Connect with us

ಮಂಗಳೂರು ವಾರ್ತಾ ಇಲಾಖೆ ಸಭಾಂಗಣದಲ್ಲಿ ಪತ್ರಕರ್ತರಿಗೆ ಕೋವಿಡ್ -19 ಟೆಸ್ಟ್

Published

on

ಮಂಗಳೂರು ವಾರ್ತಾ ಇಲಾಖೆ ಸಭಾಂಗಣದಲ್ಲಿ ಪತ್ರಕರ್ತರಿಗೆ ಕೋವಿಡ್ -19 ಟೆಸ್ಟ್

ಮಂಗಳೂರು: ಬೆಂಗಳೂರು ಹಾಗೂ ಮುಂಬೈಯಲ್ಲಿ ಕೊರೊನಾ ಸೊಂಕಿನ ಬಗ್ಗೆ ಸುದ್ದಿ ಮಾಡುವ ಪತ್ರಕರ್ತರಿಗೂ ಕೊರೊನಾ ಸೊಂಕು ತಗುಲಿದ ಹಿನ್ನೆಲೆಯಲ್ಲಿ,

ರಾಜ್ಯ ಸರ್ಕಾರ ಎಲ್ಲಾ ದೃಶ್ಯ ಮತ್ತು ಮುದ್ರಣ ಮಾದ್ಯಮದ ಪತ್ರಕರ್ತರಿಗೆ ಕೋವಿಡ್ 19 ಪರೀಕ್ಷೆ ನಡೆಸಲು ಸೂಚನೆ ನೀಡಿತ್ತು.

ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಜಿಲ್ಲಾ ವಾರ್ತಾ ಇಲಾಖೆ, ಆರೋಗ್ಯ ಇಲಾಖೆ ಮತ್ತು ವೆನ್ಲಾಕ್ ಕೋವಿಡ್‌ ಆಸ್ಪತ್ರೆಯ ಸಹಕಾರದೊಂದಿಗೆ ಎಲ್ಲಾ ಪತ್ರಕರ್ತರಿಗೆ ಕೋವಿಡ್‌ 19 ಪರೀಕ್ಷೇ ನಡೆಸಲು ಇಂದು (ಎಪ್ರಿಲ್ 29) ಶಿಬಿರವನ್ನು ಆಯೋಜಿತ್ತು.

ಈ ಹಿನ್ನಲೆಯಲ್ಲಿ ನಗರದ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯ ಸಿಬಂದಿಗಳು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸುವ ಕಾರ್ಯ ಅರಂಭಿಸಿದ್ದು, ಪತ್ರಕರ್ತರು ಹೆಚ್ಚಿ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡು ಸಹಕಾರ ನೀಡುತ್ತಿದ್ದಾರೆ.

ಬೆಳಿಗ್ಗೆ ಟಿ.ವಿ. ವಾಹಿನಿಗಳ ವರದಿಗಾರರು, ಛಾಯಾಗ್ರಾಹಕರು, ಹಾಗೂ ಆನ್ ಲೈನ್ ವರದಿಗಾರರಿಗೆ ಪರೀಕ್ಷೆ ನಡೆಸಲಾಯಿತು. ಮಧ್ಯಾಹ್ನದ ವೇಳೆ ಮುದ್ರಣ ಮಾಧ್ಯಮಗಳ ಪತ್ರಕರ್ತರು ಹಾಗೂ ಛಾಯಾಗ್ರಾಹಕರನ್ನು ಪರೀಕ್ಷಿಸಲಾಗುತ್ತದೆ.

ಪತ್ರಕರ್ತರು ತಪಾಸಣೆಗೆ ಆಗಮಿಸುವಾಗ ಕಡ್ಡಾಯವಾಗಿ ತಮ್ಮ‌ ಸಂಸ್ಥೆಯ ಗುರುತಿನ ಚೀಟಿ ಹೊಂದಿರಬೇಕು. ಪತ್ರಕರ್ತರಿಗೆ ಮಾತ್ರ ತಪಾಸಣೆ ಮಾಡಲಾಗುವುದು.

ಅವರ ಕುಟುಂಬ ಸದಸ್ಯರಿಗೆ ಅವಕಾಶ ಇಲ್ಲ. ತಪಾಸಣೆ ಸಂಪೂರ್ಣವಾಗಿ ಆರೋಗ್ಯ ಇಲಾಖೆಯ ಶಿಷ್ಟಾಚಾರದಂತೆ ನಡೆಯಲಿದ್ದು, ಆ ಸಂದರ್ಭದಲ್ಲಿ ನೀಡಲಾಗುವ ಸಲಹೆ- ಸೂಚನೆಗಳನ್ನು ಪಾಲಿಸಬೇಕು.

ಎಲ್ಲರೂ ಮಾಸ್ಕ್‌‌ ಧರಿಸಿ‌ ಬರಬೇಕು.‌ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಎಂಬಿತ್ಯಾದಿ ಸೂಚನೆಗಳನ್ನು ಪ್ರಕಟಣೆ ಮೂಲಕ ಜಿಲ್ಲಾ ಆರೋಗ್ಯಾಧಿಕಾರಿಗಳು ನೀಡಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page