರಂತ ಮಾಡಿಬಿಡ್ತಲ್ಲಾ ಎಂದು ಹೃದಯ ಕಲಕುತ್ತಿದೆ ಎಂದು ವಾಸ್ತವ ಸ್ಥಿತಿಯನ್ನು ಹೇಳಿಕೊಂಡಿದ್ದಾರೆ…

LATEST NEWS

ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃ*ತಪಟ್ಟಿದ್ದಾರೆ.


ಏರ್ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃ*ತಪಟ್ಟಿರುವುದು ದೃಢವಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತದ ಸಾ*ವಿಗೆ ಸಂತಾಪ ಸೂಚಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

Published

on

ಗುಜರಾತ್​​ನ ಅಹಮದಾಬಾದ್​ನಲ್ಲಿ ಲಂಡನ್​​ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.


ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸುವುದು ಬ್ಲ್ಯಾಕ್‌ ಬಾಕ್ಸ್‌.

ಬ್ಲಾಕ್ ಬಾಕ್ಸ್‌ ಅಂದರೆ ಏನು?
ಬ್ಲಾಕ್ ಬಾಕ್ಸ್‌ ಅಂದರೆ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಎರಡು ದೊಡ್ಡ ಲೋಹದ ಪಟ್ಟಿಗೆಗಳಾಗಿದ್ದು, ಹೆಚ್ಚಿನ ವಿಮಾನಗಳಲ್ಲಿ ಒಂದನ್ನು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ ಇರಿಸಬೇಕಾಗುತ್ತದೆ. ಈ ರೆಕಾರ್ಡರ್‌ಗಳು ವಿಮಾನ ಹಾರಾಟದ ಬಗ್ಗೆ ಮಾಹಿತಿಯನ್ನು ದಾಖಲಿಸುತ್ತವೆ ಮತ್ತು ವಿಮಾನ ಅಪಘಾತಕ್ಕೆ ಕಾರಣವಾಗುವ ಘಟನೆಗಳನ್ನು ಪುನರ್‌ನಿರ್ಮಿಸಲು ಸಹಕಾರಿಯಾಗುತ್ತವೆ.

ಸಾಮಾನ್ಯವಾಗಿ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಅಹಮದಾಬಾದ್: ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಬ್ಲ್ಯಾಕ್ ಬಾಕ್ಸ್ ಹೆಸರು; ಬಣ್ಣ ಕಿತ್ತಳೆ
ವಿಮಾನದಲ್ಲಿ ಇರಿಸಿರುವ ಈ ಪೆಟ್ಟಿಗೆಗಳನ್ನು ಬ್ಲ್ಯಾಕ್‌ ಬಾಕ್ಸ್ ಎಂದು ಕರೆದರೂ ಸಹ ಇದು ಕಪ್ಪಗೆ ಇರುವುದಿಲ್ಲ. ಈ ಕಪ್ಪು ಪೆಟ್ಟಿಗೆಗಳು ಜ್ವಲಂತ, ಹೆಚ್ಚಿನ ಗೋಚರತೆಗಾಗಿ ಕಿತ್ತಳೆ ಬಣ್ಣದ್ದಾಗಿರುತ್ತವೆ. ಇದರಿಂದಾಗಿ ಕ್ರ್ಯಾಶ್ ಸೈಟ್‌ನಲ್ಲಿ ಅವುಗಳನ್ನು ಹುಡುಕುವ ಸಿಬ್ಬಂದಿಗಳು ಅವುಗಳನ್ನು ಹುಡುಕಲು ಸುಲಭವಾಗಿರುತ್ತದೆ.

ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ ?
ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲ್ಯಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

ಡೇಟಾ ರಿಕವರ್ ಮಾಡುವುದು ಹೇಗೆ?
ಕಪ್ಪು ಪೆಟ್ಟಿಗೆಗಳಿಂದ ರಿಕವರ್‌ ಆದ ಡೇಟಾವನ್ನು ವಿಶ್ಲೇಷಿಸಲು ಸಾಮಾನ್ಯವಾಗಿ 10-15 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಮಧ್ಯೆ, ತನಿಖಾಧಿಕಾರಿಗಳು ಏರ್ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿಯಿಂದ ಹೇಳಿಕೆ ಪಡೆಯುವುದು ಮತ್ತು ಎಟಿಸಿ ಹಾಗೂ ಪೈಲಟ್‌ಗಳ ನಡುವಿನ ಸಂಭಾಷಣೆಯ ರೆಕಾರ್ಡಿಂಗ್‌ಗಳಂತಹ ಇತರ ಸುಳಿವುಗಳಿಗಾಗಿಯೂ ನೋಡುತ್ತಾರೆ ಎಂದು ತಿಳಿದುಬಂದಿದೆ.

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ; ಪ್ರಧಾನಿ ಮೋದಿ ಸಂತಾಪ

Published

on

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌’ನಲ್ಲಿ ನಡೆದ ಈ ದುರಂತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಪ್ರಧಾನಿ ಹೇಳಿದರು. ಅಲ್ಲದೇ ಈ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ X ನಲ್ಲಿ ಬರೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page