Connect with us

BELTHANGADY

ಬೆಳ್ತಂಗಡಿಯಲ್ಲಿ ಕುದುರೆ ಸವಾರನಿಗೆ ಸರ್ಕಾರಿ ಬಸ್ ಡಿಕ್ಕಿ : ಕುದುರೆ ಸಾವು- ಸವಾರ ಪಾರು..!

Published

on

ಕುದುರೆಯೊಂದಕ್ಕೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿ ಸವಾರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆದಮಲೆ ಎಂಬಲ್ಲಿ ರವಿವಾರ ನಡೆದಿದೆ. 

ಬೆಳ್ತಂಗಡಿ : ಕುದುರೆಯೊಂದಕ್ಕೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನ್ನಪ್ಪಿ ಸವಾರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೆದಮಲೆ ಎಂಬಲ್ಲಿ ರವಿವಾರ ನಡೆದಿದೆ. 

ಘಟನೆಯಲ್ಲಿ ಕುದುರೆ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಉದ್ಯಮಿ ಪಿಲಿಗೂಡು ಮೋನು ಎಂಬವರಿಗೆ ಸೇರಿದ ಕುದುರೆ ಇದಾಗಿದ್ದು, ಇವರ ಪುತ್ರ ಬೆಳಗ್ಗಿನ ಹೊತ್ತು ಕುದುರೆಯಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ರೈಡಿಂಗ್ ಹೊರಟಿದ್ದರು.

ಈ ವೇಳೆ ಈತನ ಪರಿಚಯದ ಅಡಿಕೆ ವರ್ತಕ ಸಚಿನ್ ಎಂಬಾತ ತಾನೊಮ್ಮೆ ಕುದುರೆ ಸವಾರಿ ಮಾಡುತ್ತೇನೆಂದು ಕೇಳಿದ್ದಾರೆ. ಅದರಂತೆ ಸಚಿನ್ ಕುದುರೆ ಸವಾರಿ ಹೊರಟಿದ್ದರು.

ಕುದುರೆ ಓಡುತ್ತಿದ್ದ ಸಂದರ್ಭ ಪೆದಮಲೆ ಬಳಿಯ ತಿರುವಿನಲ್ಲಿ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದರಿಂದ ಸಚಿನ್ ಕುದುರೆಯ ಮೇಲಿನಿಂದ ಎಸೆಯಲ್ಪಟ್ಟಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಢಿಕ್ಕಿಯಿಂದ ತಲೆಗೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಕುದುರೆ ಹೊರಳಾಡಿ ಪ್ರಾಣ ಬಿಟ್ಟಿದೆ.

ಕುದುರೆ ಬಿದ್ದ ಸಂದರ್ಭ ಕುದುರೆಯನ್ನು ಮಡಿಲಲ್ಲಿ ಮಲಗಿಸಿ ಆರೈಕೆ ಮಾಡುತ್ತಿದ್ದ ಕುದುರೆಯ ಯಜಮಾನನ ಪುತ್ರನ ಅಳು ಸ್ಥಳದಲ್ಲಿದ್ದವರ ಕಣ್ಣಲ್ಲೂ ಕಣ್ಣೀರು ಭರಿಸಿತು.

ಸಚಿನ್ ಬಳಿ ಕೂಡಾ ಕುದುರೆಯೊಂದಿದ್ದು, ಅವರು ಕೂಡಾ ಕುದುರೆ ಸವಾರಿಯ ಹವ್ಯಾಸವುಳ್ಳವರಾಗಿದ್ದಾರೆ.

ಮೂಳೆ ಮುರಿತಕ್ಕೊಳಗಾಗಿರುವ ಸಚಿನ್ ಅವರನ್ನು ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page