Connect with us

ಗತಿಸಿ ಹೋದ ಕಾಲವನ್ನ ಮತ್ತೆ ಮರುಕಳಿಸಿತು ಲಾಕ್ ಡೌನ್..!?

Published

on

ಗತಿಸಿ ಹೋದ ಕಾಲವನ್ನ ಮತ್ತೆ ಮರುಕಳಿಸಿತು ಲಾಕ್ ಡೌನ್..!?

ಬಳ್ಳಾರಿ: ಕೊರೊನಾ ಲಾಕ್ ಡೌನ್ ಎಫೆಕ್ಟ್ ಬಳ್ಳಾರಿ ಪಟ್ಟಣದಲ್ಲಿ ಭಾರೀ ಪ್ರಭಾವ ಬೀರಿದೆ. ಜೊತೆಗೆ ಜನತೆಯನ್ನು ಗತಿಸಿ ಹೋದ ಕಾಲಕ್ಕೂ ಕೊಂಡೊಯ್ಯುತ್ತಿದೆ.

ಅನಿವಾರ್ಯವಾಗಿ ಗತಿಸಿ ಹೋದ ಕಾಲದ ಸನ್ನಿವೇಶಗಳು ಪ್ರಸ್ತುತ ತಲೆಮಾರಿಗೆ ಪರಿಚಯವಾಗುತ್ತಿವೆ. ಅದಕ್ಕೆ ಸಾಕ್ಷಿಯಾಗಿ ನಿಂತಿದೆ ಲಾಕ್ ಡೌನ್.

ಲಾಕ್ ಡೌನ್ ನಿಂದಗಿ ವಿದ್ಯುತ್ ನಿಂದ ನಡೆಯುವ ಹಿಟ್ಟಿನ ಗಿರಣಿ, ಮಿಕ್ಸಿ, ಗ್ರೈಂಡರ್ ಗಳ ಹಾವಳಿಯಿಂದ ಒಳ್ಳು, ಒಣಕೆ, ಬೀಸುವ ಕಲ್ಲುಗಳಿಗೆ ಶಾಕ್ ನೀಡಿವೆ.

ವಿದ್ಯುತ್ ನಿಂದ ಅವುಗಳು ಬಳಕೆಯಾಗದೇ ನೆಲದಲ್ಲಿ ಹೂತು ಹೋಗಿವೆ. ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಬಳಸದಿದ್ದರೂ, ಹಳೆ ಮನೆಗಳಲ್ಲಿ ಮಾತ್ರ ಈಗಲೂ ಕಾಣಸಿಗುತ್ತವೆ.

ಇದೀಗ ಲಾಕ್ ಡೌನ್ ನಿಂದಾಗಿ ಅವು ಮರುಜೀವ ತಾಳುತ್ತಿವೆ. ಪಟ್ಟಣ ಪ್ರದೇಶಗಳಲ್ಲಿ ಅವುಗಳು ನೋಡಲು ಅಸಾಧ್ಯ ಎನ್ನಬಹುದಾಗಿದೆ.

ಆದ್ರೆ ಕೂಡ್ಲಿಗಿ ಪಟ್ಟಣದಲ್ಲಿ ಜನಪ್ರತಿನಿಧಿಯೊಬ್ಬರು ಬೀಸೋ ಕಲ್ಲಿನಲ್ಲಿ ಬೀಸೋ ಮೂಲಕ ಗಮನ ಸೆಳೆದಿದ್ದಾರೆ.

ಲಾಕ್ ಡೌನ್ ಪರಿಣಾಮ ಹಿಟ್ಟಿನ ಗಿರಣಿ ಅಗತ್ಯ ಸನ್ನಿವೇಶದಲ್ಲಿ ಲಭ್ಯವಿಲ್ಲದ ಕಾರಣ, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅಮೃತಮ್ಮ,

ತಮ್ಮ ಮನೆಗೆ ಹೊಂದಿಕೊಂಡಿರುವ ಶ್ರೀ ಊರಮ್ಮದೇವಿ ಅರ್ಚಕರು ಹಾಗೂ ಪತ್ರಕರ್ತ ಬಡಿಗೇರ ನಾಗರಾಜರವರ ಮನೆಯಲ್ಲಿರೋ ಬೀಸೋಕಲ್ಲು ಬಳಸಿ ರಾಗಿ ಬೀಸಿದರು. ಈ ಮೂಲಕ ಗತಿಸಿ ಹೋದ ಕಾಲ ಲಾಕ್ ಡೌನ್ ನಿಂದಾಗಿ ಮತ್ತೆ ಮರುಕಳಿಸಿದಂತಾಗಿದೆ.

 

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page