Connect with us

STATE

ಬಾಯಿ ಚಪ್ಪರಿಸಿಕೊಂಡು ಪಾನಿಪುರಿ ಸವಿದ ಕೊರಿಯಾನ್ ಪುಟಾಣಿಗಳು

Published

on

ಪಾನಿಪುರಿ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ. ಬೀದಿ ಬದಿಯಲ್ಲಿ ಪಾನಿಪುರಿ ತಿನ್ನುವ ಖುಷಿನೇ ಬೇರೆ. ವಿದೇಶಿಗರು ಕೂಡ ಈ ಸ್ಟ್ರೀಟ್ ಫುಡ್ ರುಚಿಗೆ ಕಳೆದೇ ಹೋಗ್ತಾರೆ. ಇದೀಗ ಕೊರಿಯಾನ್ ಪುಟಾಣಿಗಳು ಪಾನಿಪುರಿಯನ್ನು ಬಾಯಿ ಚಪ್ಪರಿಸಿಕೊಂಡು ಸವಿದಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


ವನ್ನಿ ಬ್ರದರ್ಸ್( wonny brothers) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವೀಡಿಯೋದಲ್ಲಿ ಕೊರಿಯನ್ ಪುಟಾಣಿಗಳು ಪಾನಿಪುರಿ ಸವಿಯುವುದನ್ನು ನೋಡಬಹುದು. ಪುರಿಯನ್ನು ಮನೆಯಲ್ಲೇ ತಯಾರಿಸಿ, ಅದಕ್ಕೆ ಆಲೂ ಸ್ಟಫಿಂಗ್ ಮಾಡಿ ಪುರಿಗೆ ಪಾನಿ ಹಾಕಿ ಪುಟಾಣಿಗಳು ಸವಿಯುತ್ತಿರುವುದನ್ನು ನೋಡಬಹುದು.

ಇದನ್ನೂ ಓದಿ : ಕರಾವಳಿಯಲ್ಲಿ ಅದ್ದೂರಿಯಾಗಿ ತೆರೆಕಂಡ ‘ಪಿಲಿಪಂಜ’ ತುಳು ಚಿತ್ರ

ಈ ವೀಡಿಯೋ ಒಂಭತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಮುದ್ದಾಗಿದೆ ಎಂದರೆ, ಮತ್ತೊಬ್ಬರು ನೀವು ರೆಸ್ಟೋರೆಂಟ್ ತೆರೆದರೆ ನಾವೇ ಫಸ್ಟ್ ಕಸ್ಟಮರ್ ಎಂದು ಹೇಳಿದ್ದಾರೆ.

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಭೀಕರ ಅಪಘಾತ; ಟೋಲ್ ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್!

Published

on

ಉತ್ತರ ಪ್ರದೇಶ: ಟೋಲ್‌ ಪ್ಲಾಜಾದಲ್ಲಿ ಕಾಯುತ್ತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಟೋಲ್‌ ಸಿಬ್ಬಂದಿ ಮತ್ತು ಹಲವು ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ಶನಿವಾರ(ಜ.17) ಮಧ್ಯಾಹ್ನ ನಡೆದಿದೆ.


ಮಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದ್ದು, ಫಾಸ್ಟ್​ ಟ್ಯಾಗ್ ವರ್ಕ್​ ಆಗಲಿಲ್ಲ ಎಂಬ ಕಾರಣಕ್ಕೆ ಎರಡು ಕಾರುಗಳು ಟೋಲ್​ನಲ್ಲೇ ನಿಂತಿದ್ದವು. ಟೋಲ್ ಸಿಬ್ಬಂದಿ ಟ್ಯಾಗ್​ ಸ್ಕ್ಯಾನ್ ಮಾಡುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಟ್ರಕ್ ನಿಂತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಎಸ್ ಯುವಿ ಡಿ*ಕ್ಕಿ; 5 ಮಂದಿ ಸಾ*ವು

ಡಿಕ್ಕಿಯ ರಭಸಕ್ಕೆ ಸಿಬ್ಬಂದಿ ಕಾರಿನ ಬಾನೆಟ್ ಮೇಲೆ ಬಿದ್ದಿದ್ದು, ಟ್ರಕ್ ಅವರನ್ನು ಸುಮಾರು 50 ಮೀಟರ್‌ಗಳಿಗಿಂತಲೂ ಹೆಚ್ಚು ದೂರ ಎಳೆದೊಯ್ದಿದೆ. ಪ್ಲಾಜಾದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ಯುವಕ ಸಾ*ವು

Published

on

ಮಂಗಳೂರು/ಬೀದರ್ : ಹಾರಿಸಿದ್ದ ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿಂದ ಬಿ*ದ್ದು ಯುವಕ ಮೃ*ತಪಟ್ಟಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ನಡೆದಿದೆ.

19 ವರ್ಷದ ಶಶಿಕುಮಾ‌ರ್ ಶಿವಾನಂದ ಮೃ*ತ ಯುವಕ. ಶಶಿ ಕುಮಾರ್ ಖಾಸಗಿ ಕಾಲೇಜಿನ ಕಟ್ಟಡದ ಮೇಲೆ ಗಾಳಿಪಟ ಹಾರಿಸಲು ಹೋಗಿದ್ದ. ಗಾಳಿಪಟ ಹಾರಿಸುವಾಗ ದಾರ ತುಂ*ಡಾಗಿದ್ದು. ಈ ವೇಳೆ ಹಾರಿ ಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ, ಕಟ್ಟಡದ ಮೇಲಿಂದ ಬಿ*ದ್ದಿದ್ದಾನೆ.

ಇದನ್ನೂ ಓದಿ : ಗಿಲ್ಲಿ ಫ್ಯಾನ್ಸ್ ಅಬ್ಬರ ಕಂಡು ಬೆಚ್ಚಿಬಿದ್ದ ಬಿಗ್ ಬಾಸ್ ಮನೆ ಮಂದಿ; ಸುದೀಪ್ ಕೊಟ್ಟ ಸುಳಿವೇನು?

ಪರಿಣಾಮ ಸ್ಥಳದಲ್ಲೇ ಕೊನೆ*ಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page