Connect with us

BELTHANGADY

ನೆಲ್ಯಾಡಿ: ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌

Published

on

ನೆಲ್ಯಾಡಿ: ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ನಿನ್ನೆ ಸಂಜೆ ಸಂಭವಿಸಿದೆ.


ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಆಂಬ್ಯುಲೆನ್ಸ್ ನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಆಂಬ್ಯುಲೆನ್ಸ್ ಚಾಲಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

BELTHANGADY

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಬಾಲಕ ಮೃ*ತ್ಯು

Published

on

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿ ಗ್ರಾಮದ ಕುತ್ರೋಟ್ಟು- ಟಿ.ಬಿ.ಕ್ರಾಸ್‌ ರಸ್ತೆಯ ಹೊಕ್ಕಿಲ ಎಂಬಲ್ಲಿ ಭಾನುವಾರ (ನ.16) ನಡೆದಿದೆ.


ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ, ಗಣೇಶ್ ಪುತ್ರ ತನ್ವಿತ್(12) ಮೃ*ತರು ಎಂದು ಗುರುತಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ನಾವೂರಿನ ಶಶಿ ಎಂಬವರ ಆಟೋದಲ್ಲಿ ಹೋಗುತ್ತಿದ್ದಾಗ ಈ ದುರಂತ ನಡೆದಿದೆ. ಚಾಲಕ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದ್ದು, ಗಾಯಗೊಂಡ ತನ್ವಿತ್‌ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ರಸ್ತೆ ಮಧ್ಯೆ ಮೃ*ತಪಟ್ಟಿದ್ದಾರೆ. ಗಾಯಗೊಂಡಿದ್ದ ಇತರೆ ಐದು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಧಾರವಾಡದಲ್ಲಿ ಒಂದೇ ದಿನ ಇಬ್ಬರು ಪೊಲೀಸರು ಸಾ*ವು

ಬೆಳ್ತಂಗಡಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಸೆರೆ

Published

on

ಬೆಳ್ತಂಗಡಿ: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯೊಬ್ಬ ಮನೆ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಜನರ ಕೈಗೆ ಸಿಕ್ಕಿ ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ಮನೆಗೆ ಅಳವಡಿಸಿದ್ದ ಸಿ.ಸಿ ಟಿ.ವಿ. ಈತನ ಬಂಧನಕ್ಕೆ ಸಹಕಾರಿಯಾಗಿದೆ.


ಕೇರಳ ಮೂಲದ, ತಲಪಾಡಿ ನಿವಾಸಿ ಕಿರಣ್ ಬಂಧಿತ ಆರೋಪಿ. ಬೆಳ್ತಂಗಡಿ, ಮಾಲಾಡಿ ಗ್ರಾಮದ ಪ್ರೇಮ ಎಂಬುವವರ ಮನೆಯಿದ್ದು, ಪ್ರಸ್ತುತ ಮಹಿಳೆ ವಿದೇಶದಲ್ಲಿದ್ದಾರೆ. ಆದಿತ್ಯವಾರ ಬೆಳಿಗ್ಗೆ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದಿದ್ದು, ಇದನ್ನು ಪ್ರೇಮರವರ ಮಗಳು ಸಿಸಿಟಿವಿಯಲ್ಲಿ ಗಮನಿಸಿ ಪಕ್ಕದ ಮನೆಯ ಪ್ರಕಾಶ್‌ ಶೆಟ್ಟಿ ಅವರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣವೇ ಮನೆಯ ಬಳಿ ಬಂದು ನೋಡಿದಾಗ ಅಪರಿಚಿತ ವ್ಯಕ್ತಿ ಮನೆಯ ಮೇಲ್ಚಾವಣಿಯಲ್ಲಿ ರಾಡ್ ಹಿಡಿದು ನಿಂತಿರುವುದನ್ನ ನೋಡುತ್ತಾರೆ. ಈ ವೇಳೆ ಅಪರಿಚಿತ ಎಸ್ಕೇಪ್ ಆಗಲು ಯತ್ನಿಸುತ್ತಾನೆ. ಪ್ರಕಾಶ್‌ ಶೆಟ್ಟಿ ಅವರು ಹಿಡಿಯಲು ಪ್ರಯತ್ನಿಸುವಾಗ, ಆತ ರಾಡ್‌ನಿಂದ ಹಲ್ಲೆ ಮಾಡಲು ಮುಂದಾಗುತ್ತಾನೆ. ಬಳಿಕ ಸ್ಥಳೀಯರ ಸಹಾಯದಿಂದ ಕಳ್ಳನನ್ನು ಹಿಡಿಯುತ್ತಾರೆ. ನಂತರ ಆತನನ್ನು ಪುಂಜಾಲಕಟ್ಟೆ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸುತ್ತಾರೆ.

ಇದನ್ನೂ ಓದಿ: ಗ್ರಾಹಕರು ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ ಸಿಕ್ಕಿಬಿದ್ದರೆ ಬಾರ್‌ ಮೇಲೆ ಕಾನೂನು ಕ್ರಮ!

ಪೊಲೀಸರ ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿಯ ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಸೇರಿದಂತೆ, ಒಟ್ಟು 13 ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿದಿರುತ್ತದೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BELTHANGADY

ಜಂಕ್ ಫುಡ್ ತಿನ್ತೀರಾ.. ಹುಷಾರ್..! ತಿಂಡಿ ಪೊಟ್ಟಣದಲ್ಲಿ ಸತ್ತ ಹಾವಿನ ಮರಿ ಪತ್ತೆ..!!

Published

on

ಬೆಳ್ತಂಗಡಿ: ಇದು ಜಂಕ್ ಫುಡ್‌ ತಿನ್ನುವವರು ನೋಡಲೇಬೇಕಾದ ಬೆಚ್ಚಿಬೀಳಿಸುವ ಸ್ಟೋರಿ..ಜಂಕ್ ಫುಡ್‌ ಬಗ್ಗೆ ಎಚ್ಚರಿಕೆಯ ಮಾತುಗಳು ಆಗಿಂದಾಗ್ಗೆ ಕೇಳಿ ಬರುತ್ತವೆ. ಇದೀಗ ಅದಕ್ಕೊಂದು ಸೇರ್ಪಡೆ ಎಂಬಂತೆ ಇದೀಗ ಜಂಕ್ ಫುಡ್ ಪೊಟ್ಟಣದಲ್ಲಿ ಸಣ್ಣ ಹಾವಿನ ಮಾದರಿಯ ರೀತಿಯ ವಸ್ತುವೊಂದು ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮುಂಡಾಜೆಯ ಸೋಮಂತಡ್ಕ ಎಂಬಲ್ಲಿ ಗೂಡಂಗಡಿಯಿಂದ ಖರೀದಿಸಿದ ಹೈದರಾಬಾದ್ ವೆಜ್‌ ಬಿರಿಯಾನಿ- ಜಂಕ್‌ ಫುಡ್ ಪೊಟ್ಟಣದಲ್ಲಿ ಇದು ಪತ್ತೆಯಾಗಿದೆ ಎನ್ನಲಾಗಿದೆ. ಅಬ್ದುಲ್ ಮುಸ್ಲಿಯಾರ್ ಎಂಬವರ ಮಗಳು ಖರೀದಿಸಿದ್ದ ಜಂಕ್ ಫುಡ್ ಪೊಟ್ಟಣವನ್ನು ಬಿಡಿಸಿ ತಿನ್ನುವ ವೇಳೆ ಅದರಲ್ಲಿ ಹಾವಿನ ಮಾದರಿಯ ವಸ್ತು ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ.

ಅಬ್ದುಲ್ ಮುಸ್ಲಿಯಾರ್ ಅವರು ಈ ಬಗ್ಗೆ ಆರೋಗ್ಯ ಇಲಾಖೆಗೆ ದೂರು ನೀಡಿದ್ದು, ಅರೋಗ್ಯ ಇಲಾಖೆಯ ಅಧಿಕಾರಿಗಳು ಹಾವಿನ ಮಾದರಿಯ ವಸ್ತುವನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ತಿಂಡಿ ತಿಂದ‌ ಮಕ್ಕಳ ಆರೋಗ್ಯ ತಪಾಸಣೆಯನ್ನು ವೈದ್ಯರು ನಡೆಸಿದ್ದು, ಸದ್ಯಕ್ಕೆ  ಮಕ್ಕಳ ಆರೋಗ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ ವೈದ್ಯರ ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page